AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರಿನಲ್ಲಿ ಇನ್ನೆರಡು ದಿನ ಗುಡುಗು ಸಹಿತ ಮಳೆ

Karnataka Weather Today: ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ, ಹಾಸನ, ಮೈಸೂರು, ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಇಂದು ಸಾಕಷ್ಟು ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ.

Karnataka Rain: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರಿನಲ್ಲಿ ಇನ್ನೆರಡು ದಿನ ಗುಡುಗು ಸಹಿತ ಮಳೆ
ಮಳೆ
TV9 Web
| Edited By: |

Updated on: Apr 10, 2022 | 5:55 AM

Share

ಬೆಂಗಳೂರು: ಕರ್ನಾಟಕದಲ್ಲಿ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಕರ್ನಾಟಕದ ಶಿವಮೊಗ್ಗ, ದಾವಣಗೆರೆ, ಬೆಂಗಳೂರು, ಮೈಸೂರು, ಹಾಸನದಲ್ಲಿ ಮಳೆಯ ಆರ್ಭಟ (Heavy Rainfall) ಹೆಚ್ಚಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೆರಡು ದಿನ ಗುಡುಗು ಸಹಿತ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಉತ್ತರ ಕರ್ನಾಟಕದಲ್ಲೂ ಭಾರೀ ಮಳೆಯಾಗುತ್ತಿದ್ದು, ಬೆಳಗಾವಿ, ಬಾಗಲಕೋಟೆ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ.

ಇಂದು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ, ಹಾಸನ, ಮೈಸೂರು, ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಸಾಕಷ್ಟು ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಏ. 11ರವರೆಗೂ ಮಳೆ ಮುಂದುವರೆಯಲಿದೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ, ಹಾಸನ, ದಾವಣಗೆರೆ, ಬೆಂಗಳೂರು, ಮೈಸೂರು, ಕೊಡಗು ಮುಂತಾದ ಕಡೆ ಮಳೆಯ ಆರ್ಭಟವಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಕೇರಳ, ತಮಿಳುನಾಡು, ಕರ್ನಾಟಕ ಮತ್ತು ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತದೆ.

ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ಇಂದು ಮಳೆ ಮುಂದುವರೆಯಲಿದೆ. ತಮಿಳುನಾಡು, ಕೇರಳ, ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಇಂದು ಮಳೆಯಾಗಲಿದೆ. ಕರಾವಳಿ ಮಾತ್ರವಲ್ಲದೆ ಬೆಂಗಳೂರು, ಚಾಮರಾಜನಗರ, ಮೈಸೂರು, ಹಾಸನ, ಮಂಡ್ಯ, ರಾಮನಗರ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಕೂಡ ಇಂದು ಮಳೆಯಾಗುವ ಸಾಧ್ಯತೆ ಇದೆ. ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗುವ ಸಾಧ್ಯತೆಯಿದ್ದು, ಇಂದಿನಿಂದ 2 ದಿನ ಗುಡುಗು ಸಹಿತ ಮಳೆಯಾಗಲಿದೆ.

ಮುಂದಿನ 2 ದಿನಗಳ ಕಾಲ ಅರುಣಾಚಲ ಪ್ರದೇಶ, ಹಿಮಾಲಯ ಪ್ರದೇಶ, ಸಿಕ್ಕಿಂ, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಚದುರಿದಂತೆ ಮಳೆಯಾಗಲಿದೆ ಎಂದು ಮಾಹಿತಿ ನೀಡಲಾಗಿದೆ. ನಾಗಾಲ್ಯಾಂಡ್, ಮಣಿಪುರ, ತ್ರಿಪುರದಲ್ಲಿಯೂ ಸಾಧಾರಣ ಮಳೆಯಾಗಲಿದೆ. ಮುಂದಿನ ಒಂದೆರಡು ದಿನಗಳಲ್ಲಿ ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರ ಪ್ರದೇಶ ಮತ್ತು ಲಕ್ಷದ್ವೀಪದ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕೂಡ ಗುಡುಗು ಸಹಿತ ಮಳೆಯಾಗಲಿದೆ.

ಇಂದು ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂನಲ್ಲಿ ಭಾರೀ ಮಳೆ ಬೀಳಬಹುದು. ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂನಲ್ಲಿ ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಅಸ್ಸಾಂ ಮತ್ತು ಮೇಘಾಲಯದಲ್ಲಿ ಸಾಕಷ್ಟು ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ತಮಿಳುನಾಡು, ಕೇರಳ ಮತ್ತು ಲಕ್ಷದ್ವೀಪದಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಒಡಿಶಾ, ಬಿಹಾರ, ಕರಾವಳಿ ಮಹಾರಾಷ್ಟ್ರ, ಗೋವಾ, ಛತ್ತೀಸ್‌ಗಢ, ಆಂಧ್ರಪ್ರದೇಶ, ಕರ್ನಾಟಕ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕೂಡ ಮಳೆಯಾಗುವ ಸಾಧ್ಯತೆಯಿದೆ. ರಾಜಸ್ಥಾನ, ಹರಿಯಾಣ, ದೆಹಲಿ, ಪಂಜಾಬ್ ಮತ್ತು ಉತ್ತರ ಪ್ರದೇಶದಲ್ಲಿ ಬಿಸಿಗಾಳಿ ಉಂಟಾಗಲಿದೆ. ಹಿಮಾಚಲ ಪ್ರದೇಶ, ಉತ್ತರ ಪ್ರದೇಶ, ಮಧ್ಯಪ್ರದೇಶ, ಜಾರ್ಖಂಡ್, ಮಹಾರಾಷ್ಟ್ರ ಮತ್ತು ಬಿಹಾರದಲ್ಲಿ ಕೂಡ ಬಿಸಿಗಾಳಿ ಇರಲಿದೆ.

ಕಳೆದ 10ರಿಂದ 12 ದಿನಗಳಿಂದ ಕೇರಳದಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಆಗಾಗ ಭಾರಿ ತುಂತುರು ಮಳೆಯಾಗುತ್ತಿದೆ. ಕಳೆದ ಎರಡು ದಿನಗಳಲ್ಲಿ, ಕೇರಳದ ಹಲವು ಭಾಗಗಳಲ್ಲಿ ಮಳೆ ಚಟುವಟಿಕೆಗಳು ತೀವ್ರಗೊಂಡಿವೆ ಮತ್ತು ರಾಜ್ಯದ ಕೆಲವು ಭಾಗಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಿದೆ. ಕರಾವಳಿ ಕರ್ನಾಟಕದ ಕೆಲವು ಭಾಗಗಳಲ್ಲಿ ಲಘುವಾಗಿ ಸಾಧಾರಣ ಮಳೆಯಾಗಿದೆ. ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಮತ್ತು ಶ್ರೀಲಂಕಾದ ಪಕ್ಕದ ಭಾಗಗಳಲ್ಲಿ ಚಂಡಮಾರುತದ ಪರಿಚಲನೆಯು ಮುಂದುವರಿಯಲಿದ್ದು, ಕನಿಷ್ಠ ಮುಂದಿನ 48 ಗಂಟೆಗಳ ಕಾಲ ತಮಿಳುನಾಡು ಮತ್ತು ಕೇರಳದ ಮೇಲೆ ಹೆಚ್ಚಿನ ಮಳೆಯಾಗಲಿದೆ.

ಮುಂದಿನ ಐದು ದಿನಗಳಲ್ಲಿ ರಾಜಸ್ಥಾನ, ಪಂಜಾಬ್, ದಕ್ಷಿಣ ಹರಿಯಾಣ ಮತ್ತು ದೆಹಲಿಯ ಕೆಲವು ಭಾಗಗಳಲ್ಲಿ ಬಿಸಿಗಾಳಿಯಿಂದ ತೀವ್ರತರವಾದ ಶಾಖದ ಅಲೆ ಉಂಟಾಗಲಿದೆ. ಅರುಣಾಚಲ ಪ್ರದೇಶ, ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಏ. 13ರವರೆಗೆ ಭಾರೀ ಮಳೆಯಾಗಲಿದೆ.

ಇದನ್ನೂ ಓದಿ: Karnataka Rain: ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಇನ್ನೆರಡು ದಿನ ಮಳೆ; ಬೆಂಗಳೂರಿನ ಹವಾಮಾನ ಹೀಗಿದೆ

Karnataka Rain: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಏ. 9ರವರೆಗೂ ಗುಡುಗು ಸಹಿತ ಮಳೆ

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ