Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ರಾಜ್ಯದ ದಕ್ಷಿಣ ಒಳನಾಡಿನ 5 ಜಿಲ್ಲೆಗಳಲ್ಲಿ ಎರಡು ದಿನ ಮಳೆ

ರಾಜ್ಯದ ದಕ್ಷಿಣ ಒಳನಾಡಿನ 5 ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಉತ್ತರ ಒಳನಾಡು, ಕರಾವಳಿಯಲ್ಲಿ ಒಣಹವೆ ಮುಂದುವರೆಯಲಿದೆ.

Karnataka Rains: ರಾಜ್ಯದ ದಕ್ಷಿಣ ಒಳನಾಡಿನ 5 ಜಿಲ್ಲೆಗಳಲ್ಲಿ ಎರಡು ದಿನ ಮಳೆ
ಮಳೆ
Follow us
ನಯನಾ ರಾಜೀವ್
|

Updated on: May 17, 2023 | 7:27 AM

ರಾಜ್ಯದ ದಕ್ಷಿಣ ಒಳನಾಡಿನ 5 ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಉತ್ತರ ಒಳನಾಡು, ಕರಾವಳಿಯಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದೆ, ಎಚ್​ಎಎಲ್​ನಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ, ಕಲಬುರಗಿಯಲ್ಲಿ 40.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಕೇರಳ ಕರಾವಳಿ ತೀರಕ್ಕೆ ಜೂನ್‌ 1ರ ವೇಳೆಗೆ ಮುಂಗಾರು ಪ್ರವೇಶವಾಗುತ್ತದೆ. ಆದರೆ ಈ ಬಾರಿ ನಾಲ್ಕು ದಿನ ತಡವಾಗಿ ಮುಂಗಾರು ಮಾರುತಗಳು ಕೇರಳ ಕರಾವಳಿಗೆ ಪ್ರವೇಶಿಸಲಿವೆ. ಇದರಿಂದ ಮುಂಗಾರು ಮಳೆಯ ಆರಂಭ ಒಂದು ವಾರ ವಿಳಂಬವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಮತ್ತಷ್ಟು ಓದಿ: Cyclone Mocha: ಕರ್ನಾಟಕದಲ್ಲಿ ಮೋಕಾ ಚಂಡಮಾರುತ ಎಫೆಕ್ಟ್, ಇನ್ನೂ ಮೂರು ದಿನ ಭಾರೀ ಮಳೆ

ಹವಾಮಾನ ಇಲಾಖೆ ಪ್ರಕಾರ ಮುಂಗಾರು ಮಳೆ ಜೂನ್‌ 4ರಿಂದ ಆರಂಭವಾಗಲಿದ್ದು, ಉತ್ತರಾಭಿಮುಖವಾಗಿ ಮಾರುತಗಳು ಸಂಚರಿಸಲಿವೆ. ನಂತರ ಹಂತ ಹಂತವಾಗಿ ಮಾರುತಗಳು ದೇಶವ್ಯಾಪಿ ಆವರಿಸಿಕೊಂಡು ಮಳೆ ಸುರಿಸಲಿವೆ. ಮುಂಗಾರು ಮಾರುತಗಳ ಆರಂಭದೊಂದಿಗೆ ದೇಶದಲ್ಲಿ ಕೃಷಿ ಚಟುವಟಿಕೆಗಳು ಚುರುಕುಗೊಳ್ಳಲಿವೆ. ಈ ವರ್ಷ ವಾಡಿಕೆಯಂತೆ ಸಾಮಾನ್ಯ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ಕೇರಳ ಪ್ರವೇಶಿಸಿದ ಒಂದು ವಾರದ ಬಳಿಕ ರಾಜ್ಯದಲ್ಲಿ ಪೂರ್ಣವಾಗಿ ಮುಂಗಾರು ಆವರಿಸುವ ಸಾಧ್ಯತೆಯಿದೆ. ಜೂನ್‌ 10ರ ಬಳಿಕ ಹಂತಹಂತವಾಗಿ ಮಳೆಯ ಸಿಂಚನವು ಕರ್ನಾಟಕದ ವಿವಿಧ ಜಿಲ್ಲೆಗಳನ್ನು ವ್ಯಾಪಿಸುವ ನಿರೀಕ್ಷೆಯಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ
‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು ಬಿಡುಗಡೆ ಮಾಡಿದ ಆನೆ; ವಿಡಿಯೋ ಸೂಪರ್
‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು ಬಿಡುಗಡೆ ಮಾಡಿದ ಆನೆ; ವಿಡಿಯೋ ಸೂಪರ್
4 ಪಂದ್ಯಗಳಲ್ಲೂ ಮಾಲೀಕರಿಗೆ ನಿರಾಶೆ ಮೂಡಿಸಿದ ಪಂತ್
4 ಪಂದ್ಯಗಳಲ್ಲೂ ಮಾಲೀಕರಿಗೆ ನಿರಾಶೆ ಮೂಡಿಸಿದ ಪಂತ್
ಜಿಗಣಿಯಲ್ಲಿ ಮನೆಯೊಳಗೆ ನುಗ್ಗಿ ಬಿಂದಾಸಾಗಿ ಮಲಗಿದ ಚಿರತೆ; ಕಂಗಾಲಾದ ಮನೆಮಂದಿ
ಜಿಗಣಿಯಲ್ಲಿ ಮನೆಯೊಳಗೆ ನುಗ್ಗಿ ಬಿಂದಾಸಾಗಿ ಮಲಗಿದ ಚಿರತೆ; ಕಂಗಾಲಾದ ಮನೆಮಂದಿ
ಶಾಸಕರ ಹೆಸರು ಎಫ್​ಐಅರ್​ನಲ್ಲಿ ಬಂದ ನಂತರವೇ ವಿನಯ್ ಅಂತ್ಯ ಸಂಸ್ಕಾರ: ಪ್ರತಾಪ
ಶಾಸಕರ ಹೆಸರು ಎಫ್​ಐಅರ್​ನಲ್ಲಿ ಬಂದ ನಂತರವೇ ವಿನಯ್ ಅಂತ್ಯ ಸಂಸ್ಕಾರ: ಪ್ರತಾಪ
ಮೈಗೆ ದೂರಿನ ಪತ್ರ ಕಟ್ಟಿ ತೆವಳುತ್ತಾ ಸರ್ಕಾರಿ ಕಚೇರಿಗೆ ತೆರಳಿದ ವ್ಯಕ್ತಿ
ಮೈಗೆ ದೂರಿನ ಪತ್ರ ಕಟ್ಟಿ ತೆವಳುತ್ತಾ ಸರ್ಕಾರಿ ಕಚೇರಿಗೆ ತೆರಳಿದ ವ್ಯಕ್ತಿ
ಥೈಲ್ಯಾಂಡ್ ಪ್ರವಾಸ ಮುಗಿಸಿ, ಶ್ರೀಲಂಕಾಗೆ ತೆರಳಿದ ಪ್ರಧಾನಿ ಮೋದಿ
ಥೈಲ್ಯಾಂಡ್ ಪ್ರವಾಸ ಮುಗಿಸಿ, ಶ್ರೀಲಂಕಾಗೆ ತೆರಳಿದ ಪ್ರಧಾನಿ ಮೋದಿ