Karnataka Rain: ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ; ಬೆಂಗಳೂರು, ಕರಾವಳಿಯಲ್ಲಿ ಹೈ ಅಲರ್ಟ್

Monsoon 2022: ಮುಂದಿನ 3 ದಿನಗಳ ಕಾಲ ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು, ಕೇರಳ, ಲಕ್ಷದ್ವೀಪದಲ್ಲಿ ಗುಡುಗು ಮತ್ತು ಮಿಂಚುಗಳ ಜೊತೆಗೆ ಸಾಧಾರಣ ತೀವ್ರತೆಯ ಮಳೆಯಾಗುವ ಸಾಧ್ಯತೆಯಿದೆ.

Karnataka Rain: ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ; ಬೆಂಗಳೂರು, ಕರಾವಳಿಯಲ್ಲಿ ಹೈ ಅಲರ್ಟ್
ಕರ್ನಾಟಕದಲ್ಲಿ ಮಳೆImage Credit source: Indian Express
Follow us
| Updated By: ಸುಷ್ಮಾ ಚಕ್ರೆ

Updated on: Jun 05, 2022 | 5:54 AM

Bangalore Rains: ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಕರಾವಳಿ ಜಿಲ್ಲೆಗಳು ಮತ್ತು ಬೆಂಗಳೂರಿನಲ್ಲಿ ವರುಣನ ಆರ್ಭಟವಿರಲಿದ್ದು, ಇನ್ನೂ 3 ದಿನ ಹಳದಿ ಅಲರ್ಟ್​ ಘೋಷಣೆ ಮಾಡಲಾಗಿದೆ. ಕರ್ನಾಟಕದಲ್ಲಿ (Karnataka Rainfall) ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇಂದಿನಿಂದ ಜೂನ್‌ 7ರವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ (Bengaluru Rain), ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಹಳದಿ ಅಲರ್ಟ್‌ (Yellow Alert) ಘೋಷಿಸಲಾಗಿದೆ.

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನೂ ನೀಡಲಾಗಿದೆ. ಬೆಂಗಳೂರಿನಲ್ಲಿ ಇಂದು ಸಿಡಿಲು ಮತ್ತು ಗುಡುಗು ಸಹಿತ ಮಳೆಯಾಗಲಿದೆ. ಇಂದು ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಭಾರತದ ದಕ್ಷಿಣದ ರಾಜ್ಯಗಳಲ್ಲಿ ನೈಋತ್ಯ ಮಾನ್ಸೂನ್ ಪ್ರಾರಂಭವಾದಾಗಿನಿಂದ, ಈ ಪ್ರದೇಶದಲ್ಲಿ ಮಳೆಯ ಚಟುವಟಿಕೆಯು ವಿತರಣೆ ಮತ್ತು ತೀವ್ರತೆಯ ದೃಷ್ಟಿಯಿಂದ ಸ್ಥಿರವಾಗಿ ಹೆಚ್ಚಾಗಿದೆ. ಇಂದಿನಿಂದ, ಕರ್ನಾಟಕ ಮತ್ತು ಪಶ್ಚಿಮ ತಮಿಳುನಾಡು, ಕೇರಳದಲ್ಲಿ ಮುಂಗಾರು ಅಬ್ಬರಿಸಲಿದೆ. ಅರೇಬಿಯನ್ ಸಮುದ್ರದಿಂದ ಒಳಬರುವ ಮಾನ್ಸೂನ್ ಪಶ್ಚಿಮ ಮಾರುತಗಳು ಮತ್ತು ಶ್ರೀಲಂಕಾದ ಮೇಲೆ ಚಂಡಮಾರುತದ ಪರಿಚಲನೆಯು ಮೇಲೆ ತಿಳಿಸಿದ ಪ್ರದೇಶಗಳಲ್ಲಿ ಒಟ್ಟಾರೆಯಾಗಿ ಕೆಲವು ತೀವ್ರವಾದ ಮಳೆಯನ್ನು ಸುರಿಯಲು ಸಿದ್ಧವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಸೂಚಿಸಿದೆ.

ಇದನ್ನೂ ಓದಿ
Image
Karnataka Rain: ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ; ಕರಾವಳಿ, ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್​ ಘೋಷಣೆ
Image
Karnataka Rain: ಇಂದಿನಿಂದ 4 ದಿನ ಕರ್ನಾಟಕದಲ್ಲಿ ಭಾರೀ ಮಳೆ; ಬೆಂಗಳೂರು, ಕರಾವಳಿ, ಮಲೆನಾಡಿಗೆ ಹಳದಿ ಅಲರ್ಟ್​
Image
Bengaluru Rain: ಬೆಂಗಳೂರಿನಲ್ಲಿ ಇನ್ನೆರಡು ದಿನ ಭಾರೀ ಮಳೆ; ಹಳದಿ ಅಲರ್ಟ್​ ಘೋಷಣೆ

ಇದನ್ನೂ ಓದಿ: Karnataka Rain: ಇಂದಿನಿಂದ 4 ದಿನ ಕರ್ನಾಟಕದಲ್ಲಿ ಭಾರೀ ಮಳೆ; ಬೆಂಗಳೂರು, ಕರಾವಳಿ, ಮಲೆನಾಡಿಗೆ ಹಳದಿ ಅಲರ್ಟ್​

ಮುಂದಿನ 3 ದಿನಗಳ ಕಾಲ ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು, ಕೇರಳ, ಲಕ್ಷದ್ವೀಪದಲ್ಲಿ ಗುಡುಗು ಮತ್ತು ಮಿಂಚುಗಳ ಜೊತೆಗೆ ಸಾಧಾರಣ ತೀವ್ರತೆಯ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶ, ತೆಲಂಗಾಣ, ಉತ್ತರ ಒಳಭಾಗ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಚದುರಿದ ಮಳೆಯನ್ನು ನಿರೀಕ್ಷಿಸಲಾಗಿದೆ. ಜೂನ್ 8ರಂದು ಕೇರಳ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇದೇ ರೀತಿಯ ಮಳೆ ಬೀಳಬಹುದು.

ಕಳೆದ ಭಾನುವಾರವೇ ಕೇರಳಕ್ಕೆ ಮುಂಗಾರು ಮಳೆ ಪ್ರವೇಶಿಸಿದೆ. ನೈಋತ್ಯ ಮುಂಗಾರು ಮಾರುತಗಳು ಕಳೆದ ಭಾನುವಾರವೇ ಕೇರಳ ಪ್ರವೇಶಿಸಿದ್ದು, ವಾಡಿಕೆಗಿಂತಲೂ ಮೂರು ದಿನ ಮೊದಲೇ ಆಗಮನವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಸಾಮಾನ್ಯವಾಗಿ ಜೂ.1ರಂದು ಮಾನ್ಸೂನ್‌ ಕೇರಳ ಪ್ರವೇಶಿಸುವುದು ವಾಡಿಕೆ. ದಕ್ಷಿಣ ಕರ್ನಾಟಕದ ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ, ಕರಾವಳಿ, ಮಲೆನಾಡು, ಬೆಂಗಳೂರಿನಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕರ್ನಾಟಕದ ಬಾಗಲಕೋಟೆ, ಬೀದರ್, ಗದಗ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಮಳೆಯಿಂದ ಯಾವುದೇ ತೊಂದರೆಯಾಗುವುದಿಲ್ಲ. ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಹಾಸನ, ಶಿವಮೊಗ್ಗ, ರಾಮನಗರ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ದಕ್ಷಿಣ ಕರ್ನಾಟಕದ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.

ಇನ್ನಷ್ಟು ಮಳೆಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ