Karnataka Rains: ರಾಜ್ಯದ ದಕ್ಷಿಣ ಒಳನಾಡಿನ ಬೆಂಗಳೂರು, ತುಮಕೂರು, ಕರಾವಳಿಯ ಎಲ್ಲಾ ಜಿಲ್ಲೆಗಳು, ಉತ್ತರ ಒಳನಾಡಿನ ಕೆಲವೆಡೆ ಭಾರಿ ಮಳೆ
Karnataka Weather: ದಕ್ಷಿಣ ಒಳನಾಡಿನ ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಎಲ್ಲಾ ಜಿಲ್ಲೆಗಳು, ಉತ್ತರ ಒಳನಾಡಿನ ಕಲಬುರಗಿ, ಯಾದಗಿರಿ, ರಾಯಚೂರು, ಬೀದರ್ನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಎಲ್ಲಾ ಜಿಲ್ಲೆಗಳು, ಉತ್ತರ ಒಳನಾಡಿನ ಕಲಬುರಗಿ, ಯಾದಗಿರಿ, ರಾಯಚೂರು, ಬೀದರ್ನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಬೆಂಗಳೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರದಲ್ಲಿ ಮಳೆಯಾಗಲಿದೆ.
ಕಾರವಾರ ಮತ್ತು ವಿಜಯಪುರದಲ್ಲಿ 36.5 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ತುಮಕೂರು, ಪಾವಗಡ, ಚನ್ನಪಟ್ಟಣ, ರಾಮನಗರ, ಹರದನಹಳ್ಳಿ, ನಾಲ್ವತವಾಡ, ಕುಣಿಗಲ್, ಯಡ್ರಾಮಿ, ಜೇವರ್ಗಿ, ಕೋಡ್ಲಾ, ಫರಹತಾಬಾದ್, ಗುಂಡಗುರ್ತಿ, ಕಕ್ಕೇರಿ, ಪರಶುರಾಂಪುರ, ಮದ್ದೂರು, ಮಳವಳ್ಳಿ, ಚಾಮರಾಜನಗರ, ಗುಬ್ಬಿ, ಬುಕ್ಕಪಟ್ಟಣ, ಬಂಡೀಪುರ, ದೊಡ್ಡಬಳ್ಳಾಪುರ, ಅಡಕಿ, ಅರಕಲಗೂಡು, ಚನ್ನರಾಯಪಟ್ಟಣ, ಕೋಣನೂರು, ಹೆಬ್ಬೂರು, ಮೈಸೂರು, ಕೆಂಭಾವಿ, ನಾರಾಯಣಪುರ, ಮುಧೋಳ, ಸೇಡಂ, ನೆಲೋಗಿ, ಗೋಪಾಲನಗರ, ಉತ್ತರಹಳ್ಳಿ, ಬೆಂಗಳೂರು ಕೆಐಎಎಲ್, ಶ್ರೀಮಂಗಲ, ಸುಂಟಿಕೊಪ್ಪ, ಸರಗೂರು, ಟಿ ನರಸೀಪುರ, ಶ್ರೀರಂಗಪಟ್ಟಣ, ಮಧುಗಿರಿ, ಸಿರಾ, ಚಿಕ್ಕನಹಳ್ಳಿ, ಹಿಡಿಯೂರು, ಕೊಳ್ಳೇಗಾಲ, ಶಿಡ್ಲಘಟ್ಟದಲ್ಲಿ ಮಳೆಯಾಗಲಿದೆ.
ಮತ್ತಷ್ಟು ಓದಿ: Karnataka Rains: ಬೆಂಗಳೂರು, ಮಂಡ್ಯ ಸೇರಿ ರಾಜ್ಯದ ಎಲ್ಲೆಲ್ಲಿ ಮುಂದಿನ 24 ತಾಸುಗಳಲ್ಲಿ ಭಾರಿ ಮಳೆಯಾಗಲಿದೆ, ಇಲ್ಲಿದೆ ಮಾಹಿತಿ
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ರಾತ್ರಿ ವೇಳೆ ಗುಡುಗು ಸಹಿತ ಮಳೆ ನಿರೀಕ್ಷಿಸಲಾಗಿದೆ. ಎಚ್ಎಎಲ್ನಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 2ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:44 am, Thu, 4 May 23