Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಕರಾವಳಿ, ಮಲೆನಾಡಿನಲ್ಲಿ ಇಂದು ಗುಡುಗು ಸಹಿತ ಮಳೆ; ಹಲವು ರಾಜ್ಯಗಳಲ್ಲಿ ಆರೆಂಜ್ ಅಲರ್ಟ್​ ಘೋಷಣೆ

Karnataka Weather Today: ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ.

Karnataka Rain: ಕರಾವಳಿ, ಮಲೆನಾಡಿನಲ್ಲಿ ಇಂದು ಗುಡುಗು ಸಹಿತ ಮಳೆ; ಹಲವು ರಾಜ್ಯಗಳಲ್ಲಿ ಆರೆಂಜ್ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಮಳೆ (ಸಂಗ್ರಹ ಚಿತ್ರ)
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Apr 11, 2022 | 5:50 AM

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಯಲ್ಲಿ ಇಂದು ಮಳೆ ಮುಂದುವರೆಯಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಶಿವಮೊಗ್ಗ, ದಾವಣಗೆರೆ, ಬೆಂಗಳೂರು, ಮೈಸೂರು, ಹಾಸನದಲ್ಲಿ ಗುಡುಗು ಸಹಿತ ಮಳೆಯ ಆರ್ಭಟ (Heavy Rainfall) ಉಂಟಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಘೋಷಿಸಿದೆ. ಇಂದು ಕೊಡಗು, ಆಗುಂಬೆ, ತೀರ್ಥಹಳ್ಳಿ, ಹೊಸನಗರ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆ, ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಉತ್ತರ ಕರ್ನಾಟಕದಲ್ಲೂ ಭಾರೀ ಮಳೆಯಾಗುತ್ತಿದ್ದು, ಇನ್ನೆರಡು ದಿನ ಉತ್ತರ ಒಳನಾಡಿನಲ್ಲಿ ವರುಣನ ಆರ್ಭಟ ಮುಂದುವರೆಯಲಿದೆ. ಇಂದು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ, ಉಡುಪಿ, ಶಿವಮೊಗ್ಗ, ಹಾಸನ, ಮೈಸೂರು, ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಸಾಕಷ್ಟು ಮಳೆ ಆಗಲಿದೆ ಎನ್ನಲಾಗಿದೆ. ಇಂದು ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಉತ್ತರಕನ್ನಡ, ಬೆಂಗಳೂರು, ಮೈಸೂರು, ಕೊಡಗು, ಹಾಸನ, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇಂದು ಅರುಣಾಚಲ ಪ್ರದೇಶ, ಹಿಮಾಲಯ ಪ್ರದೇಶ, ಸಿಕ್ಕಿಂ, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಚದುರಿದಂತೆ ಮಳೆಯಾಗಲಿದೆ. ನಾಗಾಲ್ಯಾಂಡ್, ಮಣಿಪುರ, ತ್ರಿಪುರದಲ್ಲಿಯೂ ಸಾಧಾರಣ ಮಳೆಯಾಗಲಿದೆ. ಮುಂದಿನ ಒಂದೆರಡು ದಿನಗಳಲ್ಲಿ ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರ ಪ್ರದೇಶ ಮತ್ತು ಲಕ್ಷದ್ವೀಪದ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತದೆ. ಇಂದು ಉತ್ತರ ಶ್ರೀಲಂಕಾದ ಪೂರ್ವ ಕರಾವಳಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಇದರ ಪರಿಣಾಮ ಕೇರಳದ ಕರಾವಳಿಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

ಇಂದು (ಏ. 11) ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಮುಂದಿನ 4 ದಿನಗಳಲ್ಲಿ ಮಳೆಯಾಗಬಹುದು. ಏಪ್ರಿಲ್ 14ರವರೆಗೆ ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಏಪ್ರಿಲ್ 13 ಮತ್ತು 14ರಂದು ಅರುಣಾಚಲ ಪ್ರದೇಶ, ನಾಗಾಲ್ಯಾಂಡ್ ಮಣಿಪುರ, ಮಿಜೋರಾಂ ಮತ್ತು ತ್ರಿಪುರದಲ್ಲಿ ಮಳೆಯಾಗಲಿದೆ. ಕೇರಳ- ಮಾಹೆಯಲ್ಲಿ ಗುಡುಗು- ಮಿಂಚು ಸಹಿತ ವ್ಯಾಪಕ ಮಳೆಯಾಗಲಿದೆ. ಮುಂದಿನ 4 ದಿನಗಳವರೆಗೆ ತಮಿಳುನಾಡು-ಪುದುಚೇರಿ-ಕಾರೈಕಲ್, ಲಕ್ಷದ್ವೀಪ ಪ್ರದೇಶ, ಕರಾವಳಿ ಆಂಧ್ರಪ್ರದೇಶ, ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದ ಮಳೆಯಾಗಲಿದೆ. ಇಂದು ತಮಿಳುನಾಡಿನಲ್ಲಿ ಕೂಡ ವ್ಯಾಪಕ ಮಳೆಯಾಗಲಿದೆ.

ಇಂದು ಪಂಜಾಬ್, ಹರಿಯಾಣ, ದೆಹಲಿ, ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ 4 ದಿನಗಳಲ್ಲಿ ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರ, ಛತ್ತೀಸ್​ಗಢ, ಪಂಜಾಬ್, ಹರಿಯಾಣ ಮತ್ತು ದೆಹಲಿಯಲ್ಲಿ ಮಳೆಯಾಗಲಿದೆ. ಏಪ್ರಿಲ್ 14ರವರೆಗೆ ಅಸ್ಸಾಂ ಮತ್ತು ಮೇಘಾಲಯದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಸಿಕ್ಕಿಂ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಏಪ್ರಿಲ್ 13-14ರಂದು ಭಾರೀ ಮಳೆಯಾಗಬಹುದು.

ಇಂದು ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ವ್ಯಾಪಕವಾದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಸಿಕ್ಕಿಂ, ಕೇರಳ ಮತ್ತು ಲಕ್ಷದ್ವೀಪಗಳಲ್ಲಿ ಚದುರಿದ ಮಳೆಯಾಗುವ ನಿರೀಕ್ಷೆಯಿದೆ. ಒಡಿಶಾ, ಛತ್ತೀಸ್‌ಗಢ, ಆಂಧ್ರಪ್ರದೇಶ, ತಮಿಳುನಾಡು, ಕರ್ನಾಟಕ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ರಾಜಸ್ಥಾನದ ಮೇಲೆ ಮತ್ತು ಹರಿಯಾಣ, ದೆಹಲಿ ಮತ್ತು ಪಂಜಾಬ್‌ನ ಕೆಲವು ಸ್ಥಳಗಳಲ್ಲಿ ಬಿಸಿಗಾಳಿ ಉಂಟಾಗಲಿದೆ. ಮಧ್ಯಪ್ರದೇಶ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶ, ಆಂತರಿಕ ಮಹಾರಾಷ್ಟ್ರ, ಉತ್ತರ ಗುಜರಾತ್ ಮತ್ತು ಉತ್ತರ ಛತ್ತೀಸ್‌ಗಢದಲ್ಲಿ ಮಳೆಯಾಗಲಿದೆ.

ಇದನ್ನೂ ಓದಿ: Karnataka Rain: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರಿನಲ್ಲಿ ಇನ್ನೆರಡು ದಿನ ಗುಡುಗು ಸಹಿತ ಮಳೆ

Karnataka Rain: ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಇನ್ನೆರಡು ದಿನ ಮಳೆ; ಬೆಂಗಳೂರಿನ ಹವಾಮಾನ ಹೀಗಿದೆ

ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ