ರಾಜ್ಯಾದ್ಯಂತ ಕಳೆದ 15 ದಿನಗಳಿಂದ ಮಳೆಯಾಗುತ್ತಿದೆ. ಜೂನ್ 7 ರಿಂದ ಮುಂಗಾರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತಮ ಮಳೆಯಾಗುತ್ತಿರುವುದರಿಂದ ಜಲಾಶಯಗಳಿಗೆ ಒಳಹರಿವು ದಿನದಿಂದ ದಿನಕ್ಕೆ ಅಲ್ಪ ಪ್ರಮಾಣದಲ್ಲಿ ಹೆಚ್ಚುತ್ತಿದೆ. ಆಲಮಟ್ಟಿ, ಘಟಪ್ರಭಾ ಜಾಲಾಶಯಗಳಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷ ಅಧಿಕ ನೀರು ಸಂಗ್ರಹವಾಗಿದೆ. ಹಾಗಾದರೆ ಕೆಆರ್ಎಸ್ ಆಲಮಟ್ಟಿ, ಭದ್ರಾ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ರಾಜ್ಯದ 12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಮೇ 21 ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇaದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಜಲಾಶಯಗಳ ನೀರಿನ ಮಟ್ಟ | ||||||
ಕರ್ನಾಟಕದ ಪ್ರಮುಖ ಜಲಾಶಯಗಳು (Dam) | ಗರಿಷ್ಠ ನೀರಿನ ಮಟ್ಟ (ಮೀ) | ಒಟ್ಟು ಸಾಮರ್ಥ್ಯ (ಟಿಎಂಸಿ) | ಇಂದಿನ ನೀರಿನ ಮಟ್ಟ (ಟಿಎಂಸಿ) | ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) | ಹೊರಹರಿವು (ಕ್ಯೂಸೆಕ್ಸ್) |
ಆಲಮಟ್ಟಿ ಜಲಾಶಯ (Almatti Dam) | 519.60 | 123.08 | 23.77 | 23.36 | 0 | 4421 |
ತುಂಗಭದ್ರಾ ಜಲಾಶಯ (Tungabhadra Dam) | 497.71 | 105.79 | 3.39 | 3.97 | 0 | 45 |
ಮಲಪ್ರಭಾ ಜಲಾಶಯ (Malaprabha Dam) | 633.80 | 37.73 | 7.25 | 9.33 | 0 | 194 |
ಕೆ.ಆರ್.ಎಸ್ (KRS Dam) | 38.04 | 49.45 | 11.11 | 13.07 | 1416 | 270 |
ಲಿಂಗನಮಕ್ಕಿ ಜಲಾಶಯ (Linganamakki Dam) | 554.44 | 151.75 | 16.18 | 21.22 | 0 | 1691 |
ಕಬಿನಿ ಜಲಾಶಯ (Kabini Dam) | 696.13 | 19.52 | 6.20 | 4.64 | 91 | 300 |
ಭದ್ರಾ ಜಲಾಶಯ (Bhadra Dam) | 657.73 | 71.54 | 13.56 | 26.59 | 1347 | 375 |
ಘಟಪ್ರಭಾ ಜಲಾಶಯ (Ghataprabha Dam) | 662.91 | 51.00 | 13.13 | 7.87 | 0 | 140 |
ಹೇಮಾವತಿ ಜಲಾಶಯ (Hemavathi Dam) | 890.58 | 37.10 | 9.14 | 17.40 | 628 | 250 |
ವರಾಹಿ ಜಲಾಶಯ (Varahi Dam) | 594.36 | 31.10 | 4.19 | 2.83 | 0 | 0 |
ಹಾರಂಗಿ ಜಲಾಶಯ (Harangi Dam) | 871.38 | 8.50 | 2.95 | 2.65 | 287 | 200 |
ಸೂಫಾ (Supa Dam) | 564.00 | 145.33 | 36.47 | 46.92 | 297 | 765 |
ಮುಂದಿನ ಏಳು ದಿನಗಳಲ್ಲಿ ರಾಜ್ಯಾದ್ಯಂತ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮೇ 23 ಮತ್ತು 24 ರಂದು ಕರಾವಳಿ ಕರ್ನಾಟಕದಲ್ಲಿ ಮತ್ತು ಮೇ 22 ಮತ್ತು 23 ರಂದು ದಕ್ಷಿಣ ಒಳನಾಡಿನಲ್ಲಿ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ