Karnataka Rain: ಬೆಂಗಳೂರು, ಶಿವಮೊಗ್ಗ, ಕೊಡಗು ಸೇರಿ 8 ಜಿಲ್ಲೆಗಳಲ್ಲಿ ಇನ್ನು 3 ದಿನ ಭಾರೀ ಮಳೆ; ಹಳದಿ ಅಲರ್ಟ್ ಘೋಷಣೆ

Bangalore Rains: ಕರ್ನಾಟಕದ ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ಚಿತ್ರದುರ್ಗ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್​ ಘೋಷಿಸಲಾಗಿದೆ.

Karnataka Rain: ಬೆಂಗಳೂರು, ಶಿವಮೊಗ್ಗ, ಕೊಡಗು ಸೇರಿ 8 ಜಿಲ್ಲೆಗಳಲ್ಲಿ ಇನ್ನು 3 ದಿನ ಭಾರೀ ಮಳೆ; ಹಳದಿ ಅಲರ್ಟ್ ಘೋಷಣೆ
ಮಳೆ
Follow us
| Updated By: ಸುಷ್ಮಾ ಚಕ್ರೆ

Updated on: Oct 06, 2022 | 6:22 AM

ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರು (Bengaluru Rains) ಸೇರಿದಂತೆ 8 ಜಿಲ್ಲೆಗಳಲ್ಲಿ ಇಂದಿನಿಂದ 3 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜ್ಯದ ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ಚಿತ್ರದುರ್ಗ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್​ (Yellow Alert) ಘೋಷಿಸಲಾಗಿದೆ.

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಅ. 8ರವರೆಗೆ ಭಾರೀ ಮಳೆಯಾಗಲಿದೆ. ಆದರೆ, ಉತ್ತರ ಕರ್ನಾಟಕದ ಪ್ರದೇಶಗಳಲ್ಲಿ ಮಳೆ ಕಡಿಮೆಯಾಗಲಿದೆ. ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರದಲ್ಲೂ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ.

ಇಂದು ಯಾವ ರಾಜ್ಯಗಳಲ್ಲಿ ಮಳೆ?: ಇಂದಿನಿಂದ ಅಕ್ಟೋಬರ್ 8ರವರೆಗೆ ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅತಿ ಮಳೆ ಬೀಳುವ ಪ್ರದೇಶಗಳಲ್ಲಿರುವ ಜನರು ಎಚ್ಚರಿಕೆಯಿಂದಿರಲು ಸೂಚನೆ ನೀಡಲಾಗಿದೆ. ಮುಂದಿನ ಮೂರು ದಿನ ಒಡಿಶಾ, ಆಂಧ್ರಪ್ರದೇಶದ ಕರಾವಳಿಯಲ್ಲಿ ವರುಣ ಅಬ್ಬರಿಸಲಿದ್ದಾನೆ. ಇದರ ಜೊತೆ ಛತ್ತೀಸ್​​ಗಢ ಮತ್ತು ಮಧ್ಯ ಪ್ರದೇಶದಲ್ಲೂ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.

ಇದನ್ನೂ ಓದಿ: Karnataka Rain: ಬೆಂಗಳೂರು, ಮಲೆನಾಡಿನಲ್ಲಿ ಇಂದು ಕೂಡ ಮಳೆ ಸಾಧ್ಯತೆ; ಉತ್ತರ ಕರ್ನಾಟಕದಲ್ಲಿ ತಗ್ಗಿದ ವರುಣನ ಅಬ್ಬರ

ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಇಂದು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ಆಂಧ್ರಪ್ರದೇಶ, ಯಾನಂ ಮತ್ತು ತೆಲಂಗಾಣದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ, ಸಿಕ್ಕಿಂ, ವಿದರ್ಭ ಮತ್ತು ಕರಾವಳಿ ಕರ್ನಾಟಕದಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಅಸ್ಸಾಂ, ಮೇಘಾಲಯ, ಬಿಹಾರ, ಹರಿಯಾಣ, ಚಂಡೀಗಢ, ದೆಹಲಿ, ಹಿಮಾಚಲ ಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ, ಮರಾಠವಾಡ, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗುವ ನಿರೀಕ್ಷೆಯಿದೆ.

ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗುಜರಾತ್, ಕೊಂಕಣ, ಗೋವಾ ಮತ್ತು ರಾಯಲಸೀಮಾದಲ್ಲಿ ಕೂಡ ಹೆಚ್ಚು ಮಳೆ ಹಾಗೂ ಮಿಂಚಿನ ಸಾಧ್ಯತೆಯಿದೆ. ಲಡಾಖ್​ನಲ್ಲಿ ಹಿಮ ಬೀಳುವ ಸಾಧ್ಯತೆ ಇದೆ. ಉತ್ತರ ಹಿಮಾಲಯ ಪ್ರದೇಶದಲ್ಲಿ ಮುಂಜಾನೆ ದಟ್ಟವಾದ ಮಂಜು ಬೀಳುವ ಸಾಧ್ಯತೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನ್ಯೂಯಾರ್ಕ್​ನಲ್ಲಿ ಟೆಕ್ ಕಂಪನಿಗಳ ಸಿಇಒಗಳ ಜತೆ ಪ್ರಧಾನಿ ಮೋದಿ ಸಭೆ
ನ್ಯೂಯಾರ್ಕ್​ನಲ್ಲಿ ಟೆಕ್ ಕಂಪನಿಗಳ ಸಿಇಒಗಳ ಜತೆ ಪ್ರಧಾನಿ ಮೋದಿ ಸಭೆ
ಮಂತ್ರಾಲಯದಲ್ಲಿ ಪರಿಮಳ ಪ್ರಸಾದ ತಯಾರಿ ಪ್ರಕ್ರಿಯೆ ಹೇಗಿದೆ ಗೊತ್ತಾ?
ಮಂತ್ರಾಲಯದಲ್ಲಿ ಪರಿಮಳ ಪ್ರಸಾದ ತಯಾರಿ ಪ್ರಕ್ರಿಯೆ ಹೇಗಿದೆ ಗೊತ್ತಾ?
ವಿಶ್ವವಿಖ್ಯಾತ ಮೈಸೂರು ದಸರಾ ಕುರಿತು ಜಿಲ್ಲಾಡಳಿತದಿಂದ ವಿಶೇಷ ವಿಡಿಯೋ
ವಿಶ್ವವಿಖ್ಯಾತ ಮೈಸೂರು ದಸರಾ ಕುರಿತು ಜಿಲ್ಲಾಡಳಿತದಿಂದ ವಿಶೇಷ ವಿಡಿಯೋ
ಹೇಗಿತ್ತು ನೋಡಿ ಹರ್ಷಿಕಾ ಪೂಣಚ್ಚ ಬೇಬಿ ಶವರ್; ಯಾರೆಲ್ಲಾ ಬಂದಿದ್ರು?
ಹೇಗಿತ್ತು ನೋಡಿ ಹರ್ಷಿಕಾ ಪೂಣಚ್ಚ ಬೇಬಿ ಶವರ್; ಯಾರೆಲ್ಲಾ ಬಂದಿದ್ರು?
Daily Devotional: ಲಲಿತಾ ಸಹಸ್ರನಾಮದ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಲಲಿತಾ ಸಹಸ್ರನಾಮದ ಮಹತ್ವ ಹಾಗೂ ಫಲ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ 4ನೇ ಸೋಮವಾರದ ದಿನ ಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ 4ನೇ ಸೋಮವಾರದ ದಿನ ಭವಿಷ್ಯ ತಿಳಿಯಿರಿ
PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ