ಕರ್ನಾಟಕದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಇಂದು ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್(Yellow Alert) ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ,ತುಮಕೂರು, ವಿಜಯನಗರ ಜಿಲ್ಲೆಗಳಿಗೆ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕುಮಟಾದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಗೋಕರ್ಣ, ಕೊಪ್ಪ, ಕಮ್ಮರಡಿಯಲ್ಲೂ ಅಧಿಕ ಮಳೆಯಾಗಿದೆ. ಮಂಕಿ,ಬೆಂಗಳೂರು,ಕುಂದಾಪುರ, ಜಯಪುರ, ಬಾಳೆಹೊನ್ನೂರು, ಚಿಕ್ಕಮಗಳೂರು, ಕೋಟ, ಧರ್ಮಸ್ಥಳ, ಕೊಟ್ಟಿಗೆಹಾರ, ಸಿದ್ದಾಪುರ, ಬೀದರ್, ಕಳಸ, ಕುಶಾಲನಗರ, ಕಡೂರು, ಎನ್ಆರ್ಪುರ, ಸಕಲೇಶಪುರ, ಹೊನ್ನಾಳಿ, ತ್ಯಾಗರ್ತಿ, ಹೊನಕೆರೆ, ಕುಣಿಗಲ್, ಮುಂಡಗೋಡು, ಶಿವಮೊಗ್ಗ, ಸುಳ್ಯ, ಯಲ್ಲಾಪುರ, ಬೈಲಹೊಂಗಲ, ಸವಣೂರು, ಚನ್ನಪಟ್ಟಣ, ರಾಣೆಬೆನ್ನೂರು, ಮಾಗಡಿ, ಹೊಸದುರ್ಗದಲ್ಲಿ ಮಳೆಯಾಗಿದೆ.
ಮತ್ತಷ್ಟು ಓದಿ: ಬೆಂಗಳೂರಿನಲ್ಲಿ ತುಂತುರು ಮಳೆ: ಬಿಸಿಲಿನಿಂದ ರೋಸಿ ಹೋಗಿದ್ದ ಸಿಲಿಕಾನ್ ಸಿಟಿ ಮಂದಿ ಖುಷ್
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕನಹಳ್ಳಿಯಲ್ಲಿ 40.7 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್ಎಎಲ್ನಲ್ಲಿ 36.9ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 37.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 35.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕಾರವಾರದಲ್ಲಿ 37.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 28.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ವಿಜಯಪುರದಲ್ಲಿ 37.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ