
ಜೂನ್ 8 ರಂದು ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹಾಸನ, ಕೊಡಗು, ಕೋಲಾರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ತಾಳಿಕೋಟೆ, ಬೈಲಹೊಂಗಲ, ಬಸವನ ಬಾಗೇವಾಡಿ, ಶಿರಾಲಿ, ಮುನಿರಾಬಾದ್, ಬೀದರ್, ಕಾರವಾರ, ಸಿದ್ದಾಪುರ, ನಿಟ್ಟೂರು, ಸೇಡಂ, ನರಗುಂದದಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 41.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಒಳನಾಡಿನ ಕೆಲವೆಡೆ ಬಿರುಗಾಳಿ ಸಹಿತ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಘುವ ಸಾಧ್ಯತೆ ಇದೆ. ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ: ಮುಂದಿನ 24 ಗಮಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಮತ್ತಷ್ಟು ಓದಿ:Karnataka Weather: ಜೂನ್ 9 ರವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ
ಎಚ್ಎಎಲ್ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಕೆಐಎಎಲ್ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮಾನ್ಸೂನ್ ಮಾರುತಗಳು ಕೇರಳದತ್ತ ಆಗಮಿಸುತ್ತಿದ್ದು, ಆಗ್ನೇಯ ಅರೇಬಿಯನ್ ಸಮುದ್ರದ ಮೇಲೆ ಕಡಿಮೆ ಒತ್ತಡದ ಪ್ರದೇಶವಾಗಿ ಅಭಿವೃದ್ಧಿ ಹೊಂದಲಿರುವ ಚಂಡಮಾರುತದ ಪರಿಚಲನೆ ಇನ್ನೆರಡು ದಿನಗಳಲ್ಲಿ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೋಮವಾರ ತಿಳಿಸಿದೆ.
ದಕ್ಷಿಣ ಅರೇಬಿಯನ್ ಸಮುದ್ರದ ಮೇಲೆ ಪಶ್ಚಿಮ ಮಾರುತಗಳು ಸರಾಸರಿ ಸಮುದ್ರ ಮಟ್ಟದಿಂದ 2.1 ಕಿಮೀ ವರೆಗೆ ಚಾಲ್ತಿಯಲ್ಲಿರುತ್ತವೆ. ಆದಾಗ್ಯೂ, ಆಗ್ನೇಯ ಅರೇಬಿಯನ್ ಸಮುದ್ರದ ಮೇಲೆ ಚಂಡಮಾರುತದ ಪರಿಚಲನೆಯಿಂದಾಗಿ, ಮೋಡದ ದ್ರವ್ಯರಾಶಿಯು ಹೆಚ್ಚು ಸಂಘಟಿತವಾಗಿದೆ ಮತ್ತು ಅದೇ ಪ್ರದೇಶದಲ್ಲಿ ಕೇಂದ್ರೀಕೃತವಾಗುತ್ತದೆ. ಹೀಗಾಗಿ ಕಳೆದ 24 ಗಂಟೆಗಳಲ್ಲಿ ಕೇರಳ ಕರಾವಳಿಯಲ್ಲಿ ಮೋಡಗಳ ಚಲನೆ ತೀವ್ರವಾಗಿದ್ದು, ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ