Karnataka Rain: ಕರ್ನಾಟಕದೆಲ್ಲೆಡೆ ಶೀತ ಗಾಳಿ, 4 ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯ ಮುನ್ಸೂಚನೆ, ಯೆಲ್ಲೋ ಅಲರ್ಟ್​

|

Updated on: Jan 10, 2024 | 7:32 AM

ಕರ್ನಾಟಕದೆಲ್ಲೆಡೆ ಶೀತಗಾಳಿ ಬೀಸುತ್ತಿದೆ, ಅಲ್ಲಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಅಕಾಲಿಕ ಮಳೆಯಾಗುತ್ತಿದೆ. ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಹಾಸನ,ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rain: ಕರ್ನಾಟಕದೆಲ್ಲೆಡೆ ಶೀತ ಗಾಳಿ, 4 ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯ ಮುನ್ಸೂಚನೆ, ಯೆಲ್ಲೋ ಅಲರ್ಟ್​
ಮಳೆ
Image Credit source: The Hindu
Follow us on

ಕರ್ನಾಟಕದೆಲ್ಲೆಡೆ ಶೀತಗಾಳಿ ಬೀಸುತ್ತಿದೆ, ಅಲ್ಲಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಅಕಾಲಿಕ ಮಳೆಯಾಗುತ್ತಿದೆ. ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಹಾಸನ,ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ,ಕಲಬುರಗಿ, ವಿಜಯಪುರ, ಬಳ್ಳಾರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಮಳೆಯಾಗಲಿದೆ.

ಮಂಗಳೂರು, ಪಣಂಬೂರು, ಉಡುಪಿ, ಮುಲ್ಕಿ, ಮಾಣಿ, ಮೈಸೂರಿನಲ್ಲಿ ಮಳೆಯಾಗಿದೆ. ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ, ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು.

ಬೀದರ್​ನಲ್ಲಿ 16.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ, ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿದ್ದು, ಚದುರಿದ ಮಳೆಯಾಗುವ ಸಾಧ್ಯತೆ ಇದೆ. 25 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rain Alert: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರಿ ಮಳೆ

ಎಚ್​ಎಎಲ್​ನಲ್ಲಿ 23.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 23.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮಂಗಳೂರಿನಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬಾಗಲಕೋಟೆಯಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹಾಸನದಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 12.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ