Karnataka Rains: ಚಿಕ್ಕಮಗಳೂರಿಗೆ ಆರೆಂಜ್ ಅಲರ್ಟ್, ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಧಾರಾಕಾರ ಮಳೆ
ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕಡಿಮೆಯಾಗುವ ಯಾವ ಲಕ್ಷಣಗಳೂ ಗೋಚರಿಸುತ್ತಿಲ್ಲ, ದಿನೇ ದಿನೆ ಮಳೆ ಹೆಚ್ಚಾಗುತ್ತಲೇ ಇದೆ. ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

ಬೆಂಗಳೂರು, ಅಕ್ಟೋಬರ್ 10: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ(Rain) ಚುರುಕಾಗಿದೆ. ಕಳೆದ ಎರಡು ದಿನಗಳಿಂದ ಸಾಕಷ್ಟು ಕಡೆ ಮಳೆಯಾಗುತ್ತಿದೆ. ಬೆಂಗಳೂರಿನಲ್ಲೂ ಗುರುವಾರ ಗುಡುಗು ಸಹಿತ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆದಿದೆ. ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ,
ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ. ನಾಯಕನಹಟ್ಟಿ, ಭಮರಸಾಗರ, ಚಿತ್ರದುರ್ಗ, ದಾವಣಗೆರೆ, ಥೊಂಡೇಭಾವಿ, ಕಳಸ, ಅಣ್ಣಿಗೆರೆ, ಗದಗ, ಕೃಷ್ಣರಾಜಸಾಗರ, ಶೃಂಗೇರಿ, ಬೇಲೂರು, ಚನ್ನಗಿರಿ, ಗಂಗಾವತಿ, ಬಾಳೆಹೊನ್ನೂರು, ಧರ್ಮಸ್ಥಳ, ಹುಬ್ಬಳ್ಳಿ, ಹುಣಸಗಿ, ಶಿರಹಟ್ಟಿ, ಬರಗೂರು, ಬೆಳ್ತಂಗಡಿ, ಹುಕ್ಕೇರಿ, ಜಯಪುರ, ಕೆಆರ್ ನಗರ, ಹುಕ್ಕೇರಿ, ಕನಕಪುರ, ಮದ್ದೂರು, ಮಾಗಡಿ, ಮುಂಡಗೋಡು, ಕುಶಾಲನಗರ, ಮದ್ದೂರು, ನರಗುಂದ, ನಂಜನಗೂಡು, ತರೀಕೆರೆಯಲ್ಲಿ ಮಳೆಯಾಗಿದೆ.
ಕಲಬುರಗಿಯಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ದಾವಣಗೆರೆ, ಚಿತ್ರದುರ್ಗದಲ್ಲಿ 19.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.ಎಚ್ಎಎಲ್ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Weather: ಬೆಂಗಳೂರಿಗೆ ಯೆಲ್ಲೋ ಅಲರ್ಟ್, ಕರ್ನಾಟಕದ 12 ಜಿಲ್ಲೆಗಳಲ್ಲಿ ವಿಪರೀತ ಮಳೆ
ಬೆಳಗಾವಿ ಏರ್ಪೋರ್ಟ್ನಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗದಗದಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 32.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.




