Karnataka Rain: ಕರಾವಳಿ, ಮಲೆನಾಡಿನಲ್ಲಿ ಜೂನ್ 2ರಿಂದ ಮುಂಗಾರು ಮಳೆಯ ಅಬ್ಬರ; ಬೆಂಗಳೂರಿನಲ್ಲಿ ಹಳದಿ ಅಲರ್ಟ್​ ಘೋಷಣೆ

Monsoon 2022: ಜೂನ್ 2ರಿಂದ ಕರ್ನಾಟಕದಲ್ಲಿ ವರುಣನ ಅಬ್ಬರ ಹೆಚ್ಚಾಗಲಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಹಳದಿ ಎಚ್ಚರಿಕೆ ನೀಡಿದೆ.

Karnataka Rain: ಕರಾವಳಿ, ಮಲೆನಾಡಿನಲ್ಲಿ ಜೂನ್ 2ರಿಂದ ಮುಂಗಾರು ಮಳೆಯ ಅಬ್ಬರ; ಬೆಂಗಳೂರಿನಲ್ಲಿ ಹಳದಿ ಅಲರ್ಟ್​ ಘೋಷಣೆ
ಮಳೆ
Follow us
| Updated By: ಸುಷ್ಮಾ ಚಕ್ರೆ

Updated on: May 31, 2022 | 6:01 AM

ಬೆಂಗಳೂರು: ಕೇರಳಕ್ಕೆ ಭಾನುವಾರ ಮುಂಗಾರು (Monsoon) ಪ್ರವೇಶವಾಗಿದೆ. ಜೂನ್ 2ಕ್ಕೆ ಕರ್ನಾಟಕಕ್ಕೂ ಮಾನ್ಸೂನ್ ಪ್ರವೇಶವಾಗಲಿದ್ದು, ಮಳೆಯ ಆರ್ಭಟ ಹೆಚ್ಚಾಗಲಿದೆ. ಜೂನ್ 2ರೊಳಗೆ ಕರ್ನಾಟಕದ ಕೆಲವು ಭಾಗಗಳಿಗೆ ನೈಋತ್ಯ ಮಾನ್ಸೂನ್ ಅಪ್ಪಳಿಸಲು ಸಿದ್ಧವಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಿದೆ. ಜೂನ್ 2ರಿಂದ ಕರ್ನಾಟಕದಲ್ಲಿ ವರುಣನ (Karnataka Rains) ಅಬ್ಬರ ಹೆಚ್ಚಾಗಲಿರುವ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳು ಮತ್ತು ಮಲೆನಾಡಿನಲ್ಲಿ ಹಳದಿ ಅಲರ್ಟ್​ (Yellow Alert) ಘೋಷಿಸಲಾಗಿದೆ. ಕಳೆದ ವರ್ಷಕ್ಕಿಂತಲೂ ಈ ಬಾರಿ ಉತ್ತಮ ಮುಂಗಾರು ಮಳೆಯಾಗುವ ನಿರೀಕ್ಷೆಯಿದೆ.

ಕಳೆದೊಂದು ತಿಂಗಳಿನಿಂದ ಕರ್ನಾಟಕದಲ್ಲಿ ಹಿಂಗಾರು ಮಳೆಯಾಗುತ್ತಿದೆ. ನಾಳೆಯಿಂದ ರಾಜ್ಯಾದ್ಯಂತ ಮಳೆ ಹೆಚ್ಚಾಗಲಿದೆ. ಜೂನ್ 2ರ ರಾತ್ರಿ ಅಥವಾ ಜೂನ್ 3ಕ್ಕೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಮಲೆನಾಡು, ಬೆಂಗಳೂರು, ರಾಮನಗರ, ಚಾಮರಾಜನಗರ, ಕೊಡಗು ಜಿಲ್ಲೆಯಲ್ಲಿ ಮುಂಗಾರು ಪ್ರವೇಶವಾಗಲಿದೆ. ಜೂನ್ 2ರಿಂದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಹಾಸನದಲ್ಲಿ ಭಾರೀ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರದಲ್ಲೂ ಮಳೆ ಹೆಚ್ಚಾಗಲಿದೆ. ಜೂನ್ 2 ಮತ್ತು 3ರಂದು ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ
Image
Karnataka Rain: ಕೇರಳಕ್ಕೆ ಮುಂಗಾರು ಆಗಮನ ಹಿನ್ನೆಲೆ; ಕರ್ನಾಟಕದಲ್ಲೂ ಮಳೆ ಶುರು
Image
Monsoon 2022: ಕೇರಳಕ್ಕೆ ಮುಂಗಾರು ಪ್ರವೇಶ; ಜೂನ್ ಮೊದಲ ವಾರದಲ್ಲಿ ಕರ್ನಾಟಕದಲ್ಲಿ ಮಾನ್ಸೂನ್ ಶುರು
Image
Karnataka Rain: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದು ತುಂತುರು ಮಳೆ ಸಾಧ್ಯತೆ

ಉತ್ತರ ಕರ್ನಾಟಕದಲ್ಲಿ ಒಣಹವೆ: ಜೂನ್​ 1ರವರೆಗೆ ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಧಾರವಾಡ, ರಾಯಚೂರು, ಯಾದಗಿರಿ, ಬೆಳಗಾವಿಯಲ್ಲಿ ಒಣ ಹವೆ ಮುಂದುವರೆಯಲಿದೆ. ಇಂದು ಬಾಗಲಕೋಟೆ, ಬೀದರ್‌, ಧಾರವಾಡ, ಗದಗ, ಕೊಪ್ಪಳ, ವಿಜಯಪುರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆಗಳಲ್ಲಿ ಒಣ ಹವೆ ಇರಲಿದೆ. ಜೂನ್‌ 1ರಂದು ಬೀದರ್​ನಲ್ಲಿ ಕೂಡ ಒಣ ಹವೆ ಇರಲಿದ್ದು, ರಾಜ್ಯದ ಉಳಿದ ಭಾಗದಲ್ಲಿ ಮಳೆಯಾಗಲಿದೆ. ಜೂನ್‌ 2ರಂದು ಬಾಗಲಕೋಟೆ, ಬೀದರ್‌, ಗದಗ, ಕೊಪ್ಪಳ, ರಾಯಚೂರು ಜಿಲ್ಲೆ ಹೊರತು ಪಡಿಸಿ ಉಳಿದೆಡೆ ಮಳೆಯಾಗುವ ಸಂಭವವಿದೆ.

ಇದನ್ನೂ ಓದಿ: Monsoon 2022: ಕರ್ನಾಟಕದ ಕರಾವಳಿಯಲ್ಲಿ ಇಂದು ಮಳೆ; ಇನ್ನೆರಡು ದಿನಗಳಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ಹವಾಮಾನ ಇಲಾಖೆಯ ಇತ್ತೀಚಿನ ಮುನ್ಸೂಚನೆಯ ಪ್ರಕಾರ, ಉತ್ತರ ಕನ್ನಡ, ಕರಾವಳಿ ಜಿಲ್ಲೆಗಳು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಶಿವಮೊಗ್ಗ, ರಾಮನಗರ, ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಇನ್ನೆರಡು ದಿನದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ವರದಿಯ ಪ್ರಕಾರ, ಮುಂದಿನ ಎರಡು ಅಥವಾ ಮೂರು ದಿನಗಳಲ್ಲಿ ಬೆಂಗಳೂರಿನಲ್ಲಿ 7 ಮಿಮೀ ವರೆಗಿನ ಮಳೆ ಬೀಳಬಹುದು.

ಮುಂದಿನ ಎರಡು ದಿನಗಳವರೆಗೆ ಬೆಂಗಳೂರಿನಲ್ಲಿ ಮಳೆಯೊಂದಿಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಜೂನ್ 3ರಿಂದ 4ರವರೆಗೆ ಗುಡುಗು ಸಹಿತ ಹಗುರದಿಂದ ಮಧ್ಯಮ ಮಳೆಯಾಗುವ ಮುನ್ಸೂಚನೆಯಿದ್ದು, ಕನಿಷ್ಠ ತಾಪಮಾನವು 21 ಡಿಗ್ರಿ ಸೆಲ್ಸಿಯಸ್‌ನಷ್ಟಿರುತ್ತದೆ. ಬೆಂಗಳೂರಿನಲ್ಲಿ ಈ ತಿಂಗಳು ಭಾರೀ ಮಳೆಯಾಗಿದ್ದು, ಈ ತಿಂಗಳ ಆರಂಭದಲ್ಲಿ ವಾಯುವ್ಯ ಭಾರತವು ತೀವ್ರ ಶಾಖದ ಅಲೆಯಲ್ಲಿ ತತ್ತರಿಸಿದ್ದರೆ, ಅಸಾನಿ ಚಂಡಮಾರುತದ ಪ್ರಭಾವದಿಂದ ಬೆಂಗಳೂರಿನಲ್ಲಿ ಭಾರೀ ಮಳೆಯಾಯಿತು. ಬೆಂಗಳೂರು 22 ವರ್ಷಗಳಲ್ಲಿ ಮೇ ತಿಂಗಳಲ್ಲಿ ಅತ್ಯಂತ ಚಳಿಯ ದಿನವನ್ನು ದಾಖಲಿಸಿದೆ. ಇಲ್ಲಿನ ಗರಿಷ್ಠ ತಾಪಮಾನವು 24.3 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದೆ.

ಇದನ್ನೂ ಓದಿ: Karnataka Rain: ಕೇರಳಕ್ಕೆ ಮುಂಗಾರು ಆಗಮನ ಹಿನ್ನೆಲೆ; ಕರ್ನಾಟಕದಲ್ಲೂ ಮಳೆ ಶುರು

ಮುಂದಿನ 4 ದಿನಗಳಲ್ಲಿ ಕೇರಳ, ಮಾಹೆ ಮತ್ತು ಲಕ್ಷದ್ವೀಪದಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗಲಿದ್ದು, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ ಮತ್ತು ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಇಂದಿನಿಂದ ಜೂನ್ 3ರವರೆಗೆ ಅಸ್ಸಾಂ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ, ಅಸ್ಸಾಂ-ಮೇಘಾಲಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 4 ದಿನಗಳಲ್ಲಿ ಬಿಹಾರ, ಜಾರ್ಖಂಡ್, ಒಡಿಶಾ ಮತ್ತು ಗಂಗಾನದಿ ಪಶ್ಚಿಮ ಬಂಗಾಳದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿಯ ಗಾಳಿಯೊಂದಿಗೆ ಚದುರಿದ ಮಳೆಯಾಗುವ ಸಾಧ್ಯತೆಯಿದೆ.

ಇನ್ನಷ್ಟು ಮಳೆಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು