Karnataka Rain: ಕರ್ನಾಟಕದ ಮಲೆನಾಡು, ಕರಾವಳಿ, ಕೊಡಗಿನಲ್ಲಿ ಇಂದು ಗುಡುಗು ಸಹಿತ ಮಳೆ
Karnataka Weather Today: ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಮಳೆಯಾಗುವ ನಿರೀಕ್ಷೆಯಿದೆ ಎಂದು IMD ಮುನ್ಸೂಚನೆ ನೀಡಿದೆ.
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ಕೆಲವು ಭಾಗಗಳಲ್ಲಿ ಇಂದು (ಮಾರ್ಚ್ 9) ಗುಡುಗು ಸಹಿತ ಮಳೆಯಾಗುವ (Rainfall) ಸಾಧ್ಯತೆಯಿದೆ. ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಗದಗ, ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ ಇಂದು ಮಳೆಯಾಗಲಿದೆ. ಪಶ್ಚಿಮ ಘಟ್ಟ ಪ್ರದೇಶದಲ್ಲಿರುವ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಇಂದು (ಬುಧವಾರ) ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಆದರೆ, ಕರ್ನಾಟಕದಲ್ಲಿ ಮಾರ್ಚ್ 11ರವರೆಗೆ ಹವಾಮಾನ ನಿಗಾ ಘಟಕದಿಂದ ಯಾವುದೇ ಎಚ್ಚರಿಕೆ ನೀಡಲಾಗಿಲ್ಲ.
ಕರ್ನಾಟಕದಲ್ಲಿ ಇತ್ತೀಚಿನ ದಿನಗಳಲ್ಲಿ ಒಣಹವೆ ಹೆಚ್ಚಾಗಿತ್ತು. ಇದೀಗ ಒಂದೆರಡು ದಿನಗಳಿಂದ ಕರಾವಳಿ, ಬೆಂಗಳೂರು, ಮಲೆನಾಡಿನ ಕೆಲವು ಭಾಗಗಳಲ್ಲಿ ತುಂತುರು ಮಳೆಯಾಗುತ್ತಿರುವುದರಿಂದ ಜನರಿಗೆ ಕೊಂಚ ಆರಾಮಾಗಿದೆ. 2 ದಿನಗಳಿಂದ ಬೆಂಗಳೂರಿನ ಕೆಲವು ಏರಿಯಾಗಳಲ್ಲೂ ಸಾಧಾರಣ ಮಳೆಯಾಗಿತ್ತು.
ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಮಳೆಯಾಗುವ ನಿರೀಕ್ಷೆಯಿದೆ ಎಂದು IMD ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಮಾರ್ಚ್‌ನಲ್ಲಿ ವಾಯುಭಾರ ಕುಸಿತ ಉಂಟಾಗಿತ್ತು. ಇದರೊಂದಿಗೆ ಕರಾವಳಿ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ದಕ್ಷಿಣ ಕರಾವಳಿ ಆಂಧ್ರಪ್ರದೇಶ ಮತ್ತು ರಾಯಲಸೀಮಾದಲ್ಲಿ ಅಲ್ಲಲ್ಲಿ ಮಳೆಯಾಗುತ್ತಿದೆ. ಹೀಗಾಗಿ, ಮೀನುಗಾರರಿಗೆ ದಕ್ಷಿಣ ಬಂಗಾಳ ಕೊಲ್ಲಿ, ಹಿಂದೂ ಮಹಾಸಾಗರ, ಮನ್ನಾರ್ ಕೊಲ್ಲಿ ಮತ್ತು ಕೊಮೊರಿನ್ ಪ್ರದೇಶಕ್ಕೆ ಹೋಗದಂತೆ ಎಚ್ಚರಿಕೆಯನ್ನು ನೀಡಲಾಗಿದೆ. ಬಂಗಾಳ ಕೊಲ್ಲಿಯ ನೈಋತ್ಯ ಪ್ರದೇಶ, ತಮಿಳುನಾಡು, ಪುದುಚೇರಿ ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿಯುದ್ದಕ್ಕೂ ಮಳೆಯಾಗುವ ನಿರೀಕ್ಷೆಯಿದೆ.
ದಕ್ಷಿಣ ಒಳನಾಡು, ಕರಾವಳಿಯಲ್ಲಿ ಮಳೆ ಸಾಧ್ಯತೆ ಇದೆ. ಇಂದು ಕೋಲಾರ, ಚಿಕ್ಕಬಳ್ಳಾಪುರ, ಕೊಡಗು, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಗದಗ, ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ದಕ್ಷಿಣ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದೆ. ಈ ಬಗ್ಗೆ 4 ದಿನ ಮುಂಚಿತವಾಗಿ ಮಾಹಿತಿ ನೀಡಿದ್ದ ಹವಾಮಾನ ಇಲಾಖೆ, ವಾಯುಭಾರ ಕುಸಿತದ ಪ್ರಭಾವ ವಾಯುವ್ಯ ದಿಕ್ಕಿನಲ್ಲಿ ಶ್ರೀಲಂಕಾದ ಪೂರ್ವ ಕರಾವಳಿಯ ಉತ್ತರ ತಮಿಳುನಾಡು ಕರಾವಳಿಯ ಕಡೆಗೆ ಸಾಗಲಿದೆ ಎಂದು ಹೇಳಿತ್ತು.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಸದ್ಯ ಒಣ ಹವೆ ಇದೆ. ಆದರೆ, ಎರಡು ದಿನಗಳ ಕಾಲ ರಾಜ್ಯದ ಹಲವು ಕಡೆ ಗುಡುಗು ಸಹಿತ ಮಳೆ ಆಗಬಹುದು. ಪಶ್ಚಿಮ ಘಟ್ಟದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಇಂದು ಕೂಡ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಲಡಾಖ್ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಮ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡು, ಕೇರಳ, ಕರ್ನಾಟಕ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕೂಡ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದ ಕೆಲವು ಪ್ರದೇಶಗಳಲ್ಲಿ ಪ್ರತ್ಯೇಕವಾದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: Weather Today: ಕರ್ನಾಟಕದ ಹಲವೆಡೆ ಇಂದು, ನಾಳೆ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ
Rain Updates: ಮಧ್ಯಪ್ರದೇಶ, ಗುಜರಾತ್, ಮಹಾರಾಷ್ಟ್ರದಲ್ಲಿ ಇನ್ನೆರಡು ದಿನ ವ್ಯಾಪಕ ಮಳೆ; ಹಳದಿ ಅಲರ್ಟ್ ಘೋಷಣೆ