Karnataka Rain: ರಾಜ್ಯದ ಉತ್ತರ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಬಿರುಗಾಳಿ ಸಹಿತ ಮಳೆ ಸಾಧ್ಯತೆ
ರಾಜ್ಯದ ಉತ್ತರ ಒಳನಾಡು ಹಾಗೂ ಕರಾವಳಿಯ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಚಿಕ್ಕೋಡಿ, ರಾಯಭಾಗ, ಬೈಲಹೊಂಗಲ, ಕಲಘಟಗಿ, ಹಳಿಯಾಳ, ರಾಯಭಾಗ, ಬೈಲಹೊಂಗಲ, ಬೀದರ್, ಭಾಲ್ಕಿ, ನಿಪ್ಪಾಣಿ, ಸದಗಲ, ಇಂಡಿ, ಮಹಾಲಿಂಗಪುರದಲ್ಲಿ ಮಳೆಯಾಗಿದೆ.
ರಾಜ್ಯದ ಉತ್ತರ ಒಳನಾಡು ಹಾಗೂ ಕರಾವಳಿಯ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಚಿಕ್ಕೋಡಿ, ರಾಯಭಾಗ, ಬೈಲಹೊಂಗಲ, ಕಲಘಟಗಿ, ಹಳಿಯಾಳ, ರಾಯಭಾಗ, ಬೈಲಹೊಂಗಲ, ಬೀದರ್, ಭಾಲ್ಕಿ, ನಿಪ್ಪಾಣಿ, ಸದಗಲ, ಇಂಡಿ, ಮಹಾಲಿಂಗಪುರದಲ್ಲಿ ಮಳೆಯಾಗಿದೆ. ಮುಂದಿನ 48 ಗಂಟೆಗಳ ಕಾಲ ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಕಲಬುರಗಿ, ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ, ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.
ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದೆ, ಎಚ್ಎಎಲ್ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕಲಬುರಗಿಯಲ್ಲಿ 40.9 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಳವಾಗಲಿದೆ.
ಮತ್ತಷ್ಟು ಓದಿ:Karnataka Rain: ರಾಜ್ಯದ ಹಲವೆಡೆ ವರ್ಷಧಾರೆ, ಮುಂದಿನ 2 ದಿನ ಬೆಂಗಳೂರು, ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆ
ಕಲ್ಯಾಣ ಕರ್ನಾಟಕದ ಜಿಲ್ಲೆಯೊಂದರಲ್ಲಿ ಉತ್ತಮ ಮಳೆಯಾಗಿದೆ. ಒಂದು ದಿನದ ಅವಧಿಯಲ್ಲಿ 23.5 ಮಿಲೀ ಮೀಟರ್ ಮಳೆ ಸುರಿದಿದೆ. ಕಲ್ಯಾಣ ಕರ್ನಾಟಕದ ಬೀದರ್ ಜಿಲ್ಲೆಯ ಅಮಲಾಪುರದಲ್ಲಿ ಏಪ್ರಿಲ್ 13ರಿಂದ ಏಪ್ರಿಲ್ 14ರ ಒಂದು ದಿನದ ಅವಧಿಯಲ್ಲಿ 23.5 ಮಿಲೀ ಲೀಟರ್ ಮಳೆ ಸುರಿದಿದೆ. ಇದು ಇಡೀ ರಾಜ್ಯದಲ್ಲಿ ಸುರಿದ ಅತಿ ಹೆಚ್ಚು ಮಳೆ ಇದಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ