Karnataka Rain: ಇಂದಿನಿಂದ 3 ದಿನ ಮಲೆನಾಡು, ಕರಾವಳಿ, ಬೆಂಗಳೂರಿನಲ್ಲಿ ಮಳೆ; ಚಳಿಗಾಳಿಯೂ ಹೆಚ್ಚಳ

Karnataka Weather Today: ಹವಾಮಾನ ಇಲಾಖೆ ಇಂದು ಕರ್ನಾಟಕದ ಕರಾವಳಿ ಕರ್ನಾಟಕ, ಮಲೆನಾಡು, ಉತ್ತರ ಒಳನಾಡಿನ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.

Karnataka Rain: ಇಂದಿನಿಂದ 3 ದಿನ ಮಲೆನಾಡು, ಕರಾವಳಿ, ಬೆಂಗಳೂರಿನಲ್ಲಿ ಮಳೆ; ಚಳಿಗಾಳಿಯೂ ಹೆಚ್ಚಳ
ಮಳೆ
Follow us
TV9 Web
| Updated By: ಆಯೇಷಾ ಬಾನು

Updated on: Nov 14, 2021 | 6:51 AM

Bengaluru Rains: ಇಂದಿನಿಂದ ನ. 16ರವರೆಗೂ ಮೈಸೂರು, ರಾಮನಗರ, ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮಂಡ್ಯ, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿ ಭಾರೀ ಮಳೆಯಾಗಲಿದ್ದು, ಹಳದಿ ಅಲರ್ಟ್​ (Yellow Alert) ಘೋಷಿಸಲಾಗಿದೆ. ಮಲೆನಾಡು, ಕರಾವಳಿ ಮಾತ್ರವಲ್ಲದೆ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಇಂದು ಮತ್ತು ನ. 15ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ಕೂಡ ಚಳಿಗಾಳಿ ಹಾಗೂ ತುಂತುರು ಮಳೆ ಮುಂದುವರೆಯಲಿದೆ.

ತಮಿಳುನಾಡಿನಲ್ಲಿ ಈಗಾಗಲೇ ಭಾರೀ ಮಳೆಯಾಗುತ್ತಿದ್ದು, ಕರ್ನಾಟಕ, ಕೇರಳ ಮತ್ತು ಆಂಧ್ರಪ್ರದೇಶದಲ್ಲಿ ಕೂಡ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ರಾಮನಗರ, ದಾವಣಗೆರೆ, ಮೈಸೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ದಕ್ಷಿಣ ಒಳನಾಡಿನ ಇತರ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ತುಮಕೂರು, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕೂಡ ಮಳೆ ಹೆಚ್ಚಾಗಲಿದೆ.

ಹವಾಮಾನ ಇಲಾಖೆ ಇಂದು ಕರ್ನಾಟಕದ ಕರಾವಳಿ ಕರ್ನಾಟಕ, ಮಲೆನಾಡು, ಉತ್ತರ ಒಳನಾಡಿನ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು ಕರ್ನಾಟಕ ಪ್ರದೇಶಗಳಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಚದುರಿದಂತೆ ಚದುರಿದಂತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ 3 ದಿನ ತಮಿಳುನಾಡು, ಒಡಿಶಾ, ಆಂಧ್ರಪ್ರದೇಶದ ಕರಾವಳಿ, ಕಾರೈಕಲ್ ಮತ್ತು ಪುದುಚೇರಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಕೇರಳ, ಕರ್ನಾಟಕದ ಕರಾವಳಿ ಮತ್ತು ಅಂಡಮಾನ್ ದ್ವೀಪಗಳಲ್ಲಿ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಒಡಿಶಾ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ತಮಿಳುನಾಡು, ಲಕ್ಷದ್ವೀಪ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕೂಡ ವ್ಯಾಪಕವಾದ ಗುಡುಗು ಸಹಿತ ಮಳೆಯಾಗಲಿದೆ. ಇಂದು ದಕ್ಷಿಣ ಮಹಾರಾಷ್ಟ್ರ, ಗೋವಾ, ಛತ್ತೀಸ್‌ಗಢ, ಜಾರ್ಖಂಡ್ ಮತ್ತು ಗಂಗಾ-ಪಶ್ಚಿಮ ಬಂಗಾಳದಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಮಧ್ಯಪ್ರದೇಶ ಮತ್ತು ಉತ್ತರ ಮಹಾರಾಷ್ಟ್ರದಲ್ಲಿ ಪ್ರತ್ಯೇಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕದಲ್ಲಿ ಇಂದಿನಿಂದ ನವೆಂಬರ್ 16ರವರೆಗೆ ಭಾರೀ ಮಳೆ ಸುರಿಯಲಿದೆ. ವಿಶೇಷವಾಗಿ ದಕ್ಷಿಣ ಕರ್ನಾಟಕದ ಪೂರ್ವ ಭಾಗದ ಜಿಲ್ಲೆಗಳಾದ ಚಿತ್ರದುರ್ಗ, ತುಮಕೂರು ಮತ್ತು ಕೋಲಾರಗಳಲ್ಲಿ ಭಾರೀ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ ಕೆಲವು ದಿನಗಳ ಕಾಲ ಚಳಿಯ ವಾತಾವರಣ ಇರಲಿದೆ.

ಇಂದಿನಿಂದ ನ. 16ರ ಅವಧಿಯಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದಿನಿಂದ 3 ದಿನ ಪಂಜಾಬ್, ಹರಿಯಾಣ, ದೆಹಲಿ ಮತ್ತು ಪಶ್ಚಿಮ ಉತ್ತರ ಪ್ರದೇಶದಲ್ಲಿ ಚಳಿಗಾಳಿ ಸಹಿತ ಮಳೆಯಾಗಲಿದೆ. ತಮಿಳುನಾಡಿನ ಕೆಲವು ಭಾಗಗಳಲ್ಲಿ ಈಗಾಗಲೇ ಪ್ರವಾಹದ ಎಚ್ಚರಿಕೆ ನೀಡಲಾಗಿದೆ. ಇಂದು ತಮಿಳುನಾಡು, ಪುದುಚೇರಿ, ಕರಾವಳಿ ಆಂಧ್ರಪ್ರದೇಶ, ರಾಯಲಸೀಮಾ ದಕ್ಷಿಣ ಒಳನಾಡಿನ ಕರ್ನಾಟಕ ಮತ್ತು ಕೇರಳದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯೊಂದಿಗೆ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Weather Today: ಶಿವಮೊಗ್ಗ, ಬೆಂಗಳೂರು, ಕೊಡಗು ಸೇರಿ 9 ಜಿಲ್ಲೆಗಳಲ್ಲಿ ಮಳೆಯಿಂದ ಹಳದಿ ಅಲರ್ಟ್​ ಘೋಷಣೆ

Kerala Rains: ಕೇರಳದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ; ಐಎಂಡಿಯಿಂದ ಆರೆಂಜ್​ ಅಲರ್ಟ್​ ಘೋಷಣೆ