ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಗದಗ, ಬೆಳಗಾವಿ, ಕೊಪ್ಪಳ, ಹಾವೇರಿ, ಧಾರವಾಡ, ಕಲಬುರಗಿ, ವಿಜಯಪುರ, ಯಾದಗಿರಿ, ಬಾಗಲಕೋಟೆ, ರಾಯಚೂರು ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಬಳ್ಳಾರಿ, ತುಮಕೂರು, ಚಾಮರಾಜನಗರ, ಮೈಸೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ.
ಉತ್ತರ ಒಳನಾಡಿನ ಬೀದರ್ , ಗದಗ, ಕೊಪ್ಪಳ, ಹಾವೇರಿ, ಕಲಬುರಗಿ, ಯಾದಗಿರಿ, ಬಾಗಲಕೋಟೆ, ರಾಯಚೂರು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗಲಿದ್ದು, ಗಾಳಿಯು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ.
ಕಲಬುರಗಿಯಲ್ಲಿ 40.7 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮಧ್ಯಾಹ್ನದಿಂದ ಮೋಡಕವಿದ ವಾತಾವರಣ ನಿರ್ಮಾಣವಾಗಲಿದೆ, ಸಂಜೆ ಅಥವಾ ರಾತ್ರಿ ವೇಳೆ ಗುಡುಗು ಸಹಿತ ಬಹಳಷ್ಟು ಮಳೆಯಾಗುವ ಸಾಧ್ಯತೆ ಇದೆ.
ಎಚ್ಎಎಲ್ನಲ್ಲಿ 33.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.