ಬೆಂಗಳೂರು: ಕರ್ನಾಟಕದಲ್ಲಿ ಕಳೆದ ವಾರಾಂತ್ಯದಿಂದ ಮತ್ತೆ ಮಳೆ ಅಬ್ಬರಿಸುತ್ತಿದೆ. ರಾಜ್ಯಾದ್ಯಂತ (Rain in Karnataka) ಇನ್ನೂ ಮೂರ್ನಾಲ್ಕು ದಿನ ಮಳೆಯಾಗುವ ಸಾಧ್ಯತೆಯಿದೆ. ಇಂದಿನಿಂದ 4 ದಿನ ಕರ್ನಾಟಕದ (Karnataka Rains) ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇಂದು ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗಲಿದೆ. ತಮಿಳುನಾಡು, ತೆಲಂಗಾಣದಲ್ಲಿ ಚಂಡಮಾರುತ ಎದ್ದಿರುವ ಕಾರಣ ಕರ್ನಾಟಕದ ಹಲವು ರಾಜ್ಯಗಳಲ್ಲಿ ಇನ್ನು ಕೆಲವು ದಿನ ತುಂತುರು ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮೋಡ ಮುಸುಕಿದ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದಲ್ಲಿ ಈಗಾಗಲೇ ಸಿಡಿಲು ಬಡಿದು ಐವರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಇಂದು ಸಂಜೆಯ ಬಳಿಕ ತುಂತುರು ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರಿನಲ್ಲಿ ಇನ್ನೂ ಒಂದು ವಾರ ಮಳೆ ನಿಲ್ಲುವ ಯಾವುದೇ ಲಕ್ಷಣಗಳಿಲ್ಲ ಎಂದು ಹವಾಮಾನ ಇಲಾಖೆ ಹೇಳಿದೆ. ಕರ್ನಾಟಕವೂ ಸೇರಿದಂತೆ ಭಾರತದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ದಕ್ಷಿಣ ಭಾರತದಲ್ಲಿ ಮುಂದಿನ 4 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಪಂಜಾಬ್ ಹರಿಯಾಣ, ದೆಹಲಿ, ಒಡಿಶಾ, ಪಶ್ಚಿಮ ಬಂಗಾಳ, ಬಿಹಾರ ಹಾಗೂ ಜಾರ್ಖಂಡ್ ರಾಜ್ಯಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಅಸ್ಸಾಂ, ಮೇಘಾಲಯ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
Isolated heavy rainfall likely over Assam-Meghalaya on 19th, 21st, 22nd & 23rd April, 2022.
Thundersquall (wind speed reaching 50-60 kmph) & Hailstorm at isolated places also very likely over Assam-Meghalaya & Manipur-Mizoram on 19th April, 2022. pic.twitter.com/16Dsk4Pxp5— India Meteorological Department (@Indiametdept) April 19, 2022
ಕರ್ನಾಟಕ ಮಾತ್ರವಲ್ಲದೆ ಬೇರೆ ರಾಜ್ಯಗಳಲ್ಲೂ ಮಳೆ ಇನ್ನು ಕೆಲ ದಿನಗಳ ಕಾಲ ಮುಂದುವರೆದಿದೆ, ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಧ್ಯಪ್ರದೇಶ, ಮಹಾರಾಷ್ಟ್ರ ಗುಜರಾತ್‌ನಲ್ಲೂ ಮಳೆಯಾಗಲಿದೆ ಅಂತ ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಳಿದಂತೆ ಪಂಜಾಬ್, ಹರಿಯಾಣ, ದೆಹಲಿ, ರಾಜಸ್ಥಾನ, ಉತ್ತರ ಪ್ರದೇಶಗಳಲ್ಲಿ ಏಪ್ರಿಲ್ ಇನ್ನೆರಡು ದಿನಗಳು ಮೋಡ ಕವಿದ ವಾತವರಣವಿರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ 4 ದಿನಗಳ ಕಾಲ ಕೇರಳದಾದ್ಯಂತ ಸಾಕಷ್ಟು ವ್ಯಾಪಕ ಮಳೆ, ಗುಡುಗು, ಮಿಂಚು ಮತ್ತು ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಈ ಅವಧಿಯಲ್ಲಿ ತಮಿಳುನಾಡು, ಕರ್ನಾಟಕ, ಕರಾವಳಿ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಮಳೆ ಹೆಚ್ಚಾಗಬಹುದು. ಇಂದು ಮೇಘಾಲಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್‌ನಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಎತ್ತರದ ಪ್ರದೇಶಗಳಲ್ಲಿ ಹಿಮಪಾತವೂ ಆಗಲಿದೆ. ಹಿಮಾಚಲ ಪ್ರದೇಶ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಸಾಕಷ್ಟು ವ್ಯಾಪಕವಾದ ಮಳೆ ಮತ್ತು ಗುಡುಗು ಸಹಿತ ಮಳೆಯಾಗಲಿದೆ. ಉತ್ತರಾಖಂಡ, ಸಿಕ್ಕಿಂ, ಪಶ್ಚಿಮ ಬಂಗಾಳ, ಕೇರಳ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರಾಖಂಡದಲ್ಲಿ ಎತ್ತರದ ಪ್ರದೇಶಗಳಲ್ಲಿ ಹಿಮ ಬೀಳುವ ಸಾಧ್ಯತೆ ಇದೆ. ಒಡಿಶಾ, ಜಾರ್ಖಂಡ್, ಬಿಹಾರ, ಉತ್ತರ ಪ್ರದೇಶ, ಪಂಜಾಬ್, ಹರಿಯಾಣ, ದೆಹಲಿ, ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್, ಮಹಾರಾಷ್ಟ್ರ, ಗೋವಾ, ಛತ್ತೀಸ್‌ಗಢ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ಮತ್ತು ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗಲಿದೆ.
ಇದನ್ನೂ ಓದಿ: ಇಂದು ಬೆಂಗಳೂರಿನಲ್ಲಿ ಮಳೆಗೆ ಬಿಡುವು; ಗ್ರಾಮಾಂತರದಲ್ಲಿ ವರುಣನ ಆರ್ಭಟ, ಹಲವು ಕಡೆ ಭಾರಿ ಅನಾಹುತ
ಕರ್ನಾಟಕದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ; ಬೆಂಗಳೂರಿನಲ್ಲಿ ಮತ್ತೆ ಮುಂದುವರೆಯಲಿದೆ ವರುಣನ ಆರ್ಭಟ