Karnataka Rain: ಕರ್ನಾಟಕದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ಏಪ್ರಿಲ್ 29ರಿಂದ 3 ದಿನ ಮಳೆ, ಯೆಲ್ಲೋ ಅಲರ್ಟ್​

ಕರ್ನಾಟಕದಲ್ಲಿ ಮುಂದಿನ ಎರಡು ದಿನ ಒಣಹವೆ ಇರಲಿದ್ದು, ಏಪ್ರಿಲ್​ 29ರಿಂದ ಮೂರು ದಿನಗಳ ಕಾಲ ಸಾಕಷ್ಟು ಕಡೆಗಳಲ್ಲಿ ಮಳೆಯಾಗಲಿದೆ. 11ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rain: ಕರ್ನಾಟಕದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ಏಪ್ರಿಲ್ 29ರಿಂದ 3 ದಿನ ಮಳೆ, ಯೆಲ್ಲೋ ಅಲರ್ಟ್​
ಮಳೆImage Credit source: Varthabharati
Follow us
|

Updated on:Apr 26, 2024 | 8:49 AM

ಕರ್ನಾಟಕದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ಏಪ್ರಿಲ್ 29ರಿಂದ 3 ದಿನಗಳ ಕಾಲ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬಾಗಲಕೋಟೆ, ಗದಗ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕೊಡಗು, ಮಂಡ್ಯ, ತುಮಕೂರು, ಮೈಸೂರು, ಹಾಸನದಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ನಿಪ್ಪಾಣಿ, ಸಂಕೇಶ್ವರ, ಹುಕ್ಕೇರಿ, ಲೋಕಾಪುರದಲ್ಲಿ ಮಳೆಯಾಗಿದೆ. ಮೇ 1 ರಂದು ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಬಳ್ಳಾರಿ, ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ನಿರ್ಮಲ ಆಕಾಶವಿರಲಿದೆ, ಎಚ್​ಎಎಲ್​ನಲ್ಲಿ 36.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 37.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 37.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 36.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಉಷ್ಣಾಂಶ ದಾಖಲಾಗಿದೆ. ರಾಯಚೂರಿನಲ್ಲಿ 41.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rain: ಕರ್ನಾಟಕದ 18ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರಿ ಮಳೆ, ಯೆಲ್ಲೋ ಅಲರ್ಟ್​

ಹೊನ್ನಾವರದಲ್ಲಿ 34.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 37.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 27.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 37.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 36.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 40.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 38.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 38.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:48 am, Fri, 26 April 24