Karnataka Weather: ಮುಂದಿನ 3 ದಿನ ಕರ್ನಾಟಕದ 12 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​ ಘೋಷಣೆ

ಕರ್ನಾಟಕದಾದ್ಯಂತ ಮುಂಗಾರು ಚುರುಕಾಗಿದ್ದು, ಸೆಪ್ಟೆಂಬರ್ 7 ಹಾಗೂ 8 ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.ಅಷ್ಟೇ ಅಲ್ಲದೆ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಚಾಮರಾಜನಗರ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಹಾಗೆಯೇ ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, […]

Karnataka Weather: ಮುಂದಿನ 3 ದಿನ ಕರ್ನಾಟಕದ 12 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​ ಘೋಷಣೆ
ಮಳೆ
Image Credit source: Udayavani

Updated on: Sep 04, 2023 | 7:50 AM

ಕರ್ನಾಟಕದಾದ್ಯಂತ ಮುಂಗಾರು ಚುರುಕಾಗಿದ್ದು, ಸೆಪ್ಟೆಂಬರ್ 7 ಹಾಗೂ 8 ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.ಅಷ್ಟೇ ಅಲ್ಲದೆ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಚಾಮರಾಜನಗರ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಹಾಗೆಯೇ ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಶಾಹಪುರ, ಚಿಂಚೋಳಿ, ಆಳಂದ, ಅಫಜಲ್​ಪುರ, ದೊಡ್ಡಬಳ್ಳಾಪುರ, ಚಿಂತಾಮಣಿ, ಜೇವರ್ಗಿ, ನೆಲೋಗಿ, ಯಡ್ರಾಮಿ, ಕೆಂಭಾವಿ, ದೇವದುರ್ಗ, ಚಿಕ್ಕಬಳ್ಳಾಪುರ, ಜಾಲಹಳ್ಳಿ, ಕಲಬುರಗಿ, ಗುಬ್ಬಿ, ಬರಗೂರು, ರಾಯಲ್ಪಾಡು, ಕಮಲಾಪುರ, ಕಲಬುರಗಿ, ಹುಣಸಗಿ, ಸಿಂದಗಿ, ಮಾಲೂರು, ಕೋಲಾರ, ಭಾಗಮಂಡಲದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rain: ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ 2 ದಿನ ಭಾರಿ ಮಳೆಯ ಮುನ್ಸೂಚನೆ, ಯೆಲ್ಲೋ ಅಲರ್ಟ್​ ಘೋಷಣೆ

ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಬಹಳಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಅಲ್ಲಲ್ಲಿ ತುಂತುರು ಮಳೆಯಾಗುತ್ತದೆ, ಮಧ್ಯಾಹ್ನದ ಬಳಿಕ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ.

ಎಚ್​ಎಎಲ್​ನಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us