Karnataka Rain: ಬೆಂಗಳೂರು, ಕರಾವಳಿ, ಮಲೆನಾಡಿನಲ್ಲಿ ಇಂದು ಗುಡುಗು ಸಹಿತ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

Karnataka Weather Today: ಕರ್ನಾಟಕದ ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಕೋಲಾರ, ಮೈಸೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಮಳೆ ಹೆಚ್ಚಾಗಲಿದೆ.

Karnataka Rain: ಬೆಂಗಳೂರು, ಕರಾವಳಿ, ಮಲೆನಾಡಿನಲ್ಲಿ ಇಂದು ಗುಡುಗು ಸಹಿತ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ
ಮಳೆ
Edited By:

Updated on: Aug 27, 2022 | 5:54 AM

Weather Today: ಬೆಂಗಳೂರು: ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದಲ್ಲಿ ಮಳೆ (Karnataka Rains) ಹೆಚ್ಚಾಗಿದೆ. ಇನ್ನು ಒಂದು ವಾರ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ. ಕರ್ನಾಟಕ ಮಾತ್ರವಲ್ಲದೆ ನೆರೆಯ ರಾಜ್ಯಗಳಲ್ಲೂ ಮಳೆಯ ಅಬ್ಬರ ಜೋರಾಗಿದೆ. ಬೆಂಗಳೂರಿನಲ್ಲೂ ಕಳೆದ 2 ದಿನಗಳಿಂದ ಮಳೆ ಹೆಚ್ಚಾಗಿದೆ. ಇಂದಿನಿಂದ ಆಗಸ್ಟ್​ 31ರವರೆಗೂ ಕರ್ನಾಟಕದ ಬೆಂಗಳೂರು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕದ ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಕೋಲಾರ, ಮೈಸೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಾರಿಯ ಗಣೇಶ ಚತುರ್ಥಿಯವರೆಗೂ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಲಕ್ಷಣಗಳಿವೆ.

ಕರ್ನಾಟಕದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕರ್ನಾಟಕದಲ್ಲಿ ಇಂದು ಭಾರೀ ಮಳೆ ಸುರಿಯುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಇದನ್ನೂ ಓದಿ: Karnataka Rain: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಆ. 31ರವರೆಗೂ ಭಾರೀ ಮಳೆ

ಇಂದು ಯಾವ ರಾಜ್ಯಗಳಲ್ಲಿ ಮಳೆ?:
ಇಂದು ಕರ್ನಾಟಕ ಮಾತ್ರವಲ್ಲದೆ ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಅತಿ ಹೆಚ್ಚು ಮಳೆ ಬೀಳುವ ನಿರೀಕ್ಷೆಯಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭಾರೀ ಮಳೆಯಾಗಲಿದೆ. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ, ಸಿಕ್ಕಿಂ, ಪೂರ್ವ ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಕೇರಳ, ಮಾಹೆ ಮತ್ತು ಲಕ್ಷದ್ವೀಪ, ಒಡಿಶಾ, ಬಿಹಾರ, ಉತ್ತರ ಪ್ರದೇಶ, ಉತ್ತರಾಖಂಡ, ಕೊಂಕಣ, ಗೋವಾ, ವಿದರ್ಭ, ರಾಯಲಸೀಮಾ, ತಮಿಳುನಾಡು, ಪುದುಚೇರಿ, ಕಾರೈಕಲ್, ಜಾರ್ಖಂಡ್, ಹಿಮಾಚಲ ಪ್ರದೇಶ, ಮಧ್ಯಪ್ರದೇಶ, ಆಂಧ್ರ ಪ್ರದೇಶ ಮತ್ತು ಯಾನಂನಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗುವ ಮುನ್ಸೂಚನೆ ಇದೆ.

ಪಶ್ಚಿಮ ಉತ್ತರ ಪ್ರದೇಶ, ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್, ಜಮ್ಮು ಮತ್ತು ಕಾಶ್ಮೀರ, ಲಡಾಖ್, ರಾಜಸ್ಥಾನ, ಗುಜರಾತ್, ಮಧ್ಯ ಮಹಾರಾಷ್ಟ್ರ ಮತ್ತು ಮರಾಠವಾಡದಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

TV9 Web

TV9 Kannada

Read More
Loading...
Unable to load recommendations.
Follow Us