AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಮಾ. 28ರವರೆಗೆ ಬೆಂಗಳೂರು, ಕೊಡಗು, ಚಿಕ್ಕಮಗಳೂರು ಸೇರಿ ಹಲವೆಡೆ ಮಳೆ; ಹವಮಾನ ಇಲಾಖೆ ಮುನ್ಸೂಚನೆ

Karnataka Weather Today: ಇಂದಿನಿಂದ ಮಾರ್ಚ್​ 28ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

Karnataka Rain: ಮಾ. 28ರವರೆಗೆ ಬೆಂಗಳೂರು, ಕೊಡಗು, ಚಿಕ್ಕಮಗಳೂರು ಸೇರಿ ಹಲವೆಡೆ ಮಳೆ; ಹವಮಾನ ಇಲಾಖೆ ಮುನ್ಸೂಚನೆ
ಮಳೆ
TV9 Web
| Edited By: |

Updated on: Mar 26, 2022 | 5:50 AM

Share

Bengaluru Rain: ಕರ್ನಾಟಕದಲ್ಲಿ ಇನ್ನೆರಡು ದಿನ ಗುಡುಗು ಸಹಿತ ಮಳೆಯಾಗುವ (Rainfall) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯಿಂದ (IMD) ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಗದಗ, ಬೆಳಗಾವಿ, ಬಾಗಲಕೋಟೆ, ಹಾವೇರಿಯಲ್ಲಿ ಮಾರ್ಚ್​ 28ರವರೆಗೆ ಮಳೆಯಾಗಲಿದೆ. ರಾಜ್ಯದ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ತುಮಕೂರು ಜಿಲ್ಲೆಯಲ್ಲಿ ಇಂದು ಮಳೆಯಾಗುವ (Heavy Rain) ಸಾಧ್ಯತೆಯಿದೆ.

ಮಹಾರಾಷ್ಟ್ರದ ಮಧ್ಯ ಕರಾವಳಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಮಳೆ ಅಬ್ಬರಿಸಲಿದೆ. ಇಂದಿನಿಂದ ಮಾರ್ಚ್​ 28ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಬೇಸಿಗೆಯಲ್ಲಿ ಜಾಸ್ತಿ ತಾಪಮಾನ ಉಂಟಾಗುವ ಸಾಧ್ಯತೆಯಿದೆ. ಇನ್ನೆರಡು ದಿನ ರಾಜ್ಯದಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ಶುಕ್ರವಾರ ಶಿವಮೊಗ್ಗ ಜಿಲ್ಲೆಯ ಹಲವೆಡೆ ಮಳೆ ಮುಂದುವರಿದಿದೆ. ಕೆಲವೆಡೆ ಸುರಿದ ಬಿರುಗಾಳಿ ಸಹಿತ ಮಳೆಗೆ ಸಾರ್ವಜನಿಕ ಆಸ್ತಿಪಾಸ್ತಿಗೆ ಧಕ್ಕೆಯಾಗಿದೆ. ಶಿವಮೊಗ್ಗ, ತೀರ್ಥಹಳ್ಳಿ, ಸಾಗರ, ಹೊಸನಗರ ಮುಂತಾದ ಕಡೆಗಳಲ್ಲಿ ಅಕಾಲಿಕ ಮಳೆಯಾಗಿದೆ. ಸಾಗರ ತಾಲೂಕಿನ ಆನಂದಪುರ ಸಮೀಪದ ಹೆಬೋಡಿ ಗ್ರಾಮದಲ್ಲಿ ಮನೆ ಹಾಗೂ ಕೊಟ್ಟಿಗೆ ಕುಸಿದು ಬಿದ್ದಿದೆ. ಹೊಸನಗರ, ತೀರ್ಥಹಳ್ಳಿ ತಾಲೂಕಿನ ಹಲವೆಡೆ ಬಿರುಗಾಳಿಗೆ ಮರಗಳು ಉರುಳಿ ಬಿದ್ದಿವೆ. ಮೇಗರವಳ್ಳಿ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರೀ ಗಾತ್ರದ ಮರಗಳು ಉರುಳಿವೆ. ವಿದ್ಯುತ್ ಕಂಬಗಳು ಕೂಡ ಉರುಳಿಬಿದ್ದಿವೆ.

ಮಹಾರಾಷ್ಟ್ರದ ಕರಾವಳಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕಕ್ಕೂ ಮಳೆಯ ಪರಿಣಾಮ ತಟ್ಟಲಿದೆ. ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆ ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ. ಮಾರ್ಚ್​ 28ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಈ ಭಾಗದಲ್ಲಿ ಇಂದು ಗುಡುಗು, ಸಿಡಿಲಿನ ಎಚ್ಚರಿಕೆ ನೀಡಲಾಗಿದೆ. ಮಾರ್ಚ್​ 27, 28ರಂದು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಗದಗ, ಹಾವೇರಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮಾರ್ಚ್​ 28ರವರೆಗೆ ಮಳೆಯಾಗಲಿದೆ.

IMD ಪ್ರಕಾರ ಕೇರಳ, ತಮಿಳುನಾಡು ಮತ್ತು ಕರ್ನಾಟಕದ ಕೆಲವು ಭಾಗಗಳಲ್ಲಿ ಮಾರ್ಚ್ 28ರವರೆಗೆ ಚದುರಿದ ಮಳೆಯಾಗಲಿದೆ. ಮುಂದಿನ ಸೋಮವಾರದ ನಂತರವೂ ಈ ರಾಜ್ಯಗಳಲ್ಲಿ ಆರ್ದ್ರ ಪರಿಸ್ಥಿತಿಗಳು ಮುಂದುವರಿಯಬಹುದು. ಆಂಧ್ರಪ್ರದೇಶದ ಕರಾವಳಿ ಮತ್ತು ರಾಯಲಸೀಮಾದಲ್ಲಿ ಇಂದು ಮಳೆ ಹೆಚ್ಚಾಗಲಿದೆ. ಇಂದು ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗಲಿದೆ.

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಳೆಯಾಗಲಿದೆ. ಧಾರವಾಡ, ಹಾವೇರಿ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ತುಂತುರು ಮಳೆ ನಿರೀಕ್ಷಿಸಲಾಗಿದೆ.

ಇನ್ನು 4 ದಿನಗಳ ಕಾಲ ಭಾರತದ ಈಶಾನ್ಯ ಭಾಗದಲ್ಲಿ ಮಳೆ ಹೆಚ್ಚಾಗಲಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಚದುರಿದ ಅಥವಾ ವ್ಯಾಪಕ ಮಳೆಯ ಮುನ್ಸೂಚನೆ ನೀಡಲಾಗಿದೆ. ಇಂದು ಗುಡುಗು ಮತ್ತು ಮಿಂಚು ಸಹಿತ ಮಳೆಯಾಗಲಿದೆ. ಮುಂದಿನ 4 ದಿನಗಳವರೆಗೆ ಭಾರತದ ನೈಋತ್ಯ ಕರಾವಳಿಯಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯನ್ನು ತರುತ್ತದೆ. ಅರುಣಾಚಲ ಪ್ರದೇಶದಲ್ಲಿ ಇಂದು ಸಾಕಷ್ಟು ವ್ಯಾಪಕವಾದ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಅಸ್ಸಾಂ ಮತ್ತು ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಕರ್ನಾಟಕ ಮತ್ತು ಕೇರಳದಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಪಶ್ಚಿಮ ಬಂಗಾಳ, ಒಡಿಶಾ, ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗುಜರಾತ್, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಒಡಿಶಾದಲ್ಲಿ ಬಿಸಿ ಗಾಳಿಯ ಪರಿಸ್ಥಿತಿಗಳು ಉಂಟಾಗಲಿವೆ.

ಇದನ್ನೂ ಓದಿ: Karnataka Rain: ಕರ್ನಾಟಕದ ಕರಾವಳಿಯಲ್ಲಿ ಇಂದಿನಿಂದ 3 ದಿನ ಗುಡುಗು ಸಹಿತ ಮಳೆ; ಬೆಂಗಳೂರಿನಲ್ಲೂ ವರುಣನ ಆರ್ಭಟ

Karnataka Weather Today: ಕರಾವಳಿ, ಮಲೆನಾಡಿನಲ್ಲಿ ಇಂದು ತುಂತುರು ಮಳೆ; ಕೇರಳ, ತಮಿಳುನಾಡಿನಲ್ಲಿ ವರುಣನ ಆರ್ಭಟ

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ