AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಮಳೆ

Karnataka Weather Today: ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದ್ದು, ನೆರೆಯ ರಾಜ್ಯಗಳಲ್ಲೂ ವರುಣನ ಆರ್ಭಟ ಮುಂದುವರೆಯಲಿದೆ.

Karnataka Rain: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಮಳೆ
ಮಳೆ
TV9 Web
| Edited By: |

Updated on: Mar 10, 2022 | 6:03 AM

Share

ಬೆಂಗಳೂರು: ಕರ್ನಾಟಕದಲ್ಲಿ ಉರಿ ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ವರುಣದೇವ ತಂಪೆರೆಯುತ್ತಿದ್ದಾನೆ. ಎರಡು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಇಂದು ಕೂಡ ದಕ್ಷಿಣ ಕನ್ನಡ, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ಕೊಡಗು, ಮೈಸೂರು, ಹಾಸನ, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ತುಂತುರು ಮಳೆಯಾಗಲಿದೆ (Rain) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದ್ದು, ನೆರೆಯ ರಾಜ್ಯಗಳಲ್ಲೂ ವರುಣನ ಆರ್ಭಟ ಮುಂದುವರೆಯಲಿದೆ.

ಇಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಲಕ್ಷದ್ವೀಪದಲ್ಲಿ ಚದುರಿದ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ರಾಜಸ್ಥಾನ, ಮಹಾರಾಷ್ಟ್ರ, ಮಧ್ಯಪ್ರದೇಶ, ಕೇರಳ, ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಕೂಡ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ತಮಿಳುನಾಡು, ಪುದುಚೇರಿ ಮತ್ತು ಕೇರಳದಾದ್ಯಂತ ಚದುರಿದ ಮಳೆಯಾಗಲಿದೆ. ಕೇರಳ ಮತ್ತು ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಮಳೆ ಹೆಚ್ಚಾಗಲಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮುಂದಿನ 4 ದಿನಗಳಲ್ಲಿ ಕೇರಳ, ಮಾಹೆಯಲ್ಲಿ ಹಗುರದಿಂದ ಮಧ್ಯಮ ತೀವ್ರತೆಯ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲೂ ಇದೇ ರೀತಿಯ ಹವಾಮಾನ ಇರಲಿದೆ ಎಂದು ನಿರೀಕ್ಷಿಸಲಾಗಿದೆ.

ಕೇರಳದ ಕೊಲ್ಲಂ, ಪತ್ತನಾಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ ಮತ್ತು ವಯನಾಡ್ ಜಿಲ್ಲೆಗಳಲ್ಲಿ ಮಾರ್ಚ್ 12ರವರೆಗೆ ಮಳೆಯಾಗಲಿದೆ. ಈ ವಾರ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ಮಾರ್ಚ್‌ ಮೊದಲ ವಾರದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರಾವಳಿ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ದಕ್ಷಿಣ ಕರಾವಳಿ ಆಂಧ್ರಪ್ರದೇಶ ಮತ್ತು ರಾಯಲಸೀಮಾದಲ್ಲಿ ಅಲ್ಲಲ್ಲಿ ಮಳೆಯಾಗುತ್ತಿದೆ.

ಹೀಗಾಗಿ, ಮೀನುಗಾರರಿಗೆ ದಕ್ಷಿಣ ಬಂಗಾಳ ಕೊಲ್ಲಿ, ಹಿಂದೂ ಮಹಾಸಾಗರ, ಮನ್ನಾರ್ ಕೊಲ್ಲಿ ಮತ್ತು ಕೊಮೊರಿನ್ ಪ್ರದೇಶಕ್ಕೆ ಹೋಗದಂತೆ ಎಚ್ಚರಿಕೆಯನ್ನು ನೀಡಲಾಗಿದೆ. ಬಂಗಾಳ ಕೊಲ್ಲಿಯ ನೈಋತ್ಯ ಪ್ರದೇಶ, ತಮಿಳುನಾಡು, ಪುದುಚೇರಿ ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿಯುದ್ದಕ್ಕೂ ಮಳೆಯಾಗುವ ನಿರೀಕ್ಷೆಯಿದೆ. ಇಂದು ಲಡಾಖ್ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಮ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ

ಇದನ್ನೂ ಓದಿ: Karnataka Rain: ಕರ್ನಾಟಕದ ಮಲೆನಾಡು, ಕರಾವಳಿ, ಕೊಡಗಿನಲ್ಲಿ ಇಂದು ಗುಡುಗು ಸಹಿತ ಮಳೆ

Karnataka Rain: ಕರ್ನಾಟಕದ ಮಲೆನಾಡು, ಕರಾವಳಿ, ಕೊಡಗಿನಲ್ಲಿ ಇಂದು ಗುಡುಗು ಸಹಿತ ಮಳೆ