Karnataka Rains: ಬೆಂಗಳೂರು, ಉಡುಪಿ, ರಾಯಚೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆ

Karnataka Weather Today: ಬೆಂಗಳೂರು, ಉಡುಪಿ, ರಾಯಚೂರು, ಯಾದಗಿರಿ, ಕಲಬುರಗಿ, ವಿಜಯಪುರ, ಬೀದರ್, ಕೊಪ್ಪಳ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rains: ಬೆಂಗಳೂರು, ಉಡುಪಿ, ರಾಯಚೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆ
ಮಳೆ

Updated on: May 08, 2023 | 7:25 AM

ಬೆಂಗಳೂರು, ಉಡುಪಿ, ರಾಯಚೂರು, ಯಾದಗಿರಿ, ಕಲಬುರಗಿ, ವಿಜಯಪುರ, ಬೀದರ್, ಕೊಪ್ಪಳ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹುಣಸೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ, ರಾಮನಗರ, ಮಾಲೂರು, ಹೊಸಕೋಟೆ, ಕನಕಪುರ, ರಾಯಚೂರು, ಸರಗೂರು, ಪರಶುರಾಂಪುರ, ಕೃಷ್ಣರಾಜಸಾಗರ, ಸೈದಾಪುರ, ಹಾಸನ, ಕುಣಿಗಲ್, ಕೆಐಎಎಲ್​, ಖಜೂರಿ, ತಿರುಮಲ, ಚಾಮರಾಜನಗರ, ಕೃಷ್ಣರಾಜಪೇಟೆ, ಬೀದರ್, ಗೋಣಿಕೊಪ್ಪಲು, ಹರದನಹಳ್ಳಿ, ಶ್ರೀರಂಗಪಟ್ಟಣ, ಚಿಕ್ಕನಹಳ್ಳಿ, ಬೆಳ್ಳೂರು, ಮೈಸೂರಿನಲ್ಲಿ ಮಳೆಯಾಗಲಿದೆ.

ಕಲಬುರಗಿಯಲ್ಲಿ 37.0 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗಲಿದೆ. ಎಚ್​ಎಎಲ್​ನಲ್ಲಿ 29.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಚಂಡಮಾರುತ ಪ್ರಭಾವ: ಬೆಂಗಳೂರು ಸೇರಿ ರಾಜ್ಯದ ಬಹುತೇಕ ಕಡೆ ಮುಂದಿನ 4 ದಿನಗಳ ಕಾಲ ಮಳೆ

ಮೋಚಾ ಚಂಡಮಾರುತದ ಸೃಷ್ಟಿ ಮತ್ತು ನಂತರ ಅದರ ಪ್ರಭಾವ ತೀವ್ರಗೊಂಡಿದ್ದು, ವ್ಯಾಪಕವಾದ ಗುಡುಗು ಸಹಿತ ಮಳೆಗೆ ಕಾರಣವಾಗಲಿದೆ. ಮತದಾನ ಸಾಮಗ್ರಿಗಳೊಂದಿಗೆ ಇವಿಎಂಗಳು ಮತ್ತು ವಿವಿಪ್ಯಾಟ್ ಯಂತ್ರಗಳ ಸಾಗಣೆ ಮತ್ತು ಚಲನೆಯ ಮೇಲೆ ಪರಿಣಾಮ ಬೀರಿದೆ ಎಂದು ಕರ್ನಾಟಕದ ಮುಖ್ಯ ಚುನಾವಣಾ ಕಚೇರಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹವಾಮಾನ ತಜ್ಞರ ಪ್ರಕಾರ, ಆಗ್ನೇಯ ಬಂಗಾಳದಲ್ಲಿ ಶೀಘ್ರದಲ್ಲೇ ಚಂಡಮಾರುತದ ಪರಿಚಲನೆ ರಚನೆಯಾಗುವ ಸಾಧ್ಯತೆ ಇದೆ. ಇದರ ಪ್ರಭಾವದಿಂದ ಮೇ 7ರ ಸುಮಾರಿಗೆ ಇದೇ ಪ್ರದೇಶದಲ್ಲಿ ಅಪಾರ ಮಳೆಯಾಗುವ ಸಾಧ್ಯತೆ ಇದೆ. ಇದು ಮೇ 8 ರ ಸುಮಾರಿಗೆ ಇದು ಇನ್ನಷ್ಟು ಬಲಗೊಳ್ಳಲಿದೆ.

ಏಜೆನ್ಸಿ ಪ್ರಕಾರ, ತಾಪಮಾನ ಏರಿಕೆಯ ಹೊರತಾಗಿಯೂ, ಮುಂದಿನ ವಾರದವರೆಗೆ ಈ ರಾಜ್ಯಗಳಲ್ಲಿ ಶಾಖದ ಅಲೆಯು ಕಡಿಮೆ ಇರಲಿದೆ. ಮೇ ತಿಂಗಳ ಎರಡನೇ ವಾರದಿಂದ ಹವಾಮಾನವು ಸಂಪೂರ್ಣವಾಗಿ ಬದಲಾಗುತ್ತದೆ. ಜನರು ಆಗಾಗ ಬಿಸಿಲಿನ ತಾಪವನ್ನು ಎದುರಿಸಬೇಕಾಗುತ್ತದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us