Karnataka Rains: ಮುಂದಿನ 48 ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ, ಯೆಲ್ಲೋ ಅಲರ್ಟ್​ ಘೋಷಣೆ

ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಮುಂದಿನ 48 ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ, ಯೆಲ್ಲೋ ಅಲರ್ಟ್​ ಘೋಷಣೆ
ಮಳೆ
Image Credit source: India.com

Updated on: May 30, 2023 | 7:26 AM

ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರಿನಲ್ಲಿ ಭಾರಿ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಂದೆರಡು ಕಡೆ ಸಾಧಾರಣ ಮಳೆಯಾಗಲಿದೆ.

ಬಾಳೆಹೊನ್ನೂರು, ಕಣಬರ್ಗಿ, ಸವಣೂರು, ಶ್ರೀಮಂಗಲ, ಗೋಣಿಕೊಪ್ಪಲು, ಹಾವೇರಿ, ಬೆಳಗಾವಿ ನಗರ, ಪೊನ್ನಂಪೇಟೆ, ಮೂಡಿಗೆರೆಯಲ್ಲಿ ಮಳೆಯಾಗಿದೆ. ರಾಜ್ಯಾದ್ಯಂತ ಬಿರುಗಾಳಿ ಸಹಿತ, ಗುಡುಗಿನಿಂದ ಕೂಡಿದ ಮಳೆಯಾಗಲಿದೆ, ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ ಇರುವ ಸಾಧ್ಯತೆ ಇದೆ.

ಕಲಬುರಗಿಯಲ್ಲಿ 41.1 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ನಗರದಲ್ಲಿ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣವಿರಲಿದೆ, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Karnataka Rains: ಬೆಂಗಳೂರು, ಕೊಡಗು ಸೇರಿದಂತೆ 9 ಜಿಲ್ಲೆಗಳಲ್ಲಿ ಜೂನ್​ 2 ರವರೆಗೆ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​ ಘೋಷಣೆ

ಎಚ್​ಎಎಲ್​ನಲ್ಲಿ 34.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ