Karnataka Weather: ಮೈಸೂರು, ಚಿಕ್ಕಮಗಳೂರು ಸೇರಿದಂತೆ ಕರ್ನಾಟಕದ 27ಕ್ಕೂ ಅಧಿಕ ಜಿಲ್ಲೆಗಳಲ್ಲಿ ಏ.18ರಿಂದ ಮಳೆ

ಬೆಂಗಳೂರು ಸೇರಿ ಕರ್ನಾಟಕದ 27ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 19ರಂದು ಬೆಂಗಳೂರಿನಲ್ಲಿ ಮಳಯಾಗಲಿದ್ದು, ಏಪ್ರಿಲ್ 18ರಂದು ಕೊಡಗು, ಮೈಸೂರು, ಚಿಕ್ಕಮಗಳೂರು, ಮಂಡ್ಯ ಸೇರಿದಂತೆ ಕೆಲವೆಡೆ ಮಳೆಯಾಗಲಿದೆ. ಒಟ್ಟಿನಲ್ಲಿ ಮುಂದಿನ 4 ದಿನಗಳ ಕಾಲ ರಾಜ್ಯದ 27ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ದೆಹಲಿ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಕೂಡ ಈಗಾಗಲೇ ಮಳೆ ಶುರುವಾಗಿ ಬಿಸಿಲಿನಿಂದ ಮುಕ್ತಿ ದೊರೆತಿದೆ. ಕರ್ನಾಟಕದಲ್ಲೂ ಜನರು ಬಿಸಿಲ ಬೇಗೆಯಿಂದ ಬಸವಳಿದಿದ್ದಾರೆ, ಮಳೆಯ ಬರುವಿಕೆಗಾಗಿ ಕಾಯುತ್ತಿದ್ದಾರೆ.

Karnataka Weather: ಮೈಸೂರು, ಚಿಕ್ಕಮಗಳೂರು ಸೇರಿದಂತೆ ಕರ್ನಾಟಕದ 27ಕ್ಕೂ ಅಧಿಕ ಜಿಲ್ಲೆಗಳಲ್ಲಿ ಏ.18ರಿಂದ ಮಳೆ
ಮಳೆImage Credit source: MSN
Follow us
ನಯನಾ ರಾಜೀವ್
| Updated By: Digi Tech Desk

Updated on:Apr 19, 2024 | 4:29 PM

ಕರ್ನಾಟಕ(Karnataka)ದ 27ಕ್ಕೂ ಅಧಿಕ ಜಿಲ್ಲೆಗಳಲ್ಲಿ ಏಪ್ರಿಲ್ 18ರಿಂದ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ(Meteorological Department) ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಕಲಬುರಗಿಯಲ್ಲಿ 40.8 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಏಪ್ರಿಲ್ 19 ಹಾಗೂ 20ರಂದು ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಎಚ್​ಎಎಲ್​ನಲ್ಲಿ 35.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.9ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 36.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 35.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 34.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 37.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 27.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 37.2 ಡಿಗ್ರಿ ಸೆಲ್ಸಿಯಸ್​​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 39.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದಲ್ಲಿ ಮುಂದಿನ 3 ದಿನ ಒಣಹವೆ, ಏಪ್ರಿಲ್ 18ರಿಂದ ಮತ್ತೆ ಮಳೆ ಶುರು

ಧಾರವಾಡದಲ್ಲಿ 37.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 39.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಚಿಕ್ಕಮಗಳೂರಿನಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 38.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:32 am, Wed, 17 April 24

‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು