AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದು ಮಿಂಚು ಸಹಿತ ಮಳೆ ಸಾಧ್ಯತೆ

Bengaluru Rains: ಡಿಸೆಂಬರ್ 5ರಿಂದ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮತ್ತೊಂದು ಸುತ್ತಿನ ಮಳೆ ಆರಂಭವಾಗಲಿದೆ ಎನ್ನಲಾಗಿದೆ. ಅಲ್ಲಿಯವರೆಗೆ ಅಂದರೆ ಇನ್ನೆರಡು ದಿನ ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ.

Karnataka Rain: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದು ಮಿಂಚು ಸಹಿತ ಮಳೆ ಸಾಧ್ಯತೆ
ಮಳೆ
TV9 Web
| Edited By: |

Updated on: Dec 03, 2022 | 6:18 AM

Share

Bengaluru Weather Today: ಬೆಂಗಳೂರು: ಬೆಂಗಳೂರಿನಲ್ಲಿ 2 ದಿನದಿಂದ ಮಳೆ ಹಾಗೂ ಚಳಿ ಕಡಿಮೆಯಾಗಿ ಸೆಖೆಯ ವಾತಾವರಣ ನಿರ್ಮಾಣವಾಗಿದೆ. ಆದರೆ, ಡಿಸೆಂಬರ್ 5ರಿಂದ ಕರ್ನಾಟಕದ (Karnataka Rains) ಬಹುತೇಕ ಜಿಲ್ಲೆಗಳಲ್ಲಿ ಮತ್ತೊಂದು ಸುತ್ತಿನ ಮಳೆ ಆರಂಭವಾಗಲಿದೆ ಎನ್ನಲಾಗಿದೆ. ಅಲ್ಲಿಯವರೆಗೆ ಅಂದರೆ ಇನ್ನೆರಡು ದಿನ ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ. ಡಿ. 5ರಿಂದ ಬೆಂಗಳೂರು (Bangalore Rains) ಸೇರಿದಂತೆ ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದ ಕೆಲವೆಡೆ ಮಳೆಯಾಗುವ ಮುನ್ಸೂಚನೆ ಇದೆ. ಇಂದು ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಡಿಸೆಂಬರ್ 4ರಂದು ಅಂಡಮಾನ್ ದ್ವೀಪದ ದಕ್ಷಿಣ ಸಮುದ್ರ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ನಿರ್ಮಾಣವಾಗಲಿದೆ. ಡಿಸೆಂಬರ್ 5ರಂದು ಅದೇ ಪ್ರದೇಶದ ಸಮುದ್ರಮಟ್ಟದಲ್ಲಿ ವಾಯುಭಾರ ಕುಸಿತದ ಪ್ರದೇಶ ನಿರ್ಮಾಣವಾಗಲಿದೆ. ಮೈಸೂರಿನಲ್ಲಿ ಡಿ. 14ರವರೆಗೆ ಮೋಡ ಕವಿದ ವಾತಾವರಣವಿರಲಿದ್ದು, ಮಳೆ ಹೆಚ್ಚಾಗಲಿದೆ. ಡಿಸೆಂಬರ್ 8ರ ಸುಮಾರಿಗೆ ಆಂಧ್ರ ಪ್ರದೇಶ ಹಾಗೂ ತಮಿಳುನಾಡಿನ ಕರಾವಳಿಗೆ ಮಳೆ ಅಪ್ಪಳಿಸಲಿದೆ ಎಂದು ಹವಾಮಾನ ತಜ್ಞ ಹಾಗೂ ವಿಜ್ಞಾನಿ ಡಾ. ಪ್ರಸಾದ್ ತಿಳಿಸಿದ್ದಾರೆ.

ಇದನ್ನೂ ಓದಿ: Karnataka Rain: ಕರಾವಳಿ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ; ಮಲೆನಾಡಿನಲ್ಲಿ ಹಗುರ ಮಳೆ ಸಾಧ್ಯತೆ

ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾನಗರ, ಮಂಡ್ಯ, ಮೈಸೂರು ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಅದರಂತೆ ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಇಂದು ಕರ್ನಾಟಕ, ತಮಿಳುನಾಡು ಹಾಗೂ ಕೇರಳದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ಡಿಸೆಂಬರ್ 8ರ ವೇಳೆಗೆ ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Karnataka Weather Today: ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಇನ್ನೆರಡು ದಿನ ಮಳೆಯ ನಿರೀಕ್ಷೆ

ಇಂದು ಯಾವ ರಾಜ್ಯಗಳಲ್ಲಿ ಮಳೆ?: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಸಾಕಷ್ಟು ವ್ಯಾಪಕವಾದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಕೊಂಕಣ, ಗೋವಾ, ಮಹಾರಾಷ್ಟ್ರ, ಆಂಧ್ರಪ್ರದೇಶ, ಯಾನಂ, ರಾಯಲಸೀಮಾ, ತೆಲಂಗಾಣ, ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಮತ್ತು ಮಧ್ಯ ಭಾರತದಲ್ಲಿ ಅದರಲ್ಲೂ ವಿಶೇಷವಾಗಿ ಪಂಜಾಬ್ ಮತ್ತು ಹಿಮಾಚಲ ಪ್ರದೇಶದ ಮೇಲೆ ಮುಂಜಾನೆ ದಟ್ಟವಾದ ಮಂಜು ಕವಿಯುವ ಸಾಧ್ಯತೆಯಿದೆ. ಇನ್ನುಳಿದ ಪ್ರದೇಶಗಳಲ್ಲಿ ಒಣ ಹವಾಮಾನ ಇರಲಿದೆ ಎಂದು ನಿರೀಕ್ಷಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ