Karnataka Rains: ಬೆಂಗಳೂರು, ಕರಾವಳಿ ಸೇರಿದಂತೆ ಹಲವೆಡೆ ಆಗಸ್ಟ್ 12ರವರೆಗೆ ಭಾರಿ ಮಳೆ

ಕರ್ನಾಟಕದ ಕರಾವಳಿಯಲ್ಲಿ ಮಳೆಯಾರ ಕೊಂಚ ಬಿಡುವು ಪಡೆದಿದ್ದಾನೆ. ಕಳೆದ ಒಂದು ತಿಂಗಳಿನಿಂದ ಧಾರಾಕಾರವಾಗಿ ಸುರಿಯುತ್ತಿದ್ದ ಮಳೆ ಈಗ ಬೆಂಗಳೂರು ಕಡೆಗೆ ಶಿಫ್ಟ್​ ಆದಂತಿದೆ. ಮಲೆನಾಡು ಹಾಗೂ ಕರಾವಳಿಯಲ್ಲಿ ಮಳೆ ಕಡಿಮೆಯಾದಂತೆ ಬೆಂಗಳೂರಿನಲ್ಲಿ ಹೆಚ್ಚಾಗುತ್ತಿದೆ.

Karnataka Rains: ಬೆಂಗಳೂರು, ಕರಾವಳಿ  ಸೇರಿದಂತೆ ಹಲವೆಡೆ ಆಗಸ್ಟ್ 12ರವರೆಗೆ ಭಾರಿ ಮಳೆ
ಮಳೆ
Image Credit source: Times Of India

Updated on: Aug 06, 2024 | 7:40 AM

ಬೆಂಗಳೂರಿನಲ್ಲಿ ಸೋಮವಾರದಿಂದ ಮಳೆ ಆರಂಭವಾಗಿದೆ. ಇಂದಿನಿಂದ ಆಗಸ್ಟ್​ 12ರವರೆಗೂ ರಾಜ್ಯದ ಬಹುತೇಕ ಕಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ,ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಕುಂದಾಪುರ, ಹೊನ್ನಾವರ, ಗೇರುಸೊಪ್ಪ, ಶಿರಾಲಿ, ಕದ್ರಾ, ಉಡುಪಿ, ಕ್ಯಾಸಲ್​ರಾಕ್, ಆಗುಂಬೆ, ಸಿದ್ದಾಪುರ, ಕುಮಟಾ, ಕೋಟ, ಗೋಕರ್ಣ, ಲಿಂಗನಮಕ್ಕಿ, ಕಾರವಾರ, ಕಾರ್ಕಳ, ಶೃಂಗೇರಿ, ಯಲ್ಲಾಪುರ, ಬೆಳ್ತಂಗಡಿ, ಉಪ್ಪಿನಂಗಡಿ, ಸಿದ್ದಾಪುರ, ಜಯಪುರದಲ್ಲಿ ಮಳೆಯಾಗಿದೆ.
ಆನವಟ್ಟಿ, ಪುತ್ತೂರು, ಮುಂಡಗೋಡು, ಮಾಣಿ, ಹಾವೇರಿ, ಔರಾದ್, ಹುಂಚದಕಟ್ಟೆ, ಕೊಪ್ಪ, ಬಾಳೆಹೊನ್ನೂರಿನಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದಾದ್ಯಂತ ಇಂದಿನಿಂದ ಮಳೆಯ ಅಬ್ಬರ ಕೊಂಚ ಕಡಿಮೆ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಇಂದು ಸಂಜೆ ವೇಳೆಗೆ ಮಳೆಯಾಗುವ ನಿರೀಕ್ಷೆ ಇದೆ. ಎಚ್​ಎಎಲ್​ನಲ್ಲಿ 29.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹೊನ್ನಾವರದಲ್ಲಿ 26.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 28.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 27.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ28.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 28.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 28.5 -ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 31.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us