Bengaluru Rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 4 ದಿನ ಮಳೆ ಸುರಿಯಲಿದೆ. ಇಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ, ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ರಾಮನಗರ, ಕೊಡಗು, ಶಿವಮೊಗ್ಗ, ಮೈಸೂರು, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಇಂದು (ಶನಿವಾರ) ಮಳೆಯಾಗುವ ನಿರೀಕ್ಷೆಯಿದೆ.
ಕರ್ನಾಟಕದ ಹಾಸನ, ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಮೈಸೂರು, ಮಂಡ್ಯ, ಚಿಕ್ಕಮಗಳೂರು, ತುಮಕೂರು, ರಾಮನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ. ಕರ್ನಾಟಕದ ಬಹುತೇಕ ಕಡೆ ಇಂದು ಮೋಡ ಕವಿದ ವಾತಾವರಣವಿರಲಿದೆ. ಬೆಂಗಳೂರಿನಲ್ಲೂ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಜೂನ್ ತಿಂಗಳಿನಿಂದ ರಾಜ್ಯದಲ್ಲಿ ಮಳೆಯಾಗುತ್ತಿದ್ದು, ಇನ್ನೂ ಮಳೆ ಮುಂದುವರೆದಿದೆ.
Isolated to scattered light/moderate rainfall activity likely over south Coastal Andhra Pradesh & Yanam,
Rayalaseema, South Interior Karnataka, Tamilnadu, Puducherry & Karaikal and Kerala & Mahe during next 5 days. pic.twitter.com/1T5ONlAXap— India Meteorological Department (@Indiametdept) December 10, 2021
ಆಂಧ್ರಪ್ರದೇಶದ ಕರಾವಳಿ, ತೆಲಂಗಾಣ, ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಯಾನಂ, ರಾಯಲಸೀಮಾ, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ ಮತ್ತು ಮಾಹೆಯಲ್ಲಿ ಇಂದಿನಿಂದ 4 ದಿನ ಮಳೆಯಾಗಲಿದೆ. ಇಂದು ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗುವ ನಿರೀಕ್ಷೆಯಿದೆ. ಈಶಾನ್ಯ ಪ್ರದೇಶ, ಕರ್ನಾಟಕ ಮತ್ತು ಲಕ್ಷದ್ವೀಪದಲ್ಲಿ ಪ್ರತ್ಯೇಕ ಮಳೆಯಾಗುವ ಸಾಧ್ಯತೆಯಿದೆ. ದೇಶದ ಉಳಿದ ಭಾಗಗಳಲ್ಲಿ ಶುಷ್ಕ ಹವಾಮಾನದ ಮುನ್ಸೂಚನೆ ನೀಡಲಾಗಿದೆ. ಈಶಾನ್ಯ ಪ್ರದೇಶದಲ್ಲಿ ಬೆಳಗಿನ ವೇಳೆ ಮಂಜು ಕವಿಯುವ ಸಾಧ್ಯತೆ ಇರುತ್ತದೆ.
ಮುಂದಿನ 4 ದಿನಗಳಲ್ಲಿ ದಕ್ಷಿಣ ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂ, ರಾಯಲಸೀಮಾ, ದಕ್ಷಿಣ ಒಳನಾಡು ಕರ್ನಾಟಕ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಮತ್ತು ಕೇರಳ ಮತ್ತು ಮಾಹೆಯಲ್ಲಿ ಚದುರಿದ ಲಘು ಅಥವಾ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶುಕ್ರವಾರ ಮುನ್ಸೂಚನೆ ನೀಡಿದೆ. ಡಿಸೆಂಬರ್ 13ರ ರಾತ್ರಿಯಿಂದ ಪಶ್ಚಿಮ ಹಿಮಾಲಯ ಪ್ರದೇಶದ ಮೇಲೆ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: Karnataka Rain: ಡಿ. 11ರವರೆಗೆ ಕರ್ನಾಟಕದಲ್ಲಿ ಹಗುರ ಮಳೆ; ತಮಿಳುನಾಡು, ಆಂಧ್ರ, ಬಂಗಾಳದಲ್ಲಿ ಇಂದು ಭಾರೀ ಮಳೆ
Karnataka Weather Today: ಚಳಿಗಾಲದಲ್ಲೂ ನಿಲ್ಲದ ವರುಣನ ಅಬ್ಬರ; ಇನ್ನೆರಡು ದಿನ ರಾಜ್ಯದಲ್ಲಿ ಮಳೆ ಸಾಧ್ಯತೆ
Published On - 6:10 am, Sat, 11 December 21