Karnataka Rains: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮೂರು ದಿನ ಮಳೆ

ಕರ್ನಾಟಕದೆಲ್ಲೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಉತ್ತರ ಕನ್ನಡ ದಕ್ಷಿಣ ಕನ್ನಡ, ಉಡುಪಿ, ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮೂರು ದಿನ ಮಳೆ
ಮಳೆImage Credit source: India Today
Follow us
ನಯನಾ ರಾಜೀವ್
|

Updated on: Jun 25, 2024 | 7:52 AM

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ ದಕ್ಷಿಣ ಕನ್ನಡ, ಉಡುಪಿ, ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆ ಹೆಚ್ಚಾಗಲಿದ್ದು ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಬೀದರ್​, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲೂ ಮಳೆಯಾಗಲಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ತುಮಕೂರು, ವಿಜಯನಗರದಲ್ಲೂ ಮಳೆಯಾಗಲಿದೆ. ಪಣಂಬೂರು, ಭಾಲ್ಕಿ, ಕೊಟ್ಟಿಗೆಹಾರ, ಚಿಕ್ಕಮಗಳೂರು, ಉಡುಪಿ, ಸುಳ್ಯ, ಬಾದಾಮಿ, ದೇವರಹಿಪ್ಪರಗಿ, ಧರ್ಮಸ್ಥಳ, ಮಂಕಿ, ಪುತ್ತೂರು, ಅಂಕೋಲಾ, ರೋಣ, ಭಾಗಮಂಡಲ, ಆಗುಂಬೆ, ಕಾರವಾರ, ಮುಲ್ಕಿ, ಕುಂದಾಪುರ, ಬೆಳ್ತಂಗಡಿ, ಹೊನ್ನಾವರ, ಕಾರ್ಕಳ, ಉಪ್ಪಿನಂಗಡಿ, ನರಗುಂದ, ನಿಪ್ಪಾಣಿ, ಶಾಹಪುರ, ಕುಷ್ಟಗಿ, ಲಿಂಗನಮಕ್ಕಿಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ತಂಪಾದ ಗಾಳಿ ಬೀಸುತ್ತಿದೆ, ಸಂಜೆ ವೇಳೆಗೆ ಮಳೆಯಾಗುವ ನಿರೀಕ್ಷೆ ಇದೆ. ಎಚ್​ಎಎಲ್​ನಲ್ಲಿ 29.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಇಂದಿನಿಂದ ಕರ್ನಾಟಕದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಧಿಕ ಮಳೆ ಸಂಭವ, ರೆಡ್ ಅಲರ್ಟ್​

ಹೊನ್ನಾವರದಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 30.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 32.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 33.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಧಾರವಾಡದಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 31.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ, 21.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 34.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಾಮರಾಜನಗರದಲ್ಲಿ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿಕ್ಕಮಗಳೂರಿನಲ್ಲಿ 26.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ