Karnataka Rain: ಮಳೆಯಿಂದ ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ; ಚಿಕ್ಕಮಗಳೂರಿನ ಶಾಲೆಗಳಿಗೆ ಇಂದು ರಜೆ
Karnataka Weather Today: ಕರಾವಳಿ ಕರ್ನಾಟಕದ ಎಲ್ಲಾ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ.
Monsoon 2022: ಕರಾವಳಿ ಜಿಲ್ಲೆಗಳಲ್ಲಿ ಮಳೆ (Rainfall) ಮುಂದುವರೆದಿದ್ದು, ಇಂದು ಕೂಡ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರಿನ 3 ತಾಲೂಕುಗಳಾದ ಶೃಂಗೇರಿ, ಕಳಸ ಮತ್ತು ಮೂಡಿಗೆರೆಯಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇಂದು ಮತ್ತು ಗುರುವಾರ ಐಎಂಡಿ ಕರಾವಳಿ ಕರ್ನಾಟಕಕ್ಕೆ ಆರೆಂಜ್ ಅಲರ್ಟ್ ನೀಡಿದ್ದು, ಶುಕ್ರವಾರ ಆರೆಂಜ್ ಅಲರ್ಟ್ (Orange Alert) ಘೋಷಿಸಿದೆ.
ಕರಾವಳಿ ಕರ್ನಾಟಕದ ಎಲ್ಲಾ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೀದರ್, ಕಲ್ಬುರ್ಗಿ, ವಿಜಯಪುರ, ಯಾದಗಿರಿ ಮತ್ತು ಬೆಳಗಾವಿ ಜಿಲ್ಲೆಗಳು, ದಕ್ಷಿಣ ಒಳನಾಡಿನ ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕ ಮತ್ತು ಉತ್ತರ ಒಳ ಕರ್ನಾಟಕದಲ್ಲಿ ಮಿಂಚು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ನೈಋತ್ಯ ಮಾನ್ಸೂನ್ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳ ಕರ್ನಾಟಕದಲ್ಲಿ ಬಹಳ ಸಕ್ರಿಯವಾಗಿದೆ. ಕರಾವಳಿ ಕರ್ನಾಟಕದ ಬಹುತೇಕ ಸ್ಥಳಗಳಲ್ಲಿ ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಕೂಡ ಮಳೆ ಹೆಚ್ಚಾಗಿದೆ. ಬೆಂಗಳೂರು-ಮೈಸೂರು, ಬೆಂಗಳೂರು-ಮಂಗಳೂರು, ಬೆಂಗಳೂರು-ಬೆಳಗಾವಿ ಮತ್ತು ಬೆಂಗಳೂರು-ಕಲಬುರ್ಗಿ ಹೆದ್ದಾರಿಗಳಲ್ಲಿ ಮಂಗಳವಾರ ಭಾರೀ ಮಳೆಯಾಗಿದೆ.
ಇದನ್ನೂ ಓದಿ: India Rain Updates: ಕರ್ನಾಟಕ, ಕೇರಳ, ಉತ್ತರಾಖಂಡ್ ಸೇರಿ 4 ರಾಜ್ಯಗಳಲ್ಲಿ ಮುಂದಿನ 4 ದಿನ ಭಾರಿ ಮಳೆ
ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲೂಕಿನಲ್ಲಿ ಸೋಮವಾರ 71.6 ಮಿಮೀ ಮಳೆ ಸುರಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡದಲ್ಲಿ 2 ದಿನಗಳಿಂದ ಜಿಲ್ಲಾಡಳಿತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ. ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಅಂಗನವಾಡಿ, ಶಾಲಾ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ. ಭಾರೀ ಮಳೆಯಿಂದಾಗಿ ಗೋವಾದಿಂದ ಬೆಳಗಾವಿ ಮತ್ತು ಮಂಗಳೂರು-ಮಡಿಕೇರಿ ಎನ್ಎಚ್ 275ಗೆ ಹೋಗುವ ಮಾರ್ಗದಲ್ಲಿರುವ ಅನ್ಮೋಡ್ ಘಾಟ್ನಲ್ಲಿ ಭೂಕುಸಿತ ವರದಿಯಾಗಿದೆ.
ಇಂದು ಮತ್ತು ಜುಲೈ 8ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಕೊಡಗಿಗೆ ಮಳೆಯಿಂದ ಆರೆಂಜ್ ಅಲರ್ಟ್ ನೀಡಲಾಗಿದೆ. ಮುಂದಿನ 3 ದಿನಗಳ ಕಾಲ ಬೆಳಗಾವಿ, ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಇಂದು ಮತ್ತು ಜುಲೈ 7ರಂದು ಈ ಸ್ಥಳಗಳಿಗೆ ಹಳದಿ ಅಲರ್ಟ್ ನೀಡಲಾಗಿದೆ. ಕರಾವಳಿ ಕರ್ನಾಟಕದ ಎಲ್ಲಾ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: Dakshina Kannada Rain: ಕರಾವಳಿಯಲ್ಲಿ ಭಾರೀ ಮಳೆ; ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಇಂದು ರಜೆ
ಉತ್ತರ ಒಳನಾಡಿನ ಕರ್ನಾಟಕದ ಬೀದರ್, ಕಲ್ಬುರ್ಗಿ, ವಿಜಯಪುರ, ಯಾದಗಿರಿ ಮತ್ತು ಬೆಳಗಾವಿ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದ ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕೂಡ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಕರಾವಳಿಯಲ್ಲಿ ಗಂಟೆಗೆ 40-50 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು IMD ಹೇಳಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಿದೆ.
ಇಂದು ಯಾವೆಲ್ಲ ರಾಜ್ಯಗಳಲ್ಲಿ ಮಳೆ?: ಕೊಂಕಣ, ಗೋವಾ, ರಾಜಸ್ಥಾನ, ಮಹಾರಾಷ್ಟ್ರ ಮತ್ತು ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹಿಮಾಚಲ ಪ್ರದೇಶ, ಉತ್ತರಾಖಂಡ, ಉತ್ತರ ಪ್ರದೇಶ, ಮಧ್ಯಪ್ರದೇಶ, ವಿದರ್ಭ, ಛತ್ತೀಸ್ಗಢ, ಒಡಿಶಾ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ನಾಗಾಲ್ಯಾಂಡ್, ಮಣಿಪುರ, ಮೇಘಾಲಯ, ತ್ರಿಪುರಾ, ಗುಜರಾತ್, ಮರಾಠವಾಡ, ಕರಾವಳಿ ಆಂಧ್ರ ಪ್ರದೇಶ, ಯಾನಂ, ತೆಲಂಗಾಣದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ ಮತ್ತು ಮಾಹೆಯಲ್ಲಿ ಕೂಡ ಮಳೆಯಾಗಲಿದೆ.
ಜಮ್ಮು, ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ವಿದರ್ಭ, ಛತ್ತೀಸ್ಗಢ, ಆಂಧ್ರಪ್ರದೇಶ ಕರಾವಳಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೇರಳ, ಕರ್ನಾಟಕ, ಗೋವಾ, ಮಹಾರಾಷ್ಟ್ರ, ದಕ್ಷಿಣ ಗುಜರಾತ್ ಕರಾವಳಿಗಳು, ಈಶಾನ್ಯ ಅರೇಬಿಯನ್ ಸಮುದ್ರ ಮತ್ತು ಲಕ್ಷದ್ವೀಪ ಪ್ರದೇಶದಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ.