AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಕರ್ನಾಟಕದ ಹಲವೆಡೆ ಸುರಿದ ಮಳೆ, ಯಾದಗಿರಿ ಮೇಲೆ ಬೀರದ ವರುಣನ ಕೃಪೆ

Karnataka Weather Forecast: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇಂದು ಮಳೆಯಾಗಿದ್ದು, ಕೆಲವೆಡೆ ಮರಗಳು ಧರೆಗುರುವಳಿವೆ. ಆದರೆ ಯಾದಗಿರಿಯಲ್ಲಿ ಮಾತ್ರ ಮಳೆ ಅಭಾವದಿಂದ ರೈತರು ಸಂಕಷ್ಟ ಎದುರಿಸುವಂತಾಗಿದೆ.

Karnataka Rain: ಕರ್ನಾಟಕದ ಹಲವೆಡೆ ಸುರಿದ ಮಳೆ, ಯಾದಗಿರಿ ಮೇಲೆ ಬೀರದ ವರುಣನ ಕೃಪೆ
ಹಳೇ ಹೈಗ್ರೌಂಡ್ಸ್‌ ಪೊಲೀಸ್ ಠಾಣೆ ಎದುರು ಕಾರಿನ ಮೇಲೆ ಮುರಿದುಬಿದ್ದ ಮರದ ಕೊಂಬೆ
Jagadisha B
| Updated By: Rakesh Nayak Manchi|

Updated on: Jul 14, 2023 | 8:58 PM

Share

ಬೆಂಗಳೂರು, ಜುಲೈ 14: ಬೆಂಗಳೂರು (Bengaluru Rain) ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇಂದು ಮಳೆಯಾಗಿದ್ದು (Karnataka Rain), ಕೆಲವೆಡೆ ಮರಗಳು ಧರೆಗುರುವಳಿವೆ. ಅಲ್ಲದೆ, ಜುಲೈ 16ರ ವರೆಗೆ ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಹಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದರೆ ಯಾದಗಿರಿಯಲ್ಲಿ ಮಾತ್ರ ಮಳೆ ಅಭಾವದಿಂದ ರೈತರು ಸಂಕಷ್ಟ ಎದುರಿಸುವಂತಾಗಿದೆ. ನಮ್ಮ ಜಿಲ್ಲೆಯಗೆ ವರುಣ ದೇವನ ಕೃಪೆ ಯಾವಾಗ ಆಗಲಿದೆ ಎಂದು ಅನ್ನದಾತರು ಯೋಚಿಸುತ್ತಿದ್ದಾರೆ.

ಮರದ ಕೊಂಬೆ ಬಿದ್ದು ಐದು ಕಾರು, ಎರಡು ಬೈಕ್​ಗಳು ಜಖಂಗೊಂಡ ಘಟನೆ ಬೆಂಗಳೂರು ನಗರದ ಹಳೇ ಹೈಗ್ರೌಂಡ್ಸ್‌ ಪೊಲೀಸ್ ಠಾಣೆ ಎದುರು ನಡೆದಿದೆ. ಚಲಿಸುತ್ತಿದ್ದ ವಾಹನಗಳ ಮೇಲೆ ಮರದ ಕೊಂಬೆ ಮುರಿದುಬಿದ್ದಿದ್ದು, ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಾಜಶೇಖರ್‌ಗೆ ಗಂಭೀರ ಗಾಯಗಳಾಗಿವೆ. ಈತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮರದ ಕೊಂಬೆ ಮುರಿದು ಬಿದ್ದ ಪರಿಣಾಮ ಕನ್ನಿಂಗ್‌ಹ್ಯಾಮ್‌ ರಸ್ತೆಯಲ್ಲಿ ಟ್ರಾಫಿಕ್‌ಜಾಮ್‌ ಉಂಟಾಗಿದ್ದು, ನಂತರ ಸಂಚಾರಿ ಪೊಲೀಸರು ವಾಹನಗಳ ಮಾರ್ಗ ಬದಲಾಯಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ವಿಜಯನಗರದಲ್ಲಿ ಕಾರಿನ ಮೇಲೆ ಬಿದ್ದ ಮರದ ಕೊಂಬೆ

ಸಾಯಂಕಾಲ ಸುರಿದ ಜಡಿ ಮಳೆ, ಬೀಸಿದ ಗಾಳಿಗೆ ಮರದ ಕೊಂಬೆ ಮುರಿದುಬಿದ್ದು ಕಾರು ಜಖಂಗೊಂಡ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯ ಮೇನ್ ಬಜಾರ್‌ನಲ್ಲಿ ನಡೆದಿದೆ. ಅದೃಷ್ಟವಶಾತ್‌ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಮರದ ಕೊಂಬೆ ಬಿದ್ದ ರಭಸಕ್ಕೆ ಕಾರಿನ ಗ್ಲಾಸ್ ಮತ್ತು ಒಂದು ಭಾಗ ಜಖಂಗೊಂಡಿದೆ.

ಯಾದಗಿರಿ ಜಿಲ್ಲೆಗೆ ಕೈಕೊಟ್ಟ ವರುಣದೇವ

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ವರುಣ ದೇವನ ಕೃಪೆಯಾಗಿದ್ದರೂ ಯಾದಗಿರಿ ಮೇಲೆ ಆಗಿಲ್ಲ. ಮಳೆ ಬರಬಹುದು ಎಂದು ಭಾವಿಸಿ ಬಿತ್ತನೆ ಮಾಡಿದ ರೈತರು ಇದೀಗ ಮಳೆ ಕೈಕೊಟ್ಟ ಹಿನ್ನೆಲೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೃಷಿಯನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿರುವ ರೈತರು ಟ್ಯಾಕ್ಟರ್ ನೀರಿನ ಮೊರೆ ಹೋಗಿದ್ದಾರೆ. ಪ್ರತಿ ದಿನ 10 ರಿಂದ 15 ಟ್ಯಾಂಕರ್ ನೀರು ತಂದು ಬೆಳೆಗೆ ಹಾಯಿಸುತ್ತಿದ್ದಾರೆ. ಇದಕ್ಕೆ ಪ್ರತಿದಿನ 2 ಸಾವಿರ ರೂ. ವ್ಯಯಿಸುತ್ತಿದ್ದಾರೆ.

ಇದನ್ನೂ ಓದಿ: Karnataka Rains: ಕರಾವಳಿ ಕರ್ನಾಟಕಕ್ಕೆ ಆರೆಂಜ್ ಅಲರ್ಟ್; ಬೆಂಗಳೂರಿನಲ್ಲಿ ಸಾಧಾರಣ ಮಳೆ ಸಾಧ್ಯತೆ

ಜಿಲ್ಲೆಯ ವಡಗೇರ ತಾಲೂಕಿನ ಉಳ್ಳೇಸುಗುರ ತಾಂಡದ ಬಲದೇವ ನಾಯ್ಕ್ ಅವರು ತಮ್ಮ 24 ಎಕರೆ ಜಮೀನಿನಲ್ಲಿ ಬೆಳೆದ ಹತ್ತಿಗೆ ಟ್ಯಾಂಕರ್ ನೀರು ಬಳಕೆ ಮಾಡುತ್ತಿದ್ದಾರೆ. ಎಕರೆಗೆ ಸಾವಿರಾರು ರೂಪಾಯಿ ಖರ್ಚು ಮಾಡಿ ಮೂರು ಬಾರಿ ಬಿತ್ತನೆ ಮಾಡಿದ ಬಳಿಕ ಹತ್ತಿ ಬೀಜ ಮೊಳಕೆಯೊಡೆದಿದೆ. ಆದರೆ ಈಗ ಮಳೆ ಕೊರತೆಯಿಂದಾಗಿ ಬೆಳೆ ಒಣಗುತ್ತಿದ್ದಕ್ಕೆ ಟ್ಯಾಂಕರ್ ನೀರು ಬಳಕೆ ಮಾಡುತ್ತಿದ್ದಾರೆ.

ಉತ್ತರ ಕನ್ನಡದಲ್ಲಿ ಮತ್ತೆ ಮಳೆಯಬ್ಬರ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮೂರು ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆ ಇದೀಗ ಮತ್ತೆ ಅಬ್ಬರಿಸಲು ಆರಂಭಿಸಿದೆ. ಕಾರವಾರ, ಅಂಕೋಲ, ಹೊನ್ನಾವರ, ಭಟ್ಕಳ, ಕುಮಟಾದಲ್ಲಿ ಭಾರೀ ಮಳೆಯಾಗಿದ್ದು, ಮುಂದಿನ ಐದು ದಿನಗಳ ಕಾಲ ಜಿಲ್ಲಾದ್ಯಂತ ಮಳೆ ಮುಂದುವರಿಯಲಿದೆ. ಗುಡ್ಡ ಕುಸಿತ ಸಾಧ್ಯತೆ ಇರುವ ಸ್ಥಳದಲ್ಲಿ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಸರಕಾರಿ ಶಾಲೆಗೆ ನುಗ್ಗಿದ ಮಳೆ ನೀರು

ಸುರಿದ ಭಾರೀ ಮಳೆಗೆ ನೀರು ಸರಕಾರಿ ಶಾಲೆಗೆ ನುಗ್ಗಿದ ಘಟನೆ ಗದಗ ತಾಲೂಕಿನ ಕಣಗಿನಹಾಳ ಗ್ರಾಮದಲ್ಲಿ ನಡೆದಿದೆ. ಹಳ್ಳ ತುಂಬಿದ ಹಿನ್ನೆಲೆ ನೀರು ಶಾಲೆಗೆ ನುಗ್ಗಿದ್ದು, ಆವರಣ ಕೆಸರುಮಯವಾಗಿದೆ. ಕೆಲವು ತರಗತಿಗಳಲ್ಲೂ ಕೆಸರು ತುಂಬಿಕೊಂಡಿವೆ. ಇದರಿಂದಾಗಿ ಶಾಲಾ ಮಕ್ಕಳಿಗೆ ಹಾಗೂ ಶಿಕ್ಷಕರಿಗೆ ಅಡಚಣೆ ಉಂಟಾಗಿದ್ದು, ಹಳ್ಳದ ನೀರು ಬಾರದಂತೆ ಕ್ರಮ ವಹಿಸುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ಮುಂದಿನ ಎರಡು ದಿನಗಳ ಕಾಲ ರಾಜ್ಯದಲ್ಲಿ ಗುಡುಗು ಸಹಿತ ಮಳೆ

ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಹಲವು ಕಡೆಗಳಲ್ಲಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೆಮ ಕರಾವಳಿಯ ಎಲ್ಲಾ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಒಂದೆರಡು ಕಡೆಗಳಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ, ಬಿರುಗಾಳಿಯ ವೇಗವು 40-45 ಕಿಮೀ ವೇಗದಲ್ಲಿ ಇರುವ ಸಾಧ್ಯತೆ ಹಿನ್ನೆಲೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದ್ದಾರೆ.

ಮುಂದಿನ 48 ಗಂಟೆಗಳ ಕಾಲ ಕರಾವಳಿಯ ಎಲ್ಲಾ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಮಿಂಚು ಗುಡುಗು ಆಗುವ ಸಾಧ್ಯತೆ ಇದ್ದು, ಬಿರುಗಾಳಿಯ ವೇಗವು ಉತ್ತರ ಒಳನಾಡಿನಲ್ಲಿ ಗಂಟೆಗೆ 40-50 ಕಿಮೀ ಹಾಗೂ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗಂಟೆಗೆ 30-40 ಕಿಮೀ ವೇಗದಲ್ಲಿ ಇರುವ ಸಾಧ್ಯತೆ ಇದೆ.

ವರದಿ: ಜಗದೀಶ್ ಬಿ ಬೆಂಗಳೂರು, ವೀರೇಶ್ ದಾನಿ ಬಳ್ಳಾರಿ, ವಿನಾಯಕ್ ಬಡಿಗೇರ್ ಕಾರವಾರ, ಅಮೀನ್ ಯಾದಗಿರಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ