ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಕಡೆ ನವೆಂಬರ್ 13ರವರೆಗೂ ಮಳೆಯಾಗಲಿದ್ದು, 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ.
ವಿಜಯನಗರ, ಶಿವಮೊಗ್ಗ, ಮೈಸೂರು, ಮಂಡ್ಯ, ಕೊಪ್ಪಳ, ರಾಯಚೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆಯಲ್ಲಿ ಸಾಧಾರಣ ಮಳೆಯಾಗಲಿದೆ.
ಬೆಳ್ತಂಗಡಿ, ಸುಳ್ಯ, ಕುಂದಾಪುರ, ಶಿರಾಲಿ, ಪುತ್ತೂರು, ಮಂಗಳೂರು ವಿಮಾನ ನಿಲ್ದಾಣ, ಧರ್ಮಸ್ಥಳ, ಕೋಟದಲ್ಲಿ ಅತ್ಯಧಿಕ ಮಳೆಯಾಗಿದೆ.
ಕೊಲ್ಲೂರು, ಸೋಮವಾರಪೇಟೆ, ಉಡುಪಿ, ಮಾಣಿ, ಪಣಂಬೂರು, ಹುಂಚದಕಟ್ಟೆ, ಭದ್ರಾವತಿ, ಕಳಸ, ಮುಲ್ಕಿ, ಹೊನ್ನಾಳಿ, ಅರಕಲಗೂಡು, ಸಕಲೇಶಪುರ, ಶೃಂಗೇರಿ, ತ್ಯಾಗರ್ತಿ, ಉಪ್ಪಿನಂಗಡಿ, ಲಿಂಗನಮಕ್ಕಿ, ತಾಳಗುಪ್ಪ, ಶಿವಮೊಗ್ಗ, ಕೊಟ್ಟಿಗೆಹಾರ, ಬಾಳೆಹೊನ್ನೂರು, ಚಿಂತಾಮಣಿ, ದಾವಣಗೆರೆ, ಬೆಳ್ಳೂರು, ಹಾಸನ,ಬೆಂಗಳೂರು ಕೆಂಪೇಗೌಡ ಏರ್ಪೋರ್ಟ್, ಭಾಗಮಂಡಲ, ಹೊಸದುರ್ಗ, ಬೇಲೂರು, ಮಂಗಳೂರು, ಗೇರುಸೊಪ್ಪ, ಹೊನ್ನಾವರ, ಹಿರೆಕೆರೂರು, ರಾಯಲ್ಪಾಡು, ಚಿಕ್ಕಮಗಳೂರು, ಚಿತ್ರದುರ್ಗ, ನಾಯಕನಹಟ್ಟಿ, ತರೀಕೆರೆ, ಜಯಪುರ, ಕಮ್ಮರಡಿ, ಸಿದ್ದಾಪುರ, ಕುಮಟಾ, ಕುರ್ಡಿ, ರಾಯಚೂರು, ಗುಬ್ಬಿ, ತಿಪಟೂರು, ಕೃಷ್ಣರಾಜಪೇಟೆ, ವಿರಾಜಪೇಟೆ, ದೇವನಹಳ್ಳಿ, ಕಡೂರು, ಅಜ್ಜಂಪುರ, ಯುಗಟಿ, ಮೂಡಿಗೆರೆ, ಚನ್ನರಾಯಪಟ್ಟಣ, ಹರಪನಹಳ್ಳಿ, ಮದ್ದೂರು, ಕಂಪ್ಲಿಯಲ್ಲಿ ಮಳೆಯಾಗಿದೆ.
ಮತ್ತಷ್ಟು ಓದಿ: Karnataka Rain: ನವೆಂಬರ್ 12ರವರೆಗೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ
ವಿಜಯಪುರದಲ್ಲಿ 15.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಸೋಮವಾರ ಹೆಚ್ಚು ಮಳೆಯಾಗಿದೆ, ಮಂಗಳವಾರವೂ ಮೋಡಕವಿದ ವಾತಾವರಣ ಮುಂದುವರೆದಿದೆ. ಎಚ್ಎಎಲ್ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ