Karnataka Rain: ಏಪ್ರಿಲ್ 10ರವರೆಗೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 10ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆ ದಾಖಲಾಗಿದೆ.

Karnataka Rain: ಏಪ್ರಿಲ್ 10ರವರೆಗೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ
ಮಳೆImage Credit source: Chemwatch
Follow us
|

Updated on: Apr 06, 2023 | 8:00 AM

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 10ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆ ದಾಖಲಾಗಿದೆ. ಇದೇ ರೀತಿ ಬುಧವಾರದಿಂದ ಮುಂದಿನ ಐದು ದಿನವು ಬರಲಿದೆ. ಐದು ದಿನಗಳ ಪೈಕಿ ಏಪ್ರಿಲ್ 8ರವರೆಗೆ ಕರಾವಳಿ ಭಾಗದಲ್ಲಿ ಮಳೆ ತುಸು ಬಿರುಸುಕೊಳ್ಳಲಿದೆ. ಇದನ್ನು ಬಿಟ್ಟರೆ ದಕ್ಷಿಣ ಒಳನಾಡಿನ ಭಾಗದಲ್ಲಿ ಹಗುರ ಇಲ್ಲವೇ ಸಾಧಾರಣವಾಗಿ ಮಳೆ ಬರಬಹುದು.

ಶನಿವಾರ (ಏಪ್ರಿಲ್ 8) ಮಳೆ ಸುರಿಸುವ ಮಾರುತಗಳು ಹೆಚ್ಚು ಚುರುಕಾಗಿರಲಿವೆ. ಹೀಗಾಗಿ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ, ಉತ್ತರ ಒಳನಾಡಿನ ಜಿಲ್ಲೆಗಳಾದ ವಿಜಯಪುರ, ಕಲಬುರಗಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಕೋಲಾರ, ಮೈಸೂರು, ರಾಮನಗರ ಜಿಲ್ಲೆಗಳ ಹಲವು ಕಡೆಗಳಲ್ಲಿ ಗುಡುಗು ಸಹಿತ ಅಧಿಕ ಮಳೆ ಆಗಲಿದೆ.

ದಿಢೀರ್ ಹವಾಮಾನದಲ್ಲಿ ಬದಲಾವಣೆಯಾಗಿದ್ದು, ಕೋಲಾರ, ಮಂಡ್ಯ, ಮಸೂರು, ಚಾಮರಾಜನಗರ ಹಾಗೂ ಕೊಡಗು ಭಾಗದಲ್ಲಿ ಮಳೆರಾಯ ಅಬ್ಬರಿಸಲಿದ್ದಾನೆ. ಬಿರುಗಾಳಿ, ಗುಡುಗು-ಮಿಂಚು ಸಹಿತ ಮಳೆಯಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮತ್ತಷ್ಟು ಓದಿ: Bengaluru Rain: ಬೆಂಗಳೂರಿನಲ್ಲಿ ಮುಂದಿನ 3 ದಿನಗಳ ಕಾಲ ಸುರಿಯಲಿದೆ ಭಾರಿ ಮಳೆ

ಈ ಭಾಗದಲ್ಲಿ ಗಂಟೆಗೆ 30-40 ಕಿ.ಮೀ.ವೇಗದಲ್ಲಿ ಗಾಳಿ ಬೀಸುತ್ತಿದೆ. ಮಾರುತುಗಳು ರಾಜ್ಯದ ಗಡಿ ದಾಟಿ ಹೋದ ನಂತರ ಮಳೆಯಾಗುವ ಸಾಧ್ಯೆತೆಗಳಿವೆ. ಆದರೂ ಜಿಲ್ಲಾಡಳಿತಗಳಿಗೆ ಎಚ್ಚರಿಕೆಯಿಂದಿರಲು ಸೂಚನೆ ನೀಡಲಾಗಿದೆ. ಬೆಂಗಳೂರಿನ ಎಚ್​ಎಎಲ್​ ಹಾಗೂ ಕೆಐಎಎಲ್​ನಲ್ಲಿ ಮಳೆಯಾಗಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮೈಸೂರು, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಬೆಂಗಳೂರಿನಲ್ಲಿ ಸಂಜೆ ವೇಳೆಗೆ ಭಾಗಶಃ ಮೋಡಕವಿದ ವಾತಾವರಣ ನಿರ್ಮಾಣವಾಗಲಿದ್ದು, ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕಲಬುರಗಿಯಲ್ಲಿ 39.9 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ರಾಯಚೂರು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಮಳೆಯಾಗಲಿದೆ.

ಬೆಂಗಳೂರಿನ ಎಚ್​ಎಎಲ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ,20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?