Karnataka Rain Highlight : ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ; ವಿವಿಧ ಜಿಲ್ಲೆಗಳಿಗೆ ರೆಡ್, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

| Updated By: ವಿವೇಕ ಬಿರಾದಾರ

Updated on: Jul 10, 2022 | 6:36 PM

Karnataka Rain and Flood in Madikeri, Uttara Kannada, Bengaluru Weather Live News Updates: ಬೆಂಗಳೂರಿನಲ್ಲಿ ವೀಕೆಂಡ್ ಮೂಡ್​ನಲ್ಲಿದ್ದವರಿಗೆ ಮಳೆ ಕಾಟ ಎದುರಾಗಿದೆ.  ನಿನ್ನೆ ಮೆಜೆಸ್ಟಿಕ್, ಕಾರ್ಪೊರೇಷನ್, ಮೈಸೂರು ಬ್ಯಾಂಕ್​ ಸರ್ಕಲ್​, ಯಶವಂತಪುರ, ಶಾಂತಿನಗರ, ವಿಲ್ಸನ್​ ಗಾರ್ಡನ್​ನಲ್ಲಿ ತುಂತುರು ಮಳೆಯಾಗಿದೆ.

Karnataka Rain Highlight : ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ; ವಿವಿಧ ಜಿಲ್ಲೆಗಳಿಗೆ ರೆಡ್, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು: ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಸೇರಿ ಮುಂದಿನ ನಾಲ್ಕು ದಿನ  ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಹೀಗಾಗಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದಾರೆ.

ಉತ್ತರ ಕರ್ನಾಟಕ ಭಾಗದ 5 ಜಿಲ್ಲೆಗಳು, ಮಲೆನಾಡಿನ 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದಾರೆ. ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇರುವ ಹಿನ್ನೆಲೆ ಆರೆಂಜ್​ ಅಲರ್ಟ್​ ಘೋಷಣೆ ಮಾಡಿದ್ದಾರೆ. ಯಾದಗಿರಿ, ವಿಜಯಪುರ, ಬಾಗಲಕೋಟೆ, ದಾವಣಗೆರೆ, ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದಾರೆ.

ಅರಬ್ಬೀ ಸಮುದ್ರ, ಒಡಿಶಾ ಭಾಗದಲ್ಲಿ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ ಎಂದು ಭಾರತೀಯ ಹವಾಮನ ಇಲಾಖೆ ತಿಳಿಸಿದೆ.

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ನಿರಂತರ ಮಳೆಯಿಂದ ತುಂಗಾ ನದಿಯಲ್ಲಿ ಒಳಹರಿವು ಹೆಚ್ಚಳಾದ ಹಿನ್ನೆಲೆ ಶೃಂಗೇರಿ ಶಾರದಾಂಬೆ ದೇಗುಲದ ಪ್ಯಾರಲ್ ರಸ್ತೆ, ಪಾರ್ಕಿಂಗ್​ ಪ್ರದೇಶಕ್ಕೆ ನೀರು ನುಗ್ಗಿದೆ. ನದಿ ಪಕ್ಕದ ಅಂಗಡಿಗಳಿಗೂ ತುಂಗಾ ನದಿಯ ನೀರು ನುಗ್ಗಿದೆ.

Monsoon 2022: ಕರ್ನಾಟಕ (Karnataka) ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನ ಭಾರೀ ಮಳೆ (Heavy Rain)ಯಾಗುವ ಮುನ್ಸೂಚನೆ ಇದ್ದು, ಕರಾವಳಿ ಭಾಗಗಳಲ್ಲಿ ಅತ್ಯಂತ ಭಾರೀ ಮಳೆಯಾಗಲಿದೆ. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ರೆಡ್ ಅಲರ್ಟ್ (Red Alert) ಘೋಷಣೆ ಮಾಡಿದೆ. ಅಲ್ಲದೆ ಉತ್ತರ ಒಳಭಾಗದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಹಿನ್ನೆಲೆ ಬೆಳಗಾವಿ, ಬೀದರ್, ಧಾರವಾಡ, ಹಾವೇರಿ ಕಲಬುರ್ಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow Alert) ಘೋಷಣೆ ಮಾಡಲಾಗಿದೆ. ದಕ್ಷಿಣ ಒಳಭಾಗದಲ್ಲೂ ಅತಿಹೆಚ್ಚು ಮಳೆಯಾಗುವ ಮುನ್ಸೂಚನೆ ಹಿನ್ನೆಲೆ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗದಲ್ಲಿ ಆರೆಂಜ್ ಅಲರ್ಟ್(Orange Alert) ಘೋಷಿಸಲಾಗಿದ್ದು, ಹಾಸನ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: Karnataka Rain: ಇಂದಿನಿಂದ ಎರಡು ದಿನ ಕರ್ನಾಟಕದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ, ರೆಡ್ ಅಲರ್ಟ್ ಘೋಷಣೆ

ಇದನ್ನೂ ಓದಿ: Karnataka Dams Water Level: ಕೆಆರ್​ಎಸ್ ಶೇ.91ರಷ್ಟು ಭರ್ತಿ, ರಾಜ್ಯದ ಉಳಿದ ಅಣೆಕಟ್ಟುಗಳ ಸದ್ಯದ ಸ್ಥಿತಿಗತಿ ಹೀಗಿದೆ

ಬೆಂಗಳೂರಿನ ವಾತಾವರಣ ಹೇಗಿರಲಿದೆ?

ಬೆಂಗಳೂರಿನಲ್ಲಿ ವೀಕೆಂಡ್ ಮೂಡ್​ನಲ್ಲಿದ್ದವರಿಗೆ ಮಳೆ ಕಾಟ ಎದುರಾಗಿದೆ.  ನಿನ್ನೆ ಮೆಜೆಸ್ಟಿಕ್, ಕಾರ್ಪೊರೇಷನ್, ಮೈಸೂರು ಬ್ಯಾಂಕ್​ ಸರ್ಕಲ್​, ಯಶವಂತಪುರ, ಶಾಂತಿನಗರ, ವಿಲ್ಸನ್​ ಗಾರ್ಡನ್​ನಲ್ಲಿ ತುಂತುರು ಮಳೆಯಾಗಿದೆ. ಇಂದು ನಗರದಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣ ಇರಲಿದ್ದು, ಕೆಲವು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಬಹಳಷ್ಟಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 25 ಮತ್ತು 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

Published On - 8:06 am, Sun, 10 July 22