Karnataka Rain: ಕರ್ನಾಟಕದಾದ್ಯಂತ ಇಂದು ಗುಡುಗು ಸಹಿತ ಮಳೆ ಸಾಧ್ಯತೆ; ಮೇ 5ರಿಂದ ಇನ್ನೂ ಹೆಚ್ಚಲಿದೆ ವರುಣನ ಅಬ್ಬರ

Karnataka Weather Today: ಮೇ 5ರಿಂದ ಕರಾವಳಿ ಹಾಗೂ ಉತ್ತರ ಒಳನಾಡಿಗಿಂತ ದಕ್ಷಿಣ ಒಳನಾಡಿನಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದೆ. ಕರ್ನಾಟಕದಾದ್ಯಂತ ಹಲವೆಡೆ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

Karnataka Rain: ಕರ್ನಾಟಕದಾದ್ಯಂತ ಇಂದು ಗುಡುಗು ಸಹಿತ ಮಳೆ ಸಾಧ್ಯತೆ; ಮೇ 5ರಿಂದ ಇನ್ನೂ ಹೆಚ್ಚಲಿದೆ ವರುಣನ ಅಬ್ಬರ
ಕರ್ನಾಟಕದಲ್ಲಿ ಮಳೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: May 03, 2022 | 5:58 AM

ಬೆಂಗಳೂರು: ಕರ್ನಾಟಕದಲ್ಲಿ ಮಳೆಯ (Rain in Karnataka) ಆರ್ಭಟ ಹೆಚ್ಚಾಗುತ್ತಿದೆ. ಮುಂದಿನ ತಿಂಗಳಿನಿಂದ ಮಾನ್ಸೂನ್ (Monsoon) ಶುರುವಾಗುವ ಹಿನ್ನೆಲೆಯಲ್ಲಿ ಈಗಾಗಲೇ ಬೆಂಗಳೂರು, ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ವರುಣನ ಆರ್ಭಟ ಹೆಚ್ಚಾಗಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ಕರ್ನಾಟಕದ ಹಲವೆಡೆ 2 ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಇನ್ನೆರಡು ದಿನಗಳ ಕಾಲ ರಾಜ್ಯಾದ್ಯಂತ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ಕೊಟ್ಟಿದೆ. ಕರ್ನಾಟಕದಾದ್ಯಂತ ಹಲವೆಡೆ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಮೇ 5ರ ನಂತರ ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವಡೆ ಸಾಧಾರಣ ಮಳೆಯಾದರೆ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ. ಮೇ 5ರಿಂದ ಕರಾವಳಿ ಹಾಗೂ ಉತ್ತರ ಒಳನಾಡಿಗಿಂತ ದಕ್ಷಿಣ ಒಳನಾಡಿನಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದೆ. ಭಾನುವಾರ ಬೆಂಗಳೂರಿನಲ್ಲಿ ಸುರಿದ ಆಲಿಕಲ್ಲು, ಗುಡುಗು, ಮಿಂಚು ಸಹಿತ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿತ್ತು. ಮೇ 5ರಿಂದ ಬೆಂಗಳೂರಿನಲ್ಲಿ ಮತ್ತೆ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ.

ಕರ್ನಾಟಕ ಮಾತ್ರವಲ್ಲದೆ ಇಂದು ಅಸ್ಸಾಂ ಮತ್ತು ಮೇಘಾಲಯ ಮತ್ತು ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾ ಮತ್ತು ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಗುಡುಗು ಸಹಿತ ವ್ಯಾಪಕ ಮಳೆ ಅಥವಾ ಹಿಮ ಬೀಳುವ ಸಾಧ್ಯತೆ ಇದೆ.

ಮಳೆ ಕುರಿತ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಾಗೇ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಪಶ್ಚಿಮ ಬಂಗಾಳ, ಉತ್ತರಾಖಂಡ ಮತ್ತು ಕೇರಳ ಮತ್ತು ಮಾಹೆಯಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಜಾರ್ಖಂಡ್, ಬಿಹಾರ, ಹಿಮಾಚಲ ಪ್ರದೇಶ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗುವ ಸಾಧ್ಯತೆ ಇದೆ. ಒಡಿಶಾ, ಉತ್ತರ ಪ್ರದೇಶ, ಹರಿಯಾಣ, ಚಂಡೀಗಢ ಮತ್ತು ದೆಹಲಿ, ಪಂಜಾಬ್, ರಾಜಸ್ಥಾನ, ಪೂರ್ವ ಮಧ್ಯಪ್ರದೇಶ, ಮಹಾರಾಷ್ಟ್ರ, ಛತ್ತೀಸ್‌ಗಢ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಒಡಿಶಾ, ಜಾರ್ಖಂಡ್, ಉತ್ತರ ಪ್ರದೇಶ, ಹರಿಯಾಣ, ಪಂಜಾಬ್, ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್, ಮಹಾರಾಷ್ಟ್ರ, ಛತ್ತೀಸ್‌ಗಢ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ಮತ್ತು ಕರ್ನಾಟಕದ ಕೆಲವು ಸ್ಥಳಗಳಲ್ಲಿ ಗರಿಷ್ಠ ತಾಪಮಾನವು 40 ಸೆಲ್ಸಿಯಸ್​ಗಿಂತ ಹೆಚ್ಚಾಗುವ ಸಾಧ್ಯತೆಯಿದೆ.

ಬೆಂಗಳೂರು: ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಬ್ಯಾಡ್ ಟಚ್, ವಿಡಿಯೋ ವೈರಲ್
ಬೆಂಗಳೂರು: ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಬ್ಯಾಡ್ ಟಚ್, ವಿಡಿಯೋ ವೈರಲ್
ಶಿಶುವನ್ನು ವಾಪಸ್ಸು ಪಡೆದ ತಂದೆತಾಯಿಗಳ ಸಂತೋಷಕ್ಕೆ ಪಾರವೇ ಇಲ್ಲ!
ಶಿಶುವನ್ನು ವಾಪಸ್ಸು ಪಡೆದ ತಂದೆತಾಯಿಗಳ ಸಂತೋಷಕ್ಕೆ ಪಾರವೇ ಇಲ್ಲ!
ಮುಸ್ಲಿಮರಿಗೆ ಮತದಾನದ ಹಕ್ಕು: ಸ್ವಾಮೀಜಿ ಹೇಳಿಕೆಗೆ ಮಹದೇವಪ್ಪ ಗರಂ
ಮುಸ್ಲಿಮರಿಗೆ ಮತದಾನದ ಹಕ್ಕು: ಸ್ವಾಮೀಜಿ ಹೇಳಿಕೆಗೆ ಮಹದೇವಪ್ಪ ಗರಂ
ಮೋಕ್ಷಿತಾ ಈಗ ಯುವರಾಣಿ; ಇಬ್ಭಾಗವಾದ ಬಿಗ್ ಬಾಸ್ ಮನೆ
ಮೋಕ್ಷಿತಾ ಈಗ ಯುವರಾಣಿ; ಇಬ್ಭಾಗವಾದ ಬಿಗ್ ಬಾಸ್ ಮನೆ
6,6,6,6,6: RCB ಆಟಗಾರ ಲಿಯಾಮ್ ಲಿವಿಂಗ್​ಸ್ಟೋನ್ ಸಿಡಿಲಬ್ಬರ ಶುರು
6,6,6,6,6: RCB ಆಟಗಾರ ಲಿಯಾಮ್ ಲಿವಿಂಗ್​ಸ್ಟೋನ್ ಸಿಡಿಲಬ್ಬರ ಶುರು
Daily Devotional: ಪುಣ್ಯಕ್ಷೇತ್ರಗಳಿಗೆ ತೆರಳುವಾಗ ಅಪಘಾತವಾದರೆ ಏನರ್ಥ
Daily Devotional: ಪುಣ್ಯಕ್ಷೇತ್ರಗಳಿಗೆ ತೆರಳುವಾಗ ಅಪಘಾತವಾದರೆ ಏನರ್ಥ
Daily Horoscope: ಈ ರಾಶಿಯವರ ವ್ಯಾಪಾರದ ತೊಂದರೆಗಳು ನಿವಾರಣೆಯಾಗುತ್ತದೆ
Daily Horoscope: ಈ ರಾಶಿಯವರ ವ್ಯಾಪಾರದ ತೊಂದರೆಗಳು ನಿವಾರಣೆಯಾಗುತ್ತದೆ
ಹನುಮಂತನೊಟ್ಟಿಗೆ ಜಗಳ, ಮಹಾಪ್ರಭುಗಳ ಆಜ್ಞೆಯನ್ನೂ ಧಿಕ್ಕರಿಸಿದ ಶೋಭಾ ಶೆಟ್ಟಿ
ಹನುಮಂತನೊಟ್ಟಿಗೆ ಜಗಳ, ಮಹಾಪ್ರಭುಗಳ ಆಜ್ಞೆಯನ್ನೂ ಧಿಕ್ಕರಿಸಿದ ಶೋಭಾ ಶೆಟ್ಟಿ
ಸರ್ಕಾರದ ಎಲ್ಲ ಹಗರಣಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ: ಅಶೋಕ
ಸರ್ಕಾರದ ಎಲ್ಲ ಹಗರಣಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ: ಅಶೋಕ
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್