Karnataka Rains: ಬೆಂಗಳೂರು, ಕರಾವಳಿಯ ಎಲ್ಲಾ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ

ಬೆಂಗಳೂರು, ದಕ್ಷಿಣ ಒಳನಾಡು, ಕರಾವಳಿಯ ಎಲ್ಲಾ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

Karnataka Rains: ಬೆಂಗಳೂರು, ಕರಾವಳಿಯ ಎಲ್ಲಾ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ
ಮಳೆ
Follow us
ನಯನಾ ರಾಜೀವ್
|

Updated on: May 09, 2023 | 7:27 AM

ಬೆಂಗಳೂರು, ದಕ್ಷಿಣ ಒಳನಾಡು, ಕರಾವಳಿಯ ಎಲ್ಲಾ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಮೇ 11 ರಂದು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದ ಎಂದು ಹವಾಮಾನ ಇಲಾಖೆ ತಜ್ಞ ಪ್ರಸಾದ್​ ಹೇಳಿದ್ದಾರೆ.

ಬೆಂಗಳೂರು ನಗರ, ಸಿಂದಗಿ, ಬಾದಾಮಿ, ಆಳಂದ, ಚಿಕ್ಕಮಗಳೂರು, ಹುಕ್ಕೇರಿ, ಚಿಂತಾಮಣಿ, ಕಲಬುರಗಿ, ಬಿಳಗಿ, ಗೋಕಾಕ, ಕೋಲಾರ, ದೇವನಹಳ್ಳಿ, ಟಿ ನರಸೀಪುರದಲ್ಲಿ ಮಳೆಯಾಗಿದೆ. ಬೆಂಗಳೂರಲ್ಲಿ ಬೆಳಗ್ಗೆ ಶುಭ್ರ ಆಕಾಶವಿರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.

ಬಂಗಾಳಕೊಲ್ಲಿ ಸಮುದ್ರತೀರದಲ್ಲಿ ಕಾಣಿಸಿಕೊಂಡಿರುವ ಚಂಡಮಾರುತ ಮೋಚಾದಿಂದ ಕರ್ನಾಟಕದ ವಿವಿಧೆಡೆ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರಿನಲ್ಲಿ ಮೇ 12ರವರೆಗೂ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ.

ಮತ್ತಷ್ಟು ಓದಿ: Karnataka Rains: ಬೆಂಗಳೂರು, ಉಡುಪಿ, ರಾಯಚೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆ

ಕಲಬುರಗಿಯಲ್ಲಿ 38.1 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಬೆಂಗಳೂರಿನ ಎಚ್​ಎಎಲ್​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, 28.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ