AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ 7 ದಿನ ಕರ್ನಾಟಕದಾದ್ಯಂತ ವರುಣನ ಆರ್ಭಟ; ಕರಾವಳಿ ಮತ್ತು ಒಳನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ

ಭಾರತೀಯ ಹವಾಮಾನ ಇಲಾಖೆ (IMD) ಕರ್ನಾಟಕದಲ್ಲಿ ಮುಂದಿನ 7 ದಿನಗಳ ಕಾಲ ಭಾರಿ ಮಳೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳು ಮತ್ತು ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿಗೆ ಜೂನ್ 30 ರಿಂದ ಜುಲೈ 3ರವರೆಗೆ ತೀವ್ರ ಮಳೆಯಾಗುವ ನಿರೀಕ್ಷೆಯಿದೆ, ಕರಾವಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ. ಗುಡುಗು-ಸಿಡಿಲಿನ ಸಮಯದಲ್ಲಿ ಸಾರ್ವಜನಿಕರು ಜಾಗರೂಕರಾಗಿರುವಂತೆ ಎಚ್ಚರಿಕೆ ನೀಡಲಾಗಿದೆ.

ಮುಂದಿನ 7 ದಿನ ಕರ್ನಾಟಕದಾದ್ಯಂತ ವರುಣನ ಆರ್ಭಟ; ಕರಾವಳಿ ಮತ್ತು ಒಳನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Jun 27, 2026 | 4:02 PM

Share

ಮುಖ್ಯಾಂಶಗಳು

  • ಕರ್ನಾಟಕದಾದ್ಯಂತ ಮುಂದಿನ 7 ದಿನಗಳ ಕಾಲ ಭಾರಿ ಮಳೆಯಾಗಲಿದೆ
  • ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಮತ್ತು ಜೋರಾದ ಗಾಳಿ
  • ಜೂನ್ 30 ರಿಂದ ರಾಜ್ಯದ ಕೆಲವು ಸ್ಥಳಗಳಲ್ಲಿ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗಲಿದೆ

ಬೆಂಗಳೂರು, ಜೂ.27: ಮುಂಗಾರು ಮಳೆಯ ಅಬ್ಬರದ ನಡುವೆಯೇ ಕರ್ನಾಟಕದಾದ್ಯಂತ ಮುಂದಿನ 7 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಜೂನ್ 27 ರಂದು ಅಂದರೆ ಇಂದು ಇಲಾಖೆ ಬಿಡುಗಡೆ ಮಾಡಿರುವ ಹವಾಮಾನ ವರದಿ ಮತ್ತು ಎಚ್ಚರಿಕೆಯ ಪ್ರಕಾರ, ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಮತ್ತು ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಜೂನ್ 30 ರಿಂದ ರಾಜ್ಯದ ಕೆಲವು ಸ್ಥಳಗಳಲ್ಲಿ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಹೇಳಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 7 ದಿನಗಳ ಕಾಲ ನಿರಂತರ ಮಳೆಯಾಗಲಿದ್ದು, ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಜೂನ್ 27 ಮತ್ತು ಜೂನ್ 28, 29, 30ರವರೆಗೆ ಭಾರಿ ಮಳೆಯಾಗಲಿದ್ದು, ಇದರೊಂದಿಗೆ ಭೀಕರ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇನ್ನು ಜುಲೈ 1 ರಿಂದ ಜುಲೈ 3ರಂದು ಮುಂಗಾರು ಮಳೆಯ ಆರ್ಭಟ ಮುಂದುವರಿಯಲಿದ್ದು, ಸತತವಾಗಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರದ ಕಾಲ ಬಿರುಗಾಳಿ ಸಹಿತ ಗುಡುಗು ಮಳೆಯಾಗಲಿದೆ. ಜೂನ್ 27 ರಂದು ಅಂದರೆ ಇಂದು ಸಂಜೆ ಹೊತ್ತಿಗೆ ಕೆಲವು ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಜೊತೆಗೆ ತೀವ್ರವಾದ ಗುಡುಗು, ಸಿಡಿಲು ಹಾಗೂ ಮೇಲ್ಮೈ ಗಾಳಿ ಬೀಸಲಿದೆ. ಹಾಗೂ ಜೂನ್ 28 ರಿಂದ ಜುಲೈ 3 ರವರೆಗೆ ಭಾರಿ ಮಳೆಯ ಎಚ್ಚರಿಕೆ ಇಲ್ಲದಿದ್ದರೂ, ಸತತವಾಗಿ ಗುಡುಗು, ಸಿಡಿಲು ಮತ್ತು ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ.

ಇದನ್ನೂ ಓದಿ: ಇನ್ಮೇಲೆ ಪದೇ ಪದೇ ಕರೆಂಟ್ ಹೋಗಲ್ಲ: ವಿದ್ಯುತ್ ಲೈನ್‌ಗಳ ತಪಾಸಣೆಗೆ ಲಗ್ಗೆ ಇಟ್ಟ ಅತ್ಯಾಧುನಿಕ ಡ್ರೋನ್‌ಗಳು; ಶೇ. 85 ರಷ್ಟು ತಗ್ಗಿದ ವಿದ್ಯುತ್ ವ್ಯತ್ಯಯ

ದಕ್ಷಿಣ ಒಳನಾಡಿನಲ್ಲಿ ಜೂನ್ 30 ರಿಂದ ಭಾರಿ ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಜೂನ್ ಕೊನೆಯ ವಾರ ಹಾಗೂ ಜುಲೈ ಮೊದಲ ವಾರದಲ್ಲಿ ವರುಣನ ಅಬ್ಬರ ಹೆಚ್ಚಾಗಲಿದೆ. ಜೂನ್ 27 ಇಂದು ಸಂಜೆಯಿಂದ ಮತ್ತು 28ವರೆಗೆ ಗುಡುಗು, ಸಿಡಿಲು ಮತ್ತು ಜೋರಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ. ಜೂನ್ 29ರಂದು ಹವಾಮಾನದಲ್ಲಿ ಸ್ವಲ್ಪ ಬದಲಾವಣೆಯಾಗಲಿದ್ದು, ಕೇವಲ ಗುಡುಗು ಹಾಗೂ ಸಿಡಿಲಿನ ಮುನ್ಸೂಚನೆ (ಗ್ರೀನ್ ಅಲರ್ಟ್) ನೀಡಲಾಗಿದೆ. ಇದರ ಜತೆಗೆ ಜೂನ್ 30 ರಿಂದ ಜುಲೈ 3ರವರೆಗೆ ಜೂನ್ 30 ರಿಂದ ದಕ್ಷಿಣ ಒಳನಾಡಿನ ಹಲವೆಡೆ ಮಳೆಯ ತೀವ್ರತೆ ಹೆಚ್ಚಾಗಲಿದ್ದು, ಜುಲೈ 3 ರವರೆಗೆ ಸತತವಾಗಿ ಭಾರಿ ಮಳೆಯಾಗಲಿದೆ ಎಂದು ಇಲಾಖೆ ಎಚ್ಚರಿಸಿದೆ.

ಮಳೆ ಹಾಗೂ ಸಿಡಿಲಿನ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರು ಹಾಗೂ ವಿಶೇಷವಾಗಿ ರೈತರು ಮತ್ತು ಮೀನುಗಾರರು ಜಾಗರೂಕರಾಗಿರಬೇಕು. ಗುಡುಗು ಸಿಡಿಲಿನ ಸಂದರ್ಭದಲ್ಲಿ ಮರಗಳ ಕೆಳಗೆ ನಿಲ್ಲದಂತೆ ಹಾಗೂ ಹಳೆಯ ಕಟ್ಟಡಗಳ ಆಶ್ರಯ ಪಡೆಯದಂತೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಂಗ್​ಸ್ಟರ್ ಸಂದೀಪ್​ಗೆ ಡ್ರಮ್ ಬಾರಿಸಿ ಸ್ವಾಗತ ಕೋರಿದ ಗ್ರಾಮಸ್ಥರು
ಗ್ಯಾಂಗ್​ಸ್ಟರ್ ಸಂದೀಪ್​ಗೆ ಡ್ರಮ್ ಬಾರಿಸಿ ಸ್ವಾಗತ ಕೋರಿದ ಗ್ರಾಮಸ್ಥರು
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ