
Bengaluru Rains: ಕರ್ನಾಟಕದಲ್ಲಿ ಇನ್ನೂ ಮಳೆಯ ಆರ್ಭಟ ಕಡಿಮೆಯಾಗಿಲ್ಲ. ಚಳಿಗಾಳಿಯ ಜೊತೆಗೆ ರಾಜ್ಯಾದ್ಯಂತ ವರುಣನ ಅಬ್ಬರವೂ (Heavy Rain) ಮುಂದುವರೆದಿದೆ. ಮೈಸೂರು, ಚಿಕ್ಕಬಳ್ಳಾಪುರ, ರಾಮನಗರ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮಂಡ್ಯ, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನ ವ್ಯಾಪಕ ಮಳೆಯಾಗಲಿದ್ದು, ಇಂದು ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ಕೂಡ ಆರೆಂಜ್ ಅಲರ್ಟ್ (Orange Alert) ಘೋಷಿಸಲಾಗಿದ್ದು, ನವೆಂಬರ್ 16ರವರೆಗೆ ಮಳೆ ಮುಂದುವರೆಯಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗುವ ನಿರೀಕ್ಷೆಯಿದೆ. ಇಂದು ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಸೇರಿದಂತೆ ಪಶ್ಚಿಮ ಘಟ್ಟದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿರುವುದರಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಿಗೆ ಮತ್ತು ರಾಮನಗರ, ದಾವಣಗೆರೆ, ಮೈಸೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ದಕ್ಷಿಣ ಒಳನಾಡಿನ ಇತರ ಜಿಲ್ಲೆಗಳಿಗೆ ನ. 14 ಮತ್ತು ನ. 15ರಂದು ಹಳದಿ ಅಲರ್ಟ್ ಘೋಷಿಸಲಾಗಿದೆ.
ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ವಾಯುಭಾರ ಕುಸಿತದಿಂದಾಗಿ ಈ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಐಎಂಡಿ (IMD) ತಿಳಿಸಿದೆ. ತಮಿಳುನಾಡಿನಲ್ಲಿ ಈಗಾಗಲೇ ಭಾರೀ ಮಳೆಯಾಗುತ್ತಿದ್ದು, ಕರ್ನಾಟಕ, ಕೇರಳ ಮತ್ತು ಆಂಧ್ರಪ್ರದೇಶದಲ್ಲಿ ಕೂಡ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ರಾಮನಗರ, ದಾವಣಗೆರೆ, ಮೈಸೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ದಕ್ಷಿಣ ಒಳನಾಡಿನ ಇತರ ಜಿಲ್ಲೆಗಳಿಗೆ ನವೆಂಬರ್ 14 ಮತ್ತು ನವೆಂಬರ್ 15ರಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ತುಮಕೂರು ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ತೆಲಂಗಾಣ, ಒಡಿಶಾ, ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ವ್ಯಾಪಕವಾದ ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡು, ಮಹಾರಾಷ್ಟ್ರ, ಛತ್ತೀಸ್‌ಗಢ ಮತ್ತು ಲಕ್ಷದ್ವೀಪಗಳಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಮಧ್ಯಪ್ರದೇಶ, ಜಾರ್ಖಂಡ್, ಗಂಗಾ-ಪಶ್ಚಿಮ ಬಂಗಾಳ ಮತ್ತು ಗೋವಾದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
Rainfall Forecast: Widespread very light to moderate rains likely over Coastal Karnataka, Malnad, and SIK districts and isolated to widespread very light to moderate rains likely over NIK districts. pic.twitter.com/heVNlUtWlr
— KSNDMC (@KarnatakaSNDMC) November 12, 2021
ಇಂದಿನಿಂದ 4 ದಿನಗಳ ಕಾಲ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಹಲವಾರು ಪ್ರದೇಶಗಳಲ್ಲಿ ಮಳೆ ಸುರಿಯಲಿದೆ. ಮಳೆಯ ಅಬ್ಬರಕ್ಕೆ ತಮಿಳುನಾಡಿನಲ್ಲಿ 14 ಜನರು ಸಾವನ್ನಪ್ಪಿದ್ದಾರೆ. ತಮಿಳುನಾಡಿಗೆ ತಾಗಿಕೊಂಡೇ ಇರುವ ಬೆಂಗಳೂರಿನಲ್ಲೂ ಮಳೆಯ ಪ್ರಭಾವ ಉಂಟಾಗಿದ್ದು, ಮಳೆ ಹಾಗೂ ಮೋಡ ಕವಿದ ವಾತಾವರಣವಿರಲಿದೆ. ಕರ್ನಾಟಕದ ಎಲ್ಲಾ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 4 ದಿನಗಳವರೆಗೆ ಹಗುರದಿಂದ ಸಾಧಾರಣ ಮಳೆಯಾಗುತ್ತದೆ. ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮುಂದಿನ 4 ದಿನಗಳ ಕಾಲ ಮಳೆಯಾಗಲಿದೆ. ಇಂದಿನಿಂದ ಸೋಮವಾರದವರೆಗೆ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿಯಲ್ಲಿ ಕೆಲವೆಡೆ ಮಳೆಯಾಗುವ ನಿರೀಕ್ಷೆಯಿದೆ.
ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ವ್ಯಾಪಕವಾಗಿ ಹಗುರದಿಂದ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ ತಿಂಗಳಿನಲ್ಲಿ ಕರ್ನಾಟಕದಾದ್ಯಂತ ಮಳೆಗೆ 21 ಜನರು ಸಾವನ್ನಪ್ಪಿದ್ದರು. ಕರ್ನಾಟಕದಲ್ಲಿ ಇಂದಿನಿಂದ ನವೆಂಬರ್ 16ರವರೆಗೆ ಭಾರೀ ಮಳೆ ಸುರಿಯಲಿದೆ. ವಿಶೇಷವಾಗಿ ದಕ್ಷಿಣ ಕರ್ನಾಟಕದ ಪೂರ್ವ ಭಾಗದ ಜಿಲ್ಲೆಗಳಾದ ಚಿತ್ರದುರ್ಗ, ತುಮಕೂರು ಮತ್ತು ಕೋಲಾರಗಳಲ್ಲಿ ಭಾರೀ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ ಕೆಲವು ದಿನಗಳ ಕಾಲ ಚಳಿಯ ವಾತಾವರಣ ದಾಖಲಾಗಲಿದೆ.
ಯಾವ ರಾಜ್ಯಗಳಲ್ಲಿ ಮಳೆ?:
ಇಂದು (ಶನಿವಾರ) ಕೇರಳ ಮತ್ತು ಲಕ್ಷದ್ವೀಪದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಒಡಿಶಾ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ತಮಿಳುನಾಡು ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಸಾಕಷ್ಟು ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಛತ್ತೀಸ್‌ಗಢ, ಜಾರ್ಖಂಡ್ ಮತ್ತು ಗಂಗಾನದಿ-ಪಶ್ಚಿಮ ಬಂಗಾಳದಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಗೋವಾದಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
Bidar & Chitradurga both recorded the lowest minimum temperature of 17.0oC in the plains of the State.
Forecast : Rain very likely to occur at many places over South Interior Karnataka and at isolated places over Coastal Karnataka & North Interior Karnataka.#imdbengaluru— Met centre Bengaluru (@metcentre_bng) November 12, 2021
ಮುಂದಿನ 4 ದಿನಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಮುಂದಿನ 4 ದಿನಗಳಲ್ಲಿ ತಮಿಳುನಾಡು, ಕಾರೈಕಲ್, ಪುದುಚೇರಿ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮತ್ತು ದಕ್ಷಿಣ ಒಡಿಶಾ, ಕರಾವಳಿ ಆಂಧ್ರಪ್ರದೇಶ ಮತ್ತು ರಾಯಲಸೀಮಾದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದಿನಿಂದ ನ. 15ರ ಅವಧಿಯಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ
ಇಂದಿನಿಂದ 3 ದಿನ ಪಂಜಾಬ್, ಹರಿಯಾಣ, ದೆಹಲಿ ಮತ್ತು ಪಶ್ಚಿಮ ಉತ್ತರ ಪ್ರದೇಶದಲ್ಲಿ ಚಳಿಗಾಳಿ ಸಹಿತ ಮಳೆಯಾಗಲಿದೆ. ತಮಿಳುನಾಡಿನ ಕೆಲವು ಭಾಗಗಳಲ್ಲಿ ಈಗಾಗಲೇ ಪ್ರವಾಹದ ಎಚ್ಚರಿಕೆ ನೀಡಲಾಗಿದೆ. ಇಂದು ತಮಿಳುನಾಡು, ಪುದುಚೇರಿ, ಕರಾವಳಿ ಆಂಧ್ರಪ್ರದೇಶ, ರಾಯಲಸೀಮಾ ದಕ್ಷಿಣ ಒಳನಾಡಿನ ಕರ್ನಾಟಕ ಮತ್ತು ಕೇರಳದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯೊಂದಿಗೆ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: Tamil Nadu Rain: ತಮಿಳುನಾಡಿನ ಹಲವೆಡೆ ಪ್ರವಾಹದ ಎಚ್ಚರಿಕೆ; ಚೆನ್ನೈನಲ್ಲಿ ವಿಮಾನ ಹಾರಾಟ ವ್ಯತ್ಯಯ, ಶಾಲೆಗಳು ಬಂದ್
Karnataka Rain: ಬೆಂಗಳೂರು, ಚಿಕ್ಕಮಗಳೂರು ಸೇರಿ 10 ಜಿಲ್ಲೆಗಳಲ್ಲಿ 4 ದಿನ ವ್ಯಾಪಕ ಮಳೆ; ಯೆಲ್ಲೋ ಅಲರ್ಟ್ ಘೋಷಣೆ