AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯ ಮುನ್ಸೂಚನೆ

ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rain: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯ ಮುನ್ಸೂಚನೆ
ಮಳೆ
ನಯನಾ ರಾಜೀವ್
|

Updated on: Apr 07, 2023 | 7:32 AM

Share

ಮುಖ್ಯಾಂಶಗಳು

  • ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ
  • ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
  • ಕಲಬುರಗಿಯಲ್ಲಿ 40.7 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ

ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಗದಗ, ಬೆಳಗಾವಿ, ಕೊಪ್ಪಳ, ಹಾವೇರಿ, ಧಾರವಾಡ, ಕಲಬುರಗಿ, ವಿಜಯಪುರ, ಯಾದಗಿರಿ, ಬಾಗಲಕೋಟೆ, ರಾಯಚೂರು ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಬಳ್ಳಾರಿ, ತುಮಕೂರು, ಚಾಮರಾಜನಗರ, ಮೈಸೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ.

ಉತ್ತರ ಒಳನಾಡಿನ ಬೀದರ್ , ಗದಗ, ಕೊಪ್ಪಳ, ಹಾವೇರಿ, ಕಲಬುರಗಿ, ಯಾದಗಿರಿ, ಬಾಗಲಕೋಟೆ, ರಾಯಚೂರು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗಲಿದ್ದು, ಗಾಳಿಯು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ.

ಕಲಬುರಗಿಯಲ್ಲಿ 40.7 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮಧ್ಯಾಹ್ನದಿಂದ ಮೋಡಕವಿದ ವಾತಾವರಣ ನಿರ್ಮಾಣವಾಗಲಿದೆ, ಸಂಜೆ ಅಥವಾ ರಾತ್ರಿ ವೇಳೆ ಗುಡುಗು ಸಹಿತ ಬಹಳಷ್ಟು ಮಳೆಯಾಗುವ ಸಾಧ್ಯತೆ ಇದೆ.

ಎಚ್​ಎಎಲ್​ನಲ್ಲಿ 33.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ