Karnataka Rain: ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಇನ್ನೂ 3 ದಿನ ಮಳೆಯ ಆರ್ಭಟ; ಕೇರಳಕ್ಕೆ ಹಳದಿ ಅಲರ್ಟ್​

Karnataka Weather Today: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಇನ್ನೂ 3 ದಿನ ಮಳೆಯಾಗಲಿದೆ.

Karnataka Rain: ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಇನ್ನೂ 3 ದಿನ ಮಳೆಯ ಆರ್ಭಟ; ಕೇರಳಕ್ಕೆ ಹಳದಿ ಅಲರ್ಟ್​
ಮಳೆImage Credit source: Hindustan Times
Follow us
| Updated By: ಸುಷ್ಮಾ ಚಕ್ರೆ

Updated on: May 22, 2022 | 6:01 AM

ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಇನ್ನೂ 3 ದಿನಗಳ ಕಾಲ ರಾಜ್ಯಾದ್ಯಂತ ವರುಣನ ಆರ್ಭಟವಿರಲಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಇನ್ನೂ ಮೇ 24ರವರೆಗೆ ಬೆಂಗಳೂರಿನಲ್ಲಿ ಮಳೆಯಾಗುವ (Bengaluru Rains) ಸಾಧ್ಯತೆಯಿದೆ. ಮೇ 27ರ ವೇಳೆಗೆ ಕೇರಳಕ್ಕೆ ಮುಂಗಾರು (Kerala Monsoon) ಪ್ರವೇಶವಾಗಲಿದೆ. ಜೂನ್ ಮೊದಲ ವಾರಕ್ಕೆ ಕರ್ನಾಟಕದಲ್ಲೂ ಮಾನ್ಸೂನ್ ಶುರುವಾಗಲಿದೆ. ಅದಕ್ಕೂ ಮೊದಲೇ ಕೇರಳದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, ಹಳದಿ ಅಲರ್ಟ್​ (Yellow Alert) ಘೋಷಣೆ ಮಾಡಲಾಗಿದೆ.

ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಇನ್ನೂ 3 ದಿನ ಮಳೆಯಾಗಲಿದೆ. ಇಂದು ಕೂಡ ಬೆಂಗಳೂರಿನಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದೆ. ಕರ್ನಾಟಕದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಧಾರವಾಡ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಯಾದಗಿರಿ, ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಮಳೆ ಮುಂದುವರೆದರೂ ಇಂದಿನಿಂದ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಲಿದೆ.

ರಾಜ್ಯವ್ಯಾಪಿ ಭರ್ಜರಿ ಮಳೆ ಮುಂದುವರಿದಿದ್ದು ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಮೇ 24ರವರೆಗೂ ಮುಂಗಾರು ಪೂರ್ವ ಮಳೆ ಅಬ್ಬರಿಸಲಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳು, ಕರಾವಳಿಯ ದಕ್ಷಿಣ ಕನ್ನಡ, ಉತ್ತರ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ ಜಿಲ್ಲೆಗಳಲ್ಲಿ 25 ಡಿಗ್ರಿಗಿಂತ ಕಡಿಮೆ ತಾಪಮಾನ ವರದಿಯಾಗಿದೆ. ಶಿವಮೊಗ್ಗ, ಮಂಡ್ಯ, ಬೆಳಗಾವಿ, ಬೆಂಗಳೂರು, ರಾಯಚೂರು, ಬಾಗಲಕೋಟೆ ಜಿಲ್ಲೆಗಳಲ್ಲಿ ವಾಡಿಕೆಗಿಂತ 10 ಡಿಗ್ರಿಗಿಂತ ಕಡಿಮೆ ತಾಪಮಾನ ದಾಖಲಾಗಿದೆ.

ಇದನ್ನೂ ಓದಿ
Image
Bihar Rain: ಬಿಹಾರದ ಮಳೆಯಿಂದ 33 ಜನ ಸಾವು; ಅಸ್ಸಾಂನಲ್ಲಿ ವರುಣನ ಆರ್ಭಟಕ್ಕೆ ಸಿಲುಕಿದ 7 ಲಕ್ಷ ಮಂದಿ
Image
Kerala Rain: ಭಾರೀ ಮಳೆಯಿಂದ ಕೇರಳದ 10 ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಣೆ; 2 ಡ್ಯಾಂಗಳ ಗೇಟ್ ಓಪನ್
Image
ದೆಹಲಿಯಲ್ಲಿ ಭಾರೀ ಮಳೆ; ರಕ್ಷಣಾ ಸಚಿವ ಪ್ರಯಾಣಿಸುತ್ತಿದ್ದ ವಿಮಾನ ಸೇರಿ 11 ವಿಮಾನಗಳ ಮಾರ್ಗ ಬದಲು
Image
ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಮಳೆ ಸಾಧ್ಯತೆ! ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಣೆ

ಇದನ್ನೂ ಓದಿ: Bihar Rain: ಬಿಹಾರದ ಮಳೆಯಿಂದ 33 ಜನ ಸಾವು; ಅಸ್ಸಾಂನಲ್ಲಿ ವರುಣನ ಆರ್ಭಟಕ್ಕೆ ಸಿಲುಕಿದ 7 ಲಕ್ಷ ಮಂದಿ

ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು, ಇಲ್ಲಿನ 10 ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್​ ಘೋಷಿಸಲಾಗಿದೆ. ಇದರ ನಡುವೆ ಇಡುಕ್ಕಿ ಜಿಲ್ಲಾಡಳಿತ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಲು ಕಲ್ಲರ್ಕುಟ್ಟಿ ಮತ್ತು ಪಾಂಬ್ಲಾ ಅಣೆಕಟ್ಟುಗಳ ಗೇಟ್​ಗಳನ್ನು ತೆರೆದಿದೆ. ಭಾರತೀಯ ಹವಾಮಾನ ಇಲಾಖೆ (IMD) ಕೇರಳದ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಮಲಪ್ಪುರಂ ಮತ್ತು ಕೋಳಿಕ್ಕೋಡ್, ವಯನಾಡ್‌ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಿದೆ.

ಮೇ 12ರಿಂದ 18ರ ಅವಧಿಯಲ್ಲಿ ಕೇರಳವು ಶೇ. 237ರಷ್ಟು ಅಧಿಕ ಮಳೆಯನ್ನು ಪಡೆದಿದೆ. ಸಾಮಾನ್ಯವಾಗಿ ಈ ಅವಧಿಯಲ್ಲಿ ಕೇರಳದಲ್ಲಿ 47.3 ಮಿಮೀ ಮಳೆಯಾಗುತ್ತಿತ್ತು. ಆದರೆ, ಈ ಬಾರಿ ಕೇರಳದಲ್ಲಿ 159.3 ಮಿಮೀ ಮಳೆಯಾಗಿದೆ. ಕೇರಳದಲ್ಲಿ ಎಡವಪತಿ ಎಂದೂ ಕರೆಯಲ್ಪಡುವ ನೈಋತ್ಯ ಮಾನ್ಸೂನ್, ಮೇ 27ರೊಳಗೆ ಕೇರಳಕ್ಕೆ ತನ್ನ ಮೊದಲ ಮಳೆಯನ್ನು ಸಾಮಾನ್ಯ ಆರಂಭದ ದಿನಾಂಕಕ್ಕಿಂತ 5 ದಿನಗಳ ಮುಂಚಿತವಾಗಿ ತರುವ ಸಾಧ್ಯತೆಯಿದೆ ಎಂದು IMD ಮೊದಲೇ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: Kerala Rain: ಭಾರೀ ಮಳೆಯಿಂದ ಕೇರಳದ 10 ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಣೆ; 2 ಡ್ಯಾಂಗಳ ಗೇಟ್ ಓಪನ್

ಬಿಹಾರದ 16 ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಗೆ 33 ಮಂದಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಕುಟುಂಬಗಳಿಗೆ 4 ಲಕ್ಷ ರೂ. ಪರಿಹಾರ ನೀಡಲು ಸೂಚನೆಗಳನ್ನು ನೀಡಲಾಗಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಿಳಿಸಿದ್ದಾರೆ. ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, ನಾಗಾಂವ್ ಜಿಲ್ಲೆಯಲ್ಲಿ 3.36 ಲಕ್ಷಕ್ಕೂ ಹೆಚ್ಚು ಜನರು ಹಾನಿಗೊಳಗಾಗಿದ್ದಾರೆ. ಕ್ಯಾಚಾರ್ ಜಿಲ್ಲೆಯಲ್ಲಿ 1.66 ಲಕ್ಷ, ಹೊಜೈನಲ್ಲಿ 1.11 ಲಕ್ಷ ಮತ್ತು ದರ್ರಾಂಗ್ ಜಿಲ್ಲೆಯಲ್ಲಿ 52,709 ಜನರು ಹಾನಿಗೊಳಗಾಗಿದ್ದಾರೆ.

ಇನ್ನಷ್ಟು ಮಳೆಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ