AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ, ಆರೆಂಜ್, ಯೆಲ್ಲೋ ಅಲರ್ಟ್​ ಘೋಷಣೆ

ಬಿಸಿಲಿನಿಂದ ಬಸವಳಿದಿದ್ದ ಕರ್ನಾಟಕದ ಜನತೆ ಮಳೆಯಿಂದಾಗಿ ಖುಷಿಯಿಂದ ಕುಣಿದು ಕುಪ್ಪಳಿಸುತ್ತಿದ್ದಾರೆ. ಶನಿವಾರ ಶಿವಮೊಗ್ಗ, ಉತ್ತರ ಕನ್ನಡ, ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗಿದೆ. ಇಂದೂ ಕೂಡ ಹಲವು ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಲ್ಲೂ ಅಧಿಕ ಮಳೆಯಾಗುವ ನಿರೀಕ್ಷೆ ಇದೆ.

Karnataka Rain: ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ, ಆರೆಂಜ್, ಯೆಲ್ಲೋ ಅಲರ್ಟ್​ ಘೋಷಣೆ
ಮಳೆImage Credit source: Deccan Herald
ನಯನಾ ರಾಜೀವ್
|

Updated on: Apr 21, 2024 | 8:19 AM

Share

ಕರ್ನಾಟಕದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಇಂದು ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್(Yellow Alert)​ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ.

ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ,ತುಮಕೂರು, ವಿಜಯನಗರ ಜಿಲ್ಲೆಗಳಿಗೆ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಕುಮಟಾದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಗೋಕರ್ಣ, ಕೊಪ್ಪ, ಕಮ್ಮರಡಿಯಲ್ಲೂ ಅಧಿಕ ಮಳೆಯಾಗಿದೆ. ಮಂಕಿ,ಬೆಂಗಳೂರು,ಕುಂದಾಪುರ, ಜಯಪುರ, ಬಾಳೆಹೊನ್ನೂರು, ಚಿಕ್ಕಮಗಳೂರು, ಕೋಟ, ಧರ್ಮಸ್ಥಳ, ಕೊಟ್ಟಿಗೆಹಾರ, ಸಿದ್ದಾಪುರ, ಬೀದರ್, ಕಳಸ, ಕುಶಾಲನಗರ, ಕಡೂರು, ಎನ್​ಆರ್​ಪುರ, ಸಕಲೇಶಪುರ, ಹೊನ್ನಾಳಿ, ತ್ಯಾಗರ್ತಿ, ಹೊನಕೆರೆ, ಕುಣಿಗಲ್, ಮುಂಡಗೋಡು, ಶಿವಮೊಗ್ಗ, ಸುಳ್ಯ, ಯಲ್ಲಾಪುರ, ಬೈಲಹೊಂಗಲ, ಸವಣೂರು, ಚನ್ನಪಟ್ಟಣ, ರಾಣೆಬೆನ್ನೂರು, ಮಾಗಡಿ, ಹೊಸದುರ್ಗದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: ಬೆಂಗಳೂರಿನಲ್ಲಿ ತುಂತುರು ಮಳೆ: ಬಿಸಿಲಿನಿಂದ ರೋಸಿ ಹೋಗಿದ್ದ ಸಿಲಿಕಾನ್ ಸಿಟಿ ಮಂದಿ ಖುಷ್​

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕನಹಳ್ಳಿಯಲ್ಲಿ 40.7 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್​ಎಎಲ್​ನಲ್ಲಿ 36.9ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 36.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 37.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 35.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 34.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕಾರವಾರದಲ್ಲಿ 37.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 28.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ವಿಜಯಪುರದಲ್ಲಿ 37.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 36.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 35.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!