Karnataka Rain: ಬೆಂಗಳೂರು, ಶಿವಮೊಗ್ಗ, ಹಾಸನ ಸೇರಿ ಈ ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಭಾರೀ ಮಳೆ
Bangalore Rains: ಇಂದಿನಿಂದ 4 ದಿನಗಳ ಕಾಲ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ರಾಜ್ಯದ ಹಲವು ಜಿಲ್ಲೆಗಳಿಗೆ ಇಂದು ಕೂಡ ಹಳದಿ ಎಚ್ಚರಿಕೆ ನೀಡಲಾಗಿದೆ.
Bengaluru Rain: ಬೆಂಗಳೂರು: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ (Karnataka Rain) ವರುಣನ ಆರ್ಭಟ ಜೋರಾಗಿದೆ. ಬುಧವಾರ ಸಂಜೆ ಸುರಿದ ಭಾರೀ ಮಳೆಗೆ ಬೆಂಗಳೂರಿನ ಬಹುತೇಕ ಏರಿಯಾಗಳಲ್ಲಿ ಮನೆಗಳಿಗೆ ನೀರು ನುಗ್ಗಿ, ರಸ್ತೆಯಲ್ಲಿ ಮಳೆ ನೀರು ನದಿಯಂತೆ ಹರಿದು ಅವಾಂತರ ಸೃಷ್ಟಿಯಾಗಿತ್ತು. ಇಂದಿನಿಂದ 4 ದಿನಗಳ ಕಾಲ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ರಾಜ್ಯದ ಹಲವು ಜಿಲ್ಲೆಗಳಿಗೆ ಇಂದು ಕೂಡ ಹಳದಿ ಎಚ್ಚರಿಕೆ (Yellow Alert) ನೀಡಲಾಗಿದೆ.
ಮುಂದಿನ 2 ದಿನಗಳಲ್ಲಿ ಬೆಂಗಳೂರಿನಲ್ಲೂ ಭಾರೀ ಮಳೆಯಾಗಲಿದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು, ಚಿತ್ರದುರ್ಗ, ಶಿವಮೊಗ್ಗ, ತುಮಕೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಇಂದು (ಗುರುವಾರ) ಭಾರೀ ಮಳೆಯಾಗಲಿದೆ. 4 ದಿನಗಳ ಕಾಲ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದ್ದು, ಹಲವು ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ: Karnataka Rain: ‘ಮಹಾ’ ಮಳೆಗೆ ಉಕ್ಕಿ ಹರಿಯುತ್ತಿರುವ ಭೀಮಾ ನದಿ; ಕಲಬುರಗಿ-ವಿಜಯಪುರ ಸಂಪರ್ಕ ಕಡಿತ
ಇದೇ ವೇಳೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು, ಶಿವಮೊಗ್ಗ, ಬೆಳಗಾವಿ, ಹಾವೇರಿ, ಬಾಗಲಕೋಟೆ, ಕಲಬುರಗಿ, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಈ ವರ್ಷ ಬೆಂಗಳೂರು 1,706 ಮಿಮೀ ದಾಖಲೆಯ ಮಳೆಯಾಗಿದೆ. ಈ ಮೂಲಕ ಬೆಂಗಳೂರಿನ ಮಳೆ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದಿದೆ. 2017ರಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 1,696 ಮಿಮೀ ಮಳೆಯಾಗಿತ್ತು.
20 October 2022: #Weather Warning Source: @Indiametdept
♦ Heavy rainfall at isolated places very likely over #Andaman & #Nicobar Islands, South Interior #Karnataka, #TamilNadu, #Puducherry & #Karaikal, #Kerala & #Mahe and #Lakshadweep. pic.twitter.com/n4xZVbAf7X
— NDMA India | राष्ट्रीय आपदा प्रबंधन प्राधिकरण ?? (@ndmaindia) October 20, 2022
ಇಂದು ಯಾವ ರಾಜ್ಯಗಳಲ್ಲಿ ಮಳೆ?: ಇಂದು ವಿದರ್ಭ, ಮಧ್ಯ ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್, ಲಡಾಖ್, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶದ ಮೇಲೆ ಲಘುವಾಗಿ ಮಳೆಯಾಗಬಹುದು. ಉತ್ತರಾಖಂಡ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ಒಡಿಶಾ, ಛತ್ತೀಸ್‌ಗಢ ಮತ್ತು ವಿದರ್ಭದಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಹಾಗೇ, ಲಕ್ಷದ್ವೀಪ, ಕೇರಳ, ತಮಿಳುನಾಡು, ಕರಾವಳಿ ಆಂಧ್ರಪ್ರದೇಶ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಮೇಘಾಲಯ, ಮಣಿಪುರ, ಮಿಜೋರಾಂ, ತೆಲಂಗಾಣ, ದಕ್ಷಿಣ ಮಧ್ಯಪ್ರದೇಶ, ಕೊಂಕಣ ಮತ್ತು ಗೋವಾ, ಮಹಾರಾಷ್ಟ್ರದಲ್ಲಿ ಅಲ್ಪ ಪ್ರಮಾಣದ ಮಳೆಯಾಗಲಿದೆ.