Karnataka Rains: ಕರ್ನಾಟಕದಾದ್ಯಂತ ಭಾರಿ ಮಳೆಯ ಮುನ್ಸೂಚನೆ, 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ ನಿರೀಕ್ಷೆ ಇದೆ. ರಾಜ್ಯದ 19ಕ್ಕೂ ಅಧಿಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಗೋಷಿಸಲಾಗಿದ್ದು, ಮುಂದಿನ ಒಂದು ವಾರಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rains: ಕರ್ನಾಟಕದಾದ್ಯಂತ ಭಾರಿ ಮಳೆಯ ಮುನ್ಸೂಚನೆ, 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಮಳೆImage Credit source: Financial Express
Follow us
|

Updated on: Aug 18, 2024 | 8:11 AM

ಕರ್ನಾಟಕದಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, 19ಕ್ಕೂ ಅಧಿಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಭಾರಿ ಮಳೆಯಾಗಲಿದೆ.

ಕುಷ್ಟಗಿ, ಹುಣಸಗಿ, ಲಿಂಗಸುಗೂರು, ಕುಕನೂರು, ಕಕ್ಕೇರಿ, ಕೊಟ್ಟೂರು, ಮಧುಗಿರಿ, ಇಂಡಿ, ಮುನಿರಾಬಾದ್​ನಲ್ಲಿ ಹೆಚ್ಚು ಮಳೆಯಾಗಿದೆ. ಗೇರುಸೊಪ್ಪ, ಇಳಕಲ್, ಕುರ್ಡಿ, ಸಿರಾ, ಕ್ಯಾಸಲ್​ರಾಕ್, ಭಾಲ್ಕಿ, ಮಾಗಡಿ, ಶ್ರವಣಬೆಳಗೊಳ, ಪರಶುರಾಂಪುರ, ಕೊಪ್ಪ, ಹಗರಿಬೊಮ್ಮನಹಳ್ಳಿ, ಹೊಸಪೇಟೆ, ಯಲ್ಲಾಪುರ, ಮಂಡರಗಿ, ಖಜೂರಿ, ಚಿಕ್ಕಮಗಳೂರಿನಲ್ಲಿ ಮಳೆಯಾಗಿದೆ.

ಮುದ್ದೇಬಿಹಾಳ, ಜಯಪುರ, ನಾಪೋಕ್ಲು, ಧರ್ಮಸ್ಥಳ, ಹಾವೇರಿ, ರೋಣ, ಕವಡಿಮಟ್ಟಿ, ಶಿರಹಟ್ಟಿ, ಗಂಗಾವತಿ, ಕುಡತಿನಿ, ಮಿಡಿಗೇಶಿ, ಹೊಸಕೋಟೆ, ಬರಗೂರು, ಸಂಡೂರು, ಕಮ್ಮರಡಿ, ಮಂಕಿ, ಹುಮನಾಬಾದ್, ಸೇಡಂನಲ್ಲಿ ಮಳೆಯಾಗಿದೆ. ಮಾನ್ವಿ, ಪೊನ್ನಂಪೇಟೆ, ಗೋಕರ್ಣ, ತಾಳಿಕೋಟೆ, ದೇವರಹಿಪ್ಪರಗಿ, ಜೋಯಿಡಾ, ಹಳಿಯಾಳ, ಬಾದಾಮಿ, ಕೂಡಲಸಂಗಮ, ವಿಜಯಪುರ, ಗಬ್ಬೂರು, ಗದಗ, ಬೀದರ್, ಲಕ್ಷ್ಮೇಶ್ವರ, ಅಣ್ಣಿಗೆರೆ, ದೊಡ್ಡಬಳ್ಳಾಪುರ, ಚನ್ನರಾಯಪಟ್ಟಣ, ಬಳ್ಳಾರಿ, ಚನ್ನಗಿರಿ, ಕಳಸ, ಮೂಡಿಗೆರೆ, ಚಿತ್ರದುರ್ಗದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್, ಎರಡು ದಿನ ಭಾರಿ ಮಳೆ​

ಬೆಂಗಳೂರಿನಲ್ಲಿ ಮೋಎಕವಿದ ವಾತಾವರಣವಿದ್ದು, ಮಳೆಯಾಗುವ ನಿರೀಕ್ಷೆ ಇದೆ. ಎಚ್​ಎಎಲ್​ನಲ್ಲಿ 31.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.7ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 31.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 30.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 31.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 34.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ