Bengaluru Rains: ಬೆಂಗಳೂರು, ಮೈಸೂರು, ಚಿಕ್ಕಬಳ್ಳಾಪುರ, ಶಿವಮೊಗ್ಗ, ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಭಾರೀ ಮಳೆಯಾಗಲಿದ್ದು, ಇಂದು ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ವಾಯುಭಾರ ಕುಸಿತದಿಂದಾಗಿ ಈ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಐಎಂಡಿ (IMD) ತಿಳಿಸಿದೆ. ತಮಿಳುನಾಡಿನಲ್ಲಿ (Tamil Nadu Rain) ಈಗಾಗಲೇ ಭಾರೀ ಮಳೆಯಾಗುತ್ತಿದ್ದು, ಕರ್ನಾಟಕ, ಕೇರಳ ಮತ್ತು ಆಂಧ್ರಪ್ರದೇಶದಲ್ಲಿ ಕೂಡ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ರಾಮನಗರ, ದಾವಣಗೆರೆ, ಮೈಸೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ದಕ್ಷಿಣ ಒಳನಾಡಿನ ಇತರ ಜಿಲ್ಲೆಗಳಿಗೆ ನವೆಂಬರ್ 14 ಮತ್ತು ನವೆಂಬರ್ 15ರಂದು ಹಳದಿ ಅಲರ್ಟ್ ಘೋಷಿಸಲಾಗಿದೆ.
ತೆಲಂಗಾಣ, ಒಡಿಶಾ, ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ವ್ಯಾಪಕವಾದ ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡು, ಮಹಾರಾಷ್ಟ್ರ, ಛತ್ತೀಸ್‌ಗಢ ಮತ್ತು ಲಕ್ಷದ್ವೀಪಗಳಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಮಧ್ಯಪ್ರದೇಶ, ಜಾರ್ಖಂಡ್, ಗಂಗಾ-ಪಶ್ಚಿಮ ಬಂಗಾಳ ಮತ್ತು ಗೋವಾದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ತುಮಕೂರು ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
Source IMD: (1/2)
Orange Alert: Bengaluru Rural, Bengaluru Urban, Chikkaballapura, Chitradurga, Kolar & Tumkur districts has been given Orange alert as on 11.11.2021 at 1000hrs valid till 8:30 AM of 12.11.2021.
Orange alert defines as Isolated Very heavy rains (115.6 to 204.4 mm)— KSNDMC (@KarnatakaSNDMC) November 11, 2021
ಇಂದಿನಿಂದ 4 ದಿನಗಳ ಕಾಲ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಹಲವಾರು ಪ್ರದೇಶಗಳಲ್ಲಿ ಮಳೆ ಸುರಿಯಲಿದೆ. ಮಳೆಯ ಅಬ್ಬರಕ್ಕೆ ತಮಿಳುನಾಡಿನಲ್ಲಿ 14 ಜನರು ಸಾವನ್ನಪ್ಪಿದ್ದಾರೆ. ತಮಿಳುನಾಡಿಗೆ ತಾಗಿಕೊಂಡೇ ಇರುವ ಬೆಂಗಳೂರಿನಲ್ಲೂ ಮಳೆಯ ಪ್ರಭಾವ ಉಂಟಾಗಿದ್ದು, ಮಳೆ ಹಾಗೂ ಮೋಡ ಕವಿದ ವಾತಾವರಣವಿರಲಿದೆ. ಕರ್ನಾಟಕದ ಎಲ್ಲಾ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 4 ದಿನಗಳವರೆಗೆ ಹಗುರದಿಂದ ಸಾಧಾರಣ ಮಳೆಯಾಗುತ್ತದೆ. ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮುಂದಿನ 4 ದಿನಗಳ ಕಾಲ ಮಳೆಯಾಗಲಿದೆ. ಶನಿವಾರದಿಂದ ಸೋಮವಾರದವರೆಗೆ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿಯಲ್ಲಿ ಕೆಲವೆಡೆ ಮಳೆಯಾಗುವ ನಿರೀಕ್ಷೆಯಿದೆ.
ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗುವ ನಿರೀಕ್ಷೆಯಿದೆ. ಇಂದು ಮತ್ತು ನಾಳೆ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಸೇರಿದಂತೆ ಪಶ್ಚಿಮ ಘಟ್ಟದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿರುವುದರಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಿಗೆ ಮತ್ತು ರಾಮನಗರ, ದಾವಣಗೆರೆ, ಮೈಸೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ದಕ್ಷಿಣ ಒಳನಾಡಿನ ಇತರ ಜಿಲ್ಲೆಗಳಿಗೆ ನವೆಂಬರ್ 14 ಮತ್ತು ನವೆಂಬರ್ 15 ರಂದು ಹಳದಿ ಅಲರ್ಟ್ ಘೋಷಿಸಲಾಗಿದೆ.
Source IMD: (1/2)
Orange Alert: Bengaluru Rural, Bengaluru Urban, Chikkaballapura, Chitradurga, Kolar & Tumkur districts has been given Orange alert as on 11.11.2021 at 1000hrs valid till 8:30 AM of 12.11.2021.
Orange alert defines as Isolated Very heavy rains (115.6 to 204.4 mm)— KSNDMC (@KarnatakaSNDMC) November 11, 2021
ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ವ್ಯಾಪಕವಾಗಿ ಹಗುರದಿಂದ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ ತಿಂಗಳಿನಲ್ಲಿ ಕರ್ನಾಟಕದಾದ್ಯಂತ ಮಳೆಗೆ 21 ಜನರು ಸಾವನ್ನಪ್ಪಿದ್ದರು. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಆಂಧ್ರಪ್ರದೇಶದ ದಕ್ಷಿಣ ಭಾಗ ಹಾಗೂ ಚೆನ್ನೈ ಸೇರಿದಂತೆ ತಮಿಳುನಾಡಿನ ಕೆಲ ಭಾಗಗಳಲ್ಲಿ ವಾಯುಭಾರ ಕುಸಿತ ಉಂಟಾಗಲಿದೆ. ತಮಿಳುನಾಡಿನಲ್ಲಿ ಮಳೆಯ ಅಬ್ಬರ ವಿಪರೀತ ಹೆಚ್ಚಾಗಲಿದೆ.
ಇಂದಿನಿಂದ ನವೆಂಬರ್ 15ರವರೆಗೆ ಭಾರೀ ಮಳೆ ದಾಖಲಾಗಲಿದೆ. ವಿಶೇಷವಾಗಿ ದಕ್ಷಿಣ ಕರ್ನಾಟಕದ ಪೂರ್ವ ಭಾಗದ ಜಿಲ್ಲೆಗಳಾದ ಚಿತ್ರದುರ್ಗ, ತುಮಕೂರು ಮತ್ತು ಕೋಲಾರಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ ಕೆಲವು ದಿನಗಳ ಕಾಲ ಚಳಿಯ ವಾತಾವರಣ ದಾಖಲಾಗಲಿದೆ. ಇದಲ್ಲದೆ, ಸೋಮವಾರದವರೆಗೆ ರಾಜ್ಯ ರಾಜಧಾನಿಯಲ್ಲಿ ಭಾರೀ ಮಳೆಯನ್ನು ನಿರೀಕ್ಷಿಸಬಹುದು. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಆಕಾಶದಲ್ಲಿ ಮೋಡ ಕವಿದ ವಾತಾವರಣವಿದೆ.
ಇದನ್ನೂ ಓದಿ: Bengaluru Rain: ಬೆಂಗಳೂರಿನಲ್ಲಿ ನ. 15ರವರೆಗೂ ಭಾರೀ ಮಳೆ; ಕೊರೆವ ಚಳಿಗೆ ಸಿಲಿಕಾನ್ ಸಿಟಿ ಗಡಗಡ