Karnataka Weather: ಇಂದು ಕೊಡಗು, ಮೈಸೂರು ಸೇರಿದಂತೆ ಕರ್ನಾಟಕದ 15ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆ

ಕರ್ನಾಟಕದಾದ್ಯಂತ ಒಣಹವೆ ಮುಂದುವರೆದಿದೆ. ಕೆಲವೆಡೆ ಮಳೆಯ ಸಿಂಚನವಾಗಿದೆ. ಇಂದು ಕೊಡಗು, ಶಿವಮೊಗ್ಗ, ಮೈಸೂರು ಸೇರಿದಂತೆ ಕರ್ನಾಟಕದ 15ಕ್ಕೂ ಅಧಿಕ ಜಿಲ್ಲಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather: ಇಂದು ಕೊಡಗು, ಮೈಸೂರು ಸೇರಿದಂತೆ ಕರ್ನಾಟಕದ 15ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆ
ಮಳೆ
Image Credit source: The Economic Times

Updated on: Mar 22, 2024 | 7:36 AM

ಕರ್ನಾಟಕದ ಬಹುತೇಕ ಕಡೆ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಇಂದು ಕೊಡಗು, ಮೈಸೂರು ಸೇರಿದಂತೆ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾgಲಿದೆ.

ಕರಾವಳಿ, ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ, ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್​ಎಎಲ್​ನಲ್ಲಿ 33.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 35.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕೊಪ್ಪಳದಲ್ಲಿ 38.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ಬೀದರ್​ನಲ್ಲಿ 19.4 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 33.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಬೆಂಗಳೂರು, ಹಾಸನ, ಚಿಕ್ಕಮಗಳೂರು ಸೇರಿ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೀದರ್​ನಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ , ವಿಜಯಪುರದಲ್ಲಿ 36.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 35.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 36.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಿಕ್ಕಮಗಳೂರಿನಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 36.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮಂಡ್ಯದಲ್ಲಿ 36.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us