Karnataka Rains: ಬೆಂಗಳೂರು, ಕೊಡಗು, ಮೈಸೂರು ಸೇರಿ ರಾಜ್ಯದ ವಿವಿಧೆಡೆ ಮುಂದಿನ 24 ಗಂಟೆಗಳಲ್ಲಿ ಸುರಿಯಲಿದೆ ಅತ್ಯಧಿಕ ಮಳೆ

Karnataka Rain Updates: ಬೆಂಗಳೂರು, ಕೊಡಗು, ಮೈಸೂರು ಸೇರಿದಂತೆ ರಾಜ್ಯದ ವಿವಿಧೆಡೆ ಮುಂದಿನ 24 ಗಂಟೆಗಳಲ್ಲಿ ಅತ್ಯಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Karnataka Rains: ಬೆಂಗಳೂರು, ಕೊಡಗು, ಮೈಸೂರು ಸೇರಿ ರಾಜ್ಯದ ವಿವಿಧೆಡೆ ಮುಂದಿನ 24 ಗಂಟೆಗಳಲ್ಲಿ ಸುರಿಯಲಿದೆ ಅತ್ಯಧಿಕ ಮಳೆ
ಮಳೆ

Updated on: May 03, 2023 | 7:28 AM

ಬೆಂಗಳೂರು, ಕೊಡಗು, ಮೈಸೂರು ಸೇರಿದಂತೆ ರಾಜ್ಯದ ವಿವಿಧೆಡೆ ಮುಂದಿನ 24 ಗಂಟೆಗಳಲ್ಲಿ ಅತ್ಯಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ದಕ್ಷಿಣ ಒಳನಾಡಿನ ಕೊಡಗು, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರದಲ್ಲಿ ಭಾರಿ ಮಳೆಯಾಗಲಿದೆ. ಕರಾವಳಿಯ ಕೆಲವು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್​ವರೆಗೂ ಹೆಚ್ಚಾಗುವ ಸಾಧ್ಯತೆ ಇದೆ.

ಮಂಡ್ಯ ಕೆವಿಕೆ, ಮಾಲೂರು, ಸರಗೂರಿನಲ್ಲಿ ಅತಿ ಹೆಚ್ಚಿನ ಮಳೆಯಾಗಿದೆ, ಮುದಗಲ್, ಕೃಷ್ಣರಾಜಸಾಗರ, ಕನಕಪುರ, ಹರದನಹಳ್ಳಿ, ಗಬ್ಬೂರು, ಜಾಲಹಳ್ಳಿ, ರಾಯಚೂರು, ಸಾಲಿಗ್ರಾಮ, ಶ್ರೀರಂಗಪಟ್ಟಣ, ಬೆಂಗಳೂರು ಕೆಎಎಲ್​, ಬಂಡೀಪುರ, ಕೊಳ್ಳೇಗಾಲ, ಚಾಮರಾಜನಗರ, ಮೈಸೂರು, ಹಲಬರ್ಗಾ, ಹುಲ್ಸೂರು, ಸಾಯಿಗಾಂವ್, ಭಾಲ್ಕಿ, ದೇವದುರ್ಗ, ಕೋಲಾರ, ಗೌರಿಬಿದನೂರು, ತೊಂಡೇಭಾವಿ, ಜ್ಞಾನಭಾರತಿ ವಿವಿ ಕ್ಯಾಂಪಸ್, ಗೋಪಾಲ್​ನಗರ, ಉತ್ತರಹಳ್ಳಿ, ಬೆಂಗಳೂರು ನಗರ, ಮಂಠಾಳ, ನಿಟ್ಟೂರು, ಔರಾದ್, ಕುರ್ಡಿ, ಮಸ್ಕಿ, ಮಾನ್ವಿ, ಕಕ್ಕೇರಿ, ರಾಮನಗರ, ಖಜೂರಿ, ಮುಡಬಿ, ಹೊಸಕೋಟೆ, ಮಂಡ್ಯ, ಬರಗೂರು, ಚಿಕ್ಕಬಳ್ಳಾಪುರ, ಮೂಡಿಗೆರೆಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Bangalore Rain: ಬೆಂಗಳೂರಿನಲ್ಲಿ ಧಾರಾಕಾರ ಮಳೆ, ಕೆರೆಯಂತಾದ ರಸ್ತೆಗಳು

ಬೆಂಗಳೂರಿನಲ್ಲಿ ಮಂಗಳವಾರ ರಾತ್ರಿಯಿಂದಲೂ ಮಳೆ ಸುರಿಯುತ್ತಿದೆ, ಮೋಡಕವಿದ ವಾತಾವರಣವಿರಲಿದ್ದು, ಇಡೀ ದಿನವೂ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಎಚ್​ಎಎಲ್​ನಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 3 ದಿನ ಮಳೆ ಮುನ್ಸೂಚನೆ ದೊರೆತಿದೆ. ಬೆಂಗಳೂರು ಸೇರಿ ಹಲವೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ 3 ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಚಿಕ್ಕಮಗಳೂರು, ಹಾಸನ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿತ್ರದುರ್ಗ, ಚಾಮರಾಜನಗರ, ಕೊಡಗು, ಮೈಸೂರು ಹಾಗೂ ತುಮಕೂರು ಜಿಲ್ಲೆಯಲ್ಲಿ ಮೇ 3ರವರೆಗೆ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us