Karnataka Rain: ಕೇರಳಕ್ಕೆ ಮುಂಗಾರು ಆಗಮನ ಹಿನ್ನೆಲೆ; ಕರ್ನಾಟಕದಲ್ಲೂ ಮಳೆ ಶುರು

TV9 Digital Desk

| Edited By: Sushma Chakre

Updated on: May 30, 2022 | 5:49 AM

ಇಂದು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್, ಉತ್ತರಾಖಂಡದಲ್ಲಿ ಭಾರೀ ಮಳೆಯಾಗಲಿದ್ದು, ಉತ್ತರಾಖಂಡದಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ. ಕರ್ನಾಟಕಕ್ಕೆ ಜೂನ್ ಮೊದಲ ವಾರದಲ್ಲಿ ಮಾನ್ಸೂನ್ ಪ್ರವೇಶವಾಗಲಿದೆ.

Karnataka Rain: ಕೇರಳಕ್ಕೆ ಮುಂಗಾರು ಆಗಮನ ಹಿನ್ನೆಲೆ; ಕರ್ನಾಟಕದಲ್ಲೂ ಮಳೆ ಶುರು
ಮಳೆ
Image Credit source: google

ಬೆಂಗಳೂರು: ನೆರೆಯ ರಾಜ್ಯವಾದ ಕೇರಳದಲ್ಲಿ ಮುಂಗಾರು ಮಳೆ ಶುರುವಾಗಿದೆ. ಕರ್ನಾಟಕದಲ್ಲಿ (Karnataka Rains) ಕಡಿಮೆಯಾಗಿದ್ದ ಮಳೆ ಇಂದಿನಿಂದ ಮತ್ತೆ ಶುರುವಾಗಲಿದೆ. ಮುಂದಿನ 3 ದಿನಗಳಲ್ಲಿ ಕೇರಳ (Kerala Rain) ಮತ್ತು ಮಾಹೆ ಲಕ್ಷದ್ವೀಪದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ ಮತ್ತು ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (IMD) ನೀಡಿದೆ. ಕರ್ನಾಟಕಕ್ಕೆ ಜೂನ್ ಮೊದಲ ವಾರದಲ್ಲಿ ಮಾನ್ಸೂನ್ (Monsoon) ಪ್ರವೇಶವಾಗಲಿದೆ.

ಇಂದು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್, ಉತ್ತರಾಖಂಡದಲ್ಲಿ ಭಾರೀ ಮಳೆಯಾಗಲಿದ್ದು, ಉತ್ತರಾಖಂಡದಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ. ಉತ್ತರಾಖಂಡದ ವಿವಿಧ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ವಿಶೇಷವಾಗಿ ಉತ್ತರಕಾಶಿ, ರುದ್ರಪ್ರಯಾಗ, ಚಮೋಲಿ, ಬಾಗೇಶ್ವರ್ ಮತ್ತು ಪಿಥೋರಗಢ ಜಿಲ್ಲೆಗಳಲ್ಲಿ ಅತಿ ಹಗುರವಾದ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂದು ಉತ್ತರಾಖಂಡ್ ಐಎಂಡಿ ಹೇಳಿದೆ. ಇಂದು ಕೇರಳ ಮತ್ತು ಮಾಹೆಯಲ್ಲಿ ಗುಡುಗು ಮತ್ತು ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಇಂದು ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಚದುರಿದ ಮಳೆಯಾಗಲಿದೆ.

ಇದನ್ನೂ ಓದಿ: Monsoon 2022: ಕೇರಳಕ್ಕೆ ಮುಂಗಾರು ಪ್ರವೇಶ; ಜೂನ್ ಮೊದಲ ವಾರದಲ್ಲಿ ಕರ್ನಾಟಕದಲ್ಲಿ ಮಾನ್ಸೂನ್ ಶುರು

ಮುಂದಿನ 3 ದಿನಗಳಲ್ಲಿ ಬಿಹಾರ, ಜಾರ್ಖಂಡ್, ಒಡಿಶಾ ಮತ್ತು ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಚದುರಿದ ಮಳೆಯಾಗಲಿದೆ. ಮುಂದಿನ 3 ದಿನಗಳವರೆಗೆ ಕೇರಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಪಶ್ಚಿಮ ಹಿಮಾಲಯದ ಪ್ರದೇಶದ ಮೇಲೆ ಪಶ್ಚಿಮ ಅಡಚಣೆಯು ಪರಿಣಾಮ ಬೀರುತ್ತದೆ. ಮುಂದಿನ 3 ದಿನಗಳವರೆಗೆ ಚದುರಿದ ಮಳೆಯಾಗುತ್ತದೆ. ಮುಂದಿನ 3 ದಿನಗಳವರೆಗೆ ಗಂಗಾನದಿ ಬಯಲಿನಾದ್ಯಂತ ಹಗಲಿನ ತಾಪಮಾನವು ಸಾಮಾನ್ಯಕ್ಕಿಂತ ತಂಪಾಗಿರುತ್ತದೆ.

ಮುಂದಿನ 3 ದಿನಗಳಲ್ಲಿ ಬಿಹಾರ, ಜಾರ್ಖಂಡ್, ಒಡಿಶಾ ಮತ್ತು ಗಂಗಾನದಿ ಪಶ್ಚಿಮ ಬಂಗಾಳದಲ್ಲಿ ಗುಡುಗು, ಮಿಂಚು, ಬಿರುಗಾಳಿ ಸಹಿತ ಚದುರಿದ ಮಳೆಯಾಗಲಿದೆ. ಭಾರತೀಯ ಹವಾಮಾನ ಇಲಾಖೆ ಭಾನುವಾರ ಉತ್ತರಾಖಂಡದ ಹಲವು ಭಾಗಗಳಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಿದ್ದು, ಭಾರೀ ಮಳೆ, ಮಿಂಚು ಮತ್ತು ಬಲವಾದ ಗಾಳಿಯ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: Monsoon 2022: ಕರ್ನಾಟಕದ ಕರಾವಳಿಯಲ್ಲಿ ಇಂದು ಮಳೆ; ಇನ್ನೆರಡು ದಿನಗಳಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ಕೇರಳಕ್ಕೆ ಮುಂಗಾರು ಮಳೆ ಎಂಟ್ರಿಯಾಗಿದೆ. ಕೇರಳದಲ್ಲಿ ಈ ವರ್ಷದ ನೈಋತ್ಯ ಮಾನ್ಸೂನ್ ಶುರುವಾಗಿದ್ದು, ವಾಡಿಕೆಗಿಂತ 3 ದಿನ‌ ಮುಂಚಿತವಾಗಿ ಮುಂಗಾರು ಪ್ರವೇಶವಾಗಿದೆ. ಜೂನ್​ ಮೊದಲ ವಾರದಲ್ಲಿ ಕರ್ನಾಟಕಕ್ಕೂ ಮುಂಗಾರು ಪ್ರವೇಶವಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕೇರಳದಲ್ಲಿ ಮುಂದಿನ 3 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕೇರಳದಾದ್ಯಂತ ವ್ಯಾಪಕವಾದ ಮಳೆಯ ಹೊರತಾಗಿಯೂ ಮಾನ್ಸೂನ್‌ನ ಆರಂಭವು ತೀವ್ರತೆಯ ದೃಷ್ಟಿಯಿಂದ ಕಡಿಮೆಯಾಗಿದೆ.

ಮುಂದಿನ 3 ದಿನಗಳಲ್ಲಿ ಕೇರಳದಾದ್ಯಂತ ಗುಡುಗು ಮತ್ತು ಮಿಂಚು ಸಹಿತ ವ್ಯಾಪಕವಾದ ಮಳೆಯ ಮುನ್ಸೂಚನೆ ಇದೆ, ಗುರುವಾರದವರೆಗೆ ಕೇರಳದ ಕರಾವಳಿಯಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ. ಮುಂದಿನ 3-4 ದಿನಗಳಲ್ಲಿ ಕೇರಳದ ಕೆಲವು ಭಾಗಗಳು, ತಮಿಳುನಾಡು, ಕರ್ನಾಟಕ ಮತ್ತು ಈಶಾನ್ಯ ರಾಜ್ಯಗಳ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ.

ಇನ್ನಷ್ಟು ಮಳೆಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada