ಕರ್ನಾಟಕದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ಏಪ್ರಿಲ್ 29ರಿಂದ 3 ದಿನಗಳ ಕಾಲ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬಾಗಲಕೋಟೆ, ಗದಗ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕೊಡಗು, ಮಂಡ್ಯ, ತುಮಕೂರು, ಮೈಸೂರು, ಹಾಸನದಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ನಿಪ್ಪಾಣಿ, ಸಂಕೇಶ್ವರ, ಹುಕ್ಕೇರಿ, ಲೋಕಾಪುರದಲ್ಲಿ ಮಳೆಯಾಗಿದೆ. ಮೇ 1 ರಂದು ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಬಳ್ಳಾರಿ, ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ನಿರ್ಮಲ ಆಕಾಶವಿರಲಿದೆ, ಎಚ್ಎಎಲ್ನಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 37.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಉಷ್ಣಾಂಶ ದಾಖಲಾಗಿದೆ. ರಾಯಚೂರಿನಲ್ಲಿ 41.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Rain: ಕರ್ನಾಟಕದ 18ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರಿ ಮಳೆ, ಯೆಲ್ಲೋ ಅಲರ್ಟ್
ಹೊನ್ನಾವರದಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 37.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 37.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 40.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 38.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:48 am, Fri, 26 April 24