Karnataka Rain Highlights: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ ಇನ್ನೂ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ
Karnataka Rain and Flood in Madikeri, Uttara Kannada, Dakshina Kannada Live News Updates: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ದಕ್ಷಿಣ ಕನ್ನಡ, ಕರಾವಳಿ, ಉತ್ತರ ಕನ್ನಡ ಭಾಗಗಳಲ್ಲಿ ಮಳೆಯಿಂದಾಗಿ ಜನರು ತತ್ತರಿಸಿದ್ದಾರೆ.
M0nsoon: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಇನ್ನೂ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಟಿವಿ9ಗೆ ಹವಾಮಾನ ಇಲಾಖೆ ತಜ್ಞ ಆರ್.ಪ್ರಸಾದ್ ಹೇಳಿದ್ದಾರೆ. ರಾಜ್ಯದ ಕರಾವಳಿ, ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗಿದೆ. ಕರವಾಳಿಯಲ್ಲಿ ಸುಬ್ರಹ್ಮಣ್ಯದಲ್ಲಿ 16 ಸೆಂ ಮೀ ನಷ್ಟು ಮಳೆಯಾಗಿದೆ. ಹೀಗಾಗಿ ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿಗೆ ಯಲ್ಲೋ ಅಲರ್ಟ್ ಹಾಗೂ ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಇನ್ನೂ 2 ದಿನ ಮೋಡ ಕವಿದ ವಾತಾವರಣ ಇರಲಿದೆ. ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.
ಅರಬ್ಬೀ ಸಮುದ್ರ, ಒಡಿಶಾ ಭಾಗದಲ್ಲಿ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಭಾರೀ ಮಳೆ (Heavy Rain) ಯಾಗುತ್ತಿದೆ ಎಂದು ಭಾರತೀಯ ಹವಾಮನ ಇಲಾಖೆ ಈಗಾಗಲೇ ತಿಳಿಸಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ದಕ್ಷಿಣ ಕನ್ನಡ, ಕರಾವಳಿ, ಉತ್ತರ ಕನ್ನಡ ಭಾಗಗಳಲ್ಲಿ ಮಳೆಯಿಂದಾಗಿ ಜನರು ತತ್ತರಿಸಿದ್ದಾರೆ. ಹಲವೆಡೆ ಭೂ ಕುಸಿತ ಉಂಟಾಗಿದ್ದು, ಹಲವೆಡೆ ಹಾನಿಯಾಗಿದೆ. ಕೊಡಗು ಜಿಲ್ಲೆಯಾದ್ಯಂತ ವರುಣಾರ್ಭಟ ಮುಂದುವರೆದಿದೆ. ಅಪಾಯ ಮಟ್ಟ ಮೀರಿ ಕಾವೇರಿ ನದಿ ಹರಿಯುತ್ತಿದೆ. ಕೃಷಿ ಜಮೀನುಗಳತ್ತ ನೀರು ನುಗ್ಗುತ್ತಿದೆ. ಹಾರಂಗಿ ಜಲಾಶಯದಿಂದ 15 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಹಿನ್ನೆಲೆ ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಹಾರಂಗಿ-ಸೋಮವಾರಪೇಟೆ ರಸ್ತೆ ಮುಳುಗಡೆಯಾಗಿದ್ದು, ಕುಶಾಲನಗರ ಪಟ್ಟಣ ಪಂಚಾಯಿತಿಯಿಂದ ಅಪಾಯದ ಮುನ್ನೆಚ್ಚರಿಕೆ ನೀಡಿದ್ದು, ನದಿಪಾತ್ರದ ಜನ ಸುರಕ್ಚಿತ ಪ್ರದೇಶಕ್ಕೆ ತೆರಳುವಂತೆ ಸೂಚನೆ ನೀಡಲಾಗಿದೆ.
ಇದನ್ನೂ ಓದಿ: Karnataka Rain: ಕೊಡಗು ಜಿಲ್ಲೆಯಲ್ಲಿ 12 ಕ್ಕೂ ಅಧಿಕ ಕಡೆಗಳಲ್ಲಿ ಭೂ ಕುಸಿತ; 50 ಮನೆಗಳಿಗೆ ಹಾನಿ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪಂಜಿಕಲ್ಲು ಬಳಿ ಗುಡ್ಡ ಕುಸಿತವಾಗಿರುವಂತಹ ಘಟನೆ ನಡೆದಿದೆ. ಜಮೀನಿನ ಮಾಲೀಕ ಕಾರ್ಲೋ ಮನೆ ಮೇಲೆ ಬಳಿ ಗುಡ್ಡ ಕುಸಿದಿದ್ದು, ಗುಡ್ಡ ಕುಸಿದು ಕೇರಳದ ಮೂವರು ಕಾರ್ಮಿಕರು ಮೃತಪಟ್ಟಿದ್ದರು. ಇಂದು ಅಪಾಯದ ಸ್ಥಿತಿಯಲ್ಲಿದ್ದ ಮತ್ತೊಂದು ಭಾಗದ ಗುಡ್ಡ ಕುಸಿದಿದೆ.
Published On - 8:10 am, Mon, 11 July 22