AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಬೆಂಗಳೂರು, ಮೈಸೂರು ಸೇರಿ ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ

ಕರ್ನಾಟಕದಾದ್ಯಂತ ಮುಂದಿನ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ.ಕರ್ನಾಟಕದಲ್ಲಿ ಮುಂಗಾರು ಕಡಿಮೆಯಾಗಿದ್ದರೂ ಕೂಡ ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲೂ ಮಳೆಯಾಗುತ್ತಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ.ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ. ಬಂಡೀಪುರ, ಹೊಸಕೋಟೆ, ಜೇವರಗಿ, ಶಾಹಪುರ, ಶೋರಾಪುರದಲ್ಲಿ ಮಳೆಯಾಗಿದೆ.ಮೈಸೂರಿನಲ್ಲಿ 18.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Karnataka Weather: ಬೆಂಗಳೂರು, ಮೈಸೂರು ಸೇರಿ ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ
ಮಳೆImage Credit source: PTI
ನಯನಾ ರಾಜೀವ್
|

Updated on:Nov 07, 2025 | 7:25 AM

Share

ಬೆಂಗಳೂರು, ನವೆಂಬರ್ 07: ಕರ್ನಾಟಕದಲ್ಲಿ ಮುಂಗಾರು ಕಡಿಮೆಯಾಗಿದ್ದರೂ ಕೂಡ ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲೂ ಮಳೆ(Rain)ಯಾಗುತ್ತಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ.ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ. ಬಂಡೀಪುರ, ಹೊಸಕೋಟೆ, ಜೇವರಗಿ, ಶಾಹಪುರ, ಶೋರಾಪುರದಲ್ಲಿ ಮಳೆಯಾಗಿದೆ.ಮೈಸೂರಿನಲ್ಲಿ 18.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ ಗುರುವಾರ ಸಂಜೆ ಮಳೆಯಾಗಿದೆ, ಶುಕ್ರವಾರ ಕೂಡ ಮೋಡಕವಿದ ವಾತಾವರಣವಿದೆ. ಎಚ್ಎಎಲ್ನಲ್ಲಿ 27.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ:  Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ, ಉಳಿದೆಡೆ ಒಣಹವೆ

ಹೊನ್ನಾವರದಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್​​ನಲ್ಲಿ 30.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್ಪೋರ್ಟ್ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 28.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 30.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:20 am, Fri, 7 November 25

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ